ನಮ್ಮ ಬಗ್ಗೆ

ನಮ್ಮ ಬಗ್ಗೆ – About Us

ಈ ಜಾಲತಾಣವು ಸಮಾಜದ ಎಲ್ಲ ವರ್ಗದವರಿಗೆ ವಿವಿಧ ರೀತಿಯ ಉಪಯುಕ್ತ ವಿಷ್ಯ, ಮಾಹಿತಿಗಳನು ತಿಳಿಸಲು ಹಾಗು ಸಾಮಾನ್ಯ ಜ್ಞಾನವನ್ನು ಹೆಚ್ಚಿಸುವ

ಸಾಮಾಜಿಕ ಮಾಧ್ಯಮ

ಅಶ್ವತ್ಥ ( ಅರಳಿ ) ಮರ ಕಿರು ಮಾಹಿತಿ

——————————–
🍃 ಅಶ್ವತ್ಥಮರದಲ್ಲಿ ಭಗವಂತನು ಹಯಗ್ರೀಯ ರೂಪದಿಂದ ವಿಶೇಷವಾಗಿ ಅಭಿವ್ಯಕ್ತನಾಗಿ ಈ ಮರವು ಉಳಿದೆಲ್ಲಾ ಮರಗಳಿಗಿಂತ ಹೆಚ್ಚು ಯೋಗ್ಯವೆಂದು ತೋರಿಸುತ್ತಾನೆ .

🍃ಅಶ್ವತ್ಥ ವೃಕ್ಷದ ಮಧ್ಯಭಾಗದಲ್ಲಿ ವಿಷ್ಣು, ತುದಿಯಲ್ಲಿ ರುದ್ರ, ಮೂಲಭಾಗದಲ್ಲಿ ಬ್ರಹ್ಮ ದೇವರು ನೆಲೆಸಿರುವರು.

🍃 ಅಶ್ವತ್ಥಮರದ ದರ್ಶನ ಪಾಪನಾಶಕ,  ಸ್ಪರ್ಶ ಶ್ರೀಕಾರಕ , ಪ್ರದಕ್ಷಿಣೆ ಆಯುಷ್ಯಕಾರಕ ಎಂದು ಪದ್ಮ ಪುರಾಣ ಹೇಳುತ್ತದೆ.

🍃 ಪ್ರತಿದಿನ ಈ ವೃಕ್ಷದ ಸ್ಪರ್ಶ ನಿಷಿದ್ಧ ಶನಿವಾರದಂದು ಮಾತ್ರ ಸ್ಪರ್ಶಿಸಬೇಕೆಂದು ಧರ್ಮಶಾಸ್ತ್ರಗಳು ವಿಧಿಸುತ್ತವೆ.

🍃ಸಂಧ್ಯಾಕಾಲದಲ್ಲಿ ಸೂರ್ಯಾಸ್ತವಾದ ಮೇಲೆ ಪ್ರದಕ್ಷಿಣೆ ಮಾಡಬಾರದು ಎಂದು ಪದ್ಮಪುರಾಣ ಹೇಳುತ್ತದೆ

  ರಥ ಸಪ್ತಮಿ ಶ್ಲೋಕ ವಿವರ

🍃ಏಳು ಪ್ರದಕ್ಷಿಣೆ ಮಾಡಿದರೆ 10,000 ಗೋದಾನ ಮಾಡಿದಷ್ಟು ಪುಣ್ಯ ಲಭಿಸುತ್ತದೆ. ಬೇರೆ ಯಾವ ವೃಕ್ಷವು ಇಷ್ಟು ಪುಣ್ಯಪ್ರದವಲ್ಲ.

🍃 ಅಶ್ವತ್ಥ ಮರವನ್ನು ನೆಟ್ಟರೆ ಮೂರು ಸಂಪಿಗೆ ಮತ್ತು ಎಕ್ಕೆಗಿಡ, ಏಳು ಆಲದಮರ , ಎಂಟು ಬಿಲ್ವಪತ್ರೆಗಿಡ , ಮತ್ತು ನಿಂಬೆಮರ ನೆಟ್ಟಷ್ಟು  ಫಲ.

🍃 ಜಲಾಶಯ , ನದಿ ಸಮೀಪದಲ್ಲಿ ಅಶ್ವತ್ಥಮರವನ್ನು ನೆಟ್ಟರೆ ಪಿತೃಗಳಿಗೆ ಬಹಳ ತೃಪ್ತಿಯಾಗುತ್ತದೆ. ಅದರ ಎಲೆಗಳು ಪರ್ವಕಾಲದಲ್ಲಿ ನೀರಿನಲ್ಲಿ ಬಿದ್ದಾಗಲೆಲ್ಲಾ ಪಿಂಡ ಸಮಾನವಾಗಿ ಪಿತೃಗಳಿಗೆ ಅಕ್ಷಯಲೋಕಗಳನ್ನು ಕೊಡುತ್ತದೆ.

🌺ಇದೊಂದು ಕಿರು ಮಾಹಿತಿ 🌺

Leave a Reply

Your email address will not be published. Required fields are marked *

Translate »