ನಮ್ಮ ಬಗ್ಗೆ

ನಮ್ಮ ಬಗ್ಗೆ – About Us

ಈ ಜಾಲತಾಣವು ಸಮಾಜದ ಎಲ್ಲ ವರ್ಗದವರಿಗೆ ವಿವಿಧ ರೀತಿಯ ಉಪಯುಕ್ತ ವಿಷ್ಯ, ಮಾಹಿತಿಗಳನು ತಿಳಿಸಲು ಹಾಗು ಸಾಮಾನ್ಯ ಜ್ಞಾನವನ್ನು ಹೆಚ್ಚಿಸುವ

ಸಾಮಾಜಿಕ ಮಾಧ್ಯಮ

ಯಾವ ಕಾರಣಕ್ಕಾಗಿ ಯಾವ ಶಾಂತಿಯನ್ನು ಮಾಡ ಬೇಕು ?

ಶಾಂತಿಗಳು:..!

ಪ್ರತ್ಯೇಕ ವ್ಯಕ್ತಿಗಾಗಿ ಮಾಡುವ ವೈದಿಕ ಪೂಜಾ ವಿಧಾನಕ್ಕೆ ಶಾಂತಿ ಎನ್ನುತ್ತಾರೆ. ಯಾವ ಕಾರಣಕ್ಕಾಗಿ ಯಾವ ಶಾಂತಿಯನ್ನು ಮಾಡ ಬೇಕು? ಮಗುವಿನ ಜನನ ಕಾಲದಲ್ಲಿ ನಾನಾ ವಿಧ ದೋಷಾದಿಗಳು ಬರುತ್ತವೆ. ಇದನ್ನು ಗುರುಗಳ ಮುಖೇನ ತಿಳಿದು ಬಂದಿರುವ ದೋಷ ನಿವಾರಣೆಗೆ ಶಾಂತ್ಯಾದಿಗಳನ್ನು ಮಾಡಿ ಕೊಳ್ಳ ಬೇಕು.

೧. ಕೃಷ್ಣ ಚತುರ್ದಶಿ ಜನನ ಶಾಂತಿ: ಮಗು ಕೃಷ್ಣ ಪಕ್ಷದ ಚತುರ್ದಶಿಯ ದಿನ ಜನನವಾದಲ್ಲಿ ಅನೇಕವಾದ ಅನಿಷ್ಠ ಫಲಗಳು ಬರುತ್ತದೆ. ಚತುರ್ದಶಿ ತಿಥಿಯ ಕಾಲವನ್ನು ಆರು ಭಾಗ ಮಾಡಿ; ಒಂದನೇಯ ಭಾಗವನ್ನು ಶುಭ ಎಂತಲೂ, ಎರಡನೇಯ ಭಾಗವನ್ನು ತಂದೆಗೆ ಅನಿಷ್ಠ ಎಂತಲೂ,ಮೂರನೇಯ ಭಾಗವನ್ನು ತಾಯಿಗೆ ಅನಿಷ್ಠ ಎಂತಲೂ, ನಾಲ್ಕನೇಯ ಭಾಗವನ್ನು ಮಾವನಿಗೆ ಅನಿಷ್ಠ ಎಂದೂ, ಐದನೇಯ ಭಾಗವನ್ನು ವಂಶನಾಶ ಎಂತಲೂ,ಆರನೇಯ ಭಾಗವನ್ನು ಧನಹಾನಿ ಎಂದೂ ಶಾಸ್ತ್ರದಲ್ಲಿ ಹೇಳಿದೆ.

೨. ಸಿನೀವಾಲೀ- ಕುಹೂ ಜನನ ಶಾಂತಿ: ಮಗುವು ಅಮಾವಾಸ್ಯೆಯ ದಿನದಂದು ಜನಿಸಿದಲ್ಲಿ, ಅಮಾವಾಸ್ಯೆಯ ಪರಮ ಘಟಿಯನ್ನು ೮ ಭಾಗವನ್ನು ಮಾಡಿ ಪ್ರಥಮ ಭಾಗ ಜನನಕ್ಕೆ ಸಿನೀವಾಲೀ, ಅಷ್ಟಮ ಭಾಗಕ್ಕೆ ಕುಹೂ ಜನನ ಎಂದೂ ಕರೆಯುತ್ತಾರೆ. ಈ ಜನನದಲ್ಲಿ ಬರುವ ದೋಷ ನಿವಾರಣೆಗೆ ಶಾಂತ್ಯಾದಿಗಳನ್ನು ಮಾಡಿಸಿ ಕೊಳ್ಳ ಬೇಕು.

೩. ದರ್ಶ ಜನನ ಶಾಂತಿ: ಅಮಾವಾಸ್ಯೆ ತಿಥಿಯ ಪರಮ ಘಟಿಯನ್ನು ಭಾಗವನ್ನಾಗಿ ಮಾಡಿದಾಗ ೨ನೇಯ ಭಾಗದಿಂದ ೬ನೇ ಭಾಗದವರೆಗೆ ಹುಟ್ಟಿದ ಮಗುವಿಗೆ ಬರುವ ದೋಷ ನಿವಾರಣೆಗೆ ದರ್ಶ ಜನನ ಶಾಂತಿ ಅಥವಾ ಅಮಾವಾಸ್ಯೆ ಜನನ ಶಾಂತಿ ಮಾಡಿಸಿ ಕೊಳ್ಳ ಬೇಕು.

೪. ಸೂರ್ಯ ಸಂಕ್ರಾಂತಿ ಜನನ ಶಾಂತಿ ಮತ್ತು ವ್ಯತಿಪಾತ, ವೈದ್ರತಿ, ಅತೀಗಂಡ, ಗಂಡಯೋಗ ಜನನ ಶಾಂತಿ

೫. ಆಶ್ಲೇಷಾ ಜನನ ಶಾಂತಿ: ಮಗುವು ಆಶ್ಲೇಷಾ ನಕ್ಷತ್ರ ಇರುವ ಸಮಯದಲ್ಲಿ ಜನಿಸಿದರೆ ದೋಷಾದಿಗಳ ನಿವಾರಣೆಗೆ ಶಾಂತಿಗಳನ್ನು ಮಾಡಿಸಿ ಕೊಳ್ಳ ಬೇಕು. ಮೊದಲನೇ ಪಾದ ಜನನಕ್ಕೆ ಶುಭ ಫಲ, ದ್ವಿತೀಯ ಪಾದ ಜನನಕ್ಕೆ ಧನನಾಶ, ತೃತೀಯ ಪಾದ ಜನನಕ್ಕೆ ತಾಯಿಗೆ ಅನಿಷ್ಠ.

೬. ಜ್ಯೇಷ್ಠ ನಕ್ಷತ್ರ ಜನನ ಶಾಂತಿ: ಮಗುವು ಜ್ಯೇಷ್ಠ ನಕ್ಷತ್ರ ಇರುವ ಸಮಯದಲ್ಲಿ ಜನಿಸಿದರೆ ದೋಷಾದಿಗಳ ನಿವಾರಣೆಗೆ ಶಾಂತಿಗಳನ್ನು ಮಾಡಿಸಿ ಕೊಳ್ಳ ಬೇಕು. ವಿಶೇಷತಃ ೪ನೇ ಪಾದದಲ್ಲಿ ಜನಿಸಿದರೆ ತಂದೆ- ತಾಯಿಗೆ ಅನಿಷ್ಠ.

೭. ಮೂಲಾ ನಕ್ಷತ್ರ ಜನನ ಶಾಂತಿ: ಮಗುವು ಮೂಲಾ ನಕ್ಷತ್ರ ಇರುವ ಸಮಯದಲ್ಲಿ ಜನಿಸಿದರೆ ಪಾದಕ್ಕೆ ಅನುಗುಣವಾಗಿ ಶಾಂತಿಯನ್ನು ಮಾಡಿಕೊಳ್ಳಬೇಕು

೮. ಗ್ರಹಣ ಜನನ ಶಾಂತಿ: ಮಗುವು ಸೂರ್ಯ ಅಥವಾ ಚಂದ್ರ ಗ್ರಹಣ ಕಾಲದಲ್ಲಿ ಜನಿಸಿದರೆ ದೋಷ ನಿವಾರಣೆಗೆ ಶಾಂತ್ಯಾದಿಗಳನ್ನು ಮಾಡಿಸಿ ಕೊಳ್ಳ ಬೇಕು.

೯. ಏಕ ನಕ್ಷತ್ರ ಜನನ ಶಾಂತಿ: ತಾಯಿ, ತಂದೆ, ಅಣ್ಣ-ತಮ್ಮ ಎಲ್ಲರ ನಕ್ಷತ್ರ ಒಂದೇ ಆದಲ್ಲಿ ಈ ಶಾಂತಿಯನ್ನು ಮಾಡಿಸಿ ಕೊಳ್ಳ ಬೇಕು.

೧೦. ವಿಷ ಘಟಿ ಜನನ ಶಾಂತಿ: ಮಗುವು ವಿಷ ನಾಡಿಯಲ್ಲಿ ಜನಿಸಿದರೆ ಸರ್ವರಿಷ್ಠ. ಆದ್ದರಿಂದ ಈ ಶಾಂತಿಯನ್ನು ಮಾಡಿಸಿ ಕೊಳ್ಳ ಬೇಕು.

೧೧. ತ್ರಿಕ ಪ್ರಸವ ಶಾಂತಿ: ತಾಯಿಗೆ ಏಕ ಕಾಲದಲ್ಲಿ ಮೂರು ಮಗುವಿನ ಜನನವಾದರೆ ಈ ಶಾಂತಿಯನ್ನು ಮಾಡಿಸಿ ಕೊಳ್ಳ ಬೇಕು.

೧೨. ಭದ್ರಾ ಜನನ ಶಾಂತಿ: ಭದ್ರಾ ಯೋಗದಲ್ಲಿ ಜನಿಸಿದ ಮಗುವಿಗೆ ಈ ಶಾಂತಿಯನ್ನು ಮಾಡಿಸಿ ಕೊಳ್ಳ ಬೇಕು.

೧೩. ಅಧೋಮುಖ ಜನನ ಶಾಂತಿ: ಮಗು ಜನಿಸಿವಾಗ ಕೆಳಮುಖವಾಗಿ ಜನಿಸಿದರೆ ಈ ಶಾಂತಿಯನ್ನು ಮಾಡಿಸಿ ಕೊಳ್ಳ ಬೇಕು.

  ಮೂಡುಗಟ್ಟಿನ ಗಿಡ

೧೪. ಸದಂತ ಜನನ ಶಾಂತಿ: ಮಗು ಹುಟ್ಟಿದಾಗಲೇ ಹಲ್ಲು ಇದ್ದರೆ ಬರುವ ದೋಷ ನಿವಾರಣೆಗಾಗಿ ಈ ಶಾಂತಿಯನ್ನು ಮಾಡಿಸಿ ಕೊಳ್ಳ ಬೇಕು.

೧೫. ಯಮಳ ಜನನ ಶಾಂತಿ: ಏಕ ಕಾಲದಲ್ಲಿ ಎರಡು ಮಗುವಿನ ಜನನವಾದಲ್ಲಿ ದೋಷ ನಿವಾರಣೆಗಾಗಿ ಈ ಶಾಂತಿಯನ್ನು ಮಾಡಿಸಿ ಕೊಳ್ಳ ಬೇಕು.

೧೬. ಪ್ರಸವ ವೈಕ್ರತಿ ಜನನ ಶಾಂತಿ: ಮಗು ಜನಿಸುವಾಗ ಅಂಗ ವಿಕಲವಿದ್ದಲ್ಲಿ ಈ ಶಾಂತಿಯನ್ನು ಮಾಡಿಸಿ ಕೊಳ್ಳ ಬೇಕು.

೧೭. ದಿನ ಕ್ಷಯ, ವ್ಯತಿಪಾತ ಯೋಗಾದಿ ಜನನ ಶಾಂತಿ.

೧೮. ಬಾಲಾರಿಷ್ಠ ಜನನ ಶಾಂತಿ: ಮಗು ಜನಿಸಿದಾಗ ಜನ್ಮದಲ್ಲಿ ರವಿ, ಕುಜ, ಶನಿ, ರಾಹು, ಕೇತುಗಳು ವಿಷಮ ಸ್ಥಿತವಾದಲ್ಲಿ ವಿಪರೀತ ಕಷ್ಟಗಳನ್ನು ಕೊಡುತ್ತದೆ. ಈ ಕಷ್ಟಗಳ ನಿವಾರಣೆಗಾಗಿ ಈ ಶಾಂತಿಯನ್ನು ಮಾಡಿಸಿ ಕೊಳ್ಳ ಬೇಕು. ಈ ಶಾಂತಿಯನ್ನು ಮಗುವಿನ ಜನ್ಮದ ನಂತರದ ೧೨ನೆ ದಿನದ ಮೇಲೆ ಮಗು ಚಿಕ್ಕದಿದ್ದಾಗಲೆ ಮಾಡಿಸಿ ಕೊಳ್ಳುವುದು ಒಳ್ಳೆಯದು.

೧೯. ಬಾಲಗ್ರಹ ಶಾಂತಿ: ಮಗುವು ಪೂರ್ವ ಜನ್ಮಂತರದಲ್ಲಿ ಮಾಡಿದ ದೇವರ, ವೇದಗಳ, ಶಾಸ್ತ್ರಗಳ ಮತ್ತು ಗುರು ಹಿರಿಯರ ನಿಂದನಾದಿ ಸರ್ವ ಪಾತಕಗಳಿಂದ ಬರುವ ಪೀಡಾ ನಿವಾರಣೆಗಾಗಿ ಈ ಶಾಂತಿಯನ್ನು ಮಾಡಿಸಿ ಕೊಳ್ಳ ಬೇಕು.

೨೦. ಬಾಲ ಮಾರ್ಕಾಂಡೇಯ ಶಾಂತಿ: ಮಗುವಿಗೆ ಮಹತ್ ಬಾಲಾರಿಷ್ಟ ವಶದಿಂದ ಆಯುಷ್ಯಕ್ಕೆ ಕಂಟಕ ಸೂಚಿಸಿದಲ್ಲಿ ಅನಿಷ್ಟ ಪರಿಹಾರಕ್ಕಾಗಿ ಈ ಶಾಂತಿಯನ್ನು ಮಾಡಿಸ ಬೇಕು.

೨೧. ರೋಹಿಣಿ ನಕ್ಷತ್ರ ಜನನ ಶಾಂತಿ: ಮಗುವು ರೋಹಿಣಿ ನಕ್ಷತ್ರದಲ್ಲಿ ಜನಿಸಿದರೆ ಮಾವನಿಗೆ ಅರಿಷ್ಟ ಸೂಚನೆ ಆಗುವುದರಿಂದ ಈ ಶಾಂತಿಯನ್ನು ಮಾಡಿಸ ಬೇಕು.

೨೨. ಕುಜ-ರಾಹು ಸಂಧಿ ಶಾಂತಿ: ನವಗ್ರಹದಲ್ಲಿ ಒಂದೊಂದು ಗ್ರಹಕ್ಕೆ ಇಷ್ಟು ವರ್ಷಗಳು ಮನುಷ್ಯನ ಜೀವನದಲ್ಲಿ ಅಧಿಪತ್ಯ (ಅಧಿಕಾರ) ಎಂದಿರುತ್ತದೆ. ಆದರೆ ಪರಸ್ಪರ ಶತ್ರು ಗ್ರಹಗಳ ಅಧಿಕಾರ ಅವಧಿ ಮುಗಿದು ಇನ್ನೊಂದು ಶತ್ರು ಗ್ರಹದ ಅಧಿಕಾರ ಆರಂಭ ಕಾಲದಲ್ಲಿ ೬ ತಿಂಗಳು ಮುಂಚಿತವಾಗಿ ಸಂಧಿ ಶಾಂತಿ ಮಾಡಿಸುತ್ತಾರೆ. ಇಲ್ಲಿ ಕುಜ ದಶಾ ೭ ವರ್ಷಗಳು ಮುಗಿದು ರಾಹು ದಶಾ ೧೮ ವರ್ಷಗಳು ಆರಂಭವಾಗುವ ಸಮಯಕ್ಕೆ ಈ ಶಾಂತಿಯನ್ನು ಮಾಡಿಸ ಬೇಕು. ಈ ಸಂಧಿ ಕಾಲದವಿಶೇಷವಾಗಿ ಗಂಡಸರಿಗಿಗೆ ಹೆಚ್ಚು ಹಾನಿಕಾರಕ ಆಗಿರುತ್ತದೆ. ಆಯುಷ್ಯದಲ್ಲಿ ಒಂದು ಕಂಟಕ ಎನ್ನ ಬಹುದು.

೨೩. ರಾಹು- ಬೃಹಸ್ಪತಿ ಸಂಧಿ ಶಾಂತಿ: ರಾಹುವಿನ ಅಧಿಕಾರ ಅವಧಿ ೧೮ ವರ್ಷಗಳು ಕಳೆದು ಗುರುವಿನ ೧೬ ವರ್ಷದ ಅಧಿಕಾರದ ಅವಧಿ ಆರಂಭವಾಗುವ ೬ ತಿಂಗಳು ಮೊದಲು ಈ ಶಾಂತಿಯನ್ನು ಅಗತ್ಯವಾಗಿ ಮಾಡಿಸಿ ಕೊಳ್ಳ ಬೇಕು. ಈ ಸಂಧಿಕಾಲವು ವಿಶೇಷವಾಗಿ ಮಹಿಳೆಯರಿಗೆ ಹೆಚ್ಚು ಹಾನಿಕಾರಕ ಆಗಿರುತ್ತದೆ.

೨೪. ಶುಕ್ರಾದಿತ್ಯ ಸಂಧಿ ಶಾಂತಿ: ಶುಕ್ರ ಅಧಿಕಾರ ಅವಧಿ ೨೦ ವರ್ಷಗಳು ಕಳೆದು ಸೂರ್ಯನ ೬ ವರ್ಷದ ಅಧಿಕಾರದ ಅವಧಿ ಆರಂಭವಾಗುವ ೬ ತಿಂಗಳು ಮೊದಲು ಈ ಶಾಂತಿಯನ್ನು ಅಗತ್ಯವಾಗಿ ಮಾಡಿಸಿ ಕೊಳ್ಳ ಬೇಕು. ಈ ಸಂಧಿಕಾಲವು ಪುರುಷ ಮತ್ತು ಮಹಿಳೆ ಇಬ್ಬರಿಗೂ ಹಾನಿಕಾರಕ ಆಗಿರುತ್ತದೆ.

೨೫. ಷಷ್ಟ್ಯಬ್ಧ ಅಥವಾ ಉಗ್ರರಥ ಶಾಂತಿ: ಮನುಷ್ಯನು ತನ್ನ ಜೀವನದ ಕಷ್ಟ-ಸುಖಗಳನ್ನು ಅನುಭವಿಸುತ್ತ ಸಕಾಲದಲ್ಲಿ ವಿವಾಹವಾಗಿ ಪತ್ನಿಯನ್ನು ಒಡಗೂಡಿ ಮಕ್ಕಳ ಆಗು ಹೋಗುಗಳನ್ನು ಪೂರೈಸುತ್ತ ತನ್ನ ಜೀವನದ ೬೦ನೇ ಸಂವತ್ಸರವನ್ನು ಪ್ರವೇಶಿಸಿದಾಗ ಜನ್ಮ, ನಕ್ಷತ್ರದಲ್ಲಿ ಈ ಶಾಂತಿಯನ್ನು ಮಾಡ ಬೇಕು.
ಇದನ್ನು ಏಕೆ ಮಾಡ ಬೇಕು?
ಇದನ್ನು ಮುಂದಿನ ಜೀವನದಲ್ಲಿ ಬರುವಂತಹ ಅಪಮೃತ್ಯು, ದುಃಸ್ವಪ್ನ ದರ್ಶನ, ಗೃಹಪೀಡೆ, ವಿವಿಧ ರೋಗಬಾಧೆ, ಛಾಯಾ ವಿಕೃತಿ. ಭೂತ-ಪ್ರೇತಾದಿ ಪೀಡಾ ರೂಪಕವಾದಂತಹ ನಾನಾ
ವಿಧ ಅರಿಷ್ಟ ನಿವಾರಣೆಗಾಗಿ ಮಾಡುವಂತಹ ಶಾಂತಿಯನ್ನು ಉಗ್ರರಥ ಶಾಂತಿ ಎನ್ನುತ್ತೇವೆ.
ಈ ವಿಧಿಯಲ್ಲಿ ಗಣಪತಿ, ನವಗ್ರಹ ದೇವತೆಗಳನ್ನು, ಪೀಡಾ ಪರಿಹಾರಕನಾದ ಮೃತುಂಜಯನನ್ನು ಅಶ್ವತ್ಥಾಮಾದಿ ಸಪ್ತ ಚಿರಂಜೀವಿಗಳನ್ನು, ಮೃತ್ಯುವನ್ನೇ ಜಯಿಸಿದ ಮಾರ್ಕೆಂಡೆಯನನ್ನು, ಆಯುರ್ದೇವತೆ ನಕ್ಷತ್ರ ದೇವತೆಗಳನ್ನು ಆರಾಧಿಸ ಬೇಕು. ಜಪ, ಹೋಮ, ತರ್ಪಣ, ಮಾರ್ಜನ, ಬ್ರಾಹ್ಮಣ ಭೋಜನವನ್ನಾಚರಿಸಿ ಗುರು-ಹಿರಿಯರ ಆಶೀರ್ವಾದವನ್ನು ಪಡೆಯ ಬೇಕು. ಈ ವಿಧಿಯಲ್ಲಿ ಉಗ್ರನೆಂಬ ಹೆಸರಿನ ಮೃತ್ಯುಂಜಯನು ಪ್ರಧಾನ ದೇವತೆಯಾದ್ದರಿಂದ ಉಗ್ರರಥ ಶಾಂತಿ ಎಂಬ ಹೆಸರು ಬಂತು. ಈ ವಿಧಿಯ ಅಂತ್ಯದಲ್ಲಿ ಕಲಶ ತೀರ್ಥಸ್ನಾನ ಮತ್ತು ಮಂಗಳ ದ್ರವ್ಯ ದರ್ಶನ ಅಲ್ಲದೇ ಪುನಃ ಮಂಗಳ ಸೂತ್ರ ಕಟ್ಟುವುದು ಮುಖ್ಯವಾಗಿರುತ್ತದೆ.

  ಭವಿಷ್ಯ ಪುರಾಣ ಏನು ಹೇಳುತ್ತದೆ ?

೨೮. ಗ್ರಹ ಶಾಂತಿ: ಮನೆಯಲ್ಲಿ ಸಾಲದ ಬಾಧೆ, ಅಶಾಂತಿ, ಕೆಟ್ಟ ಕನಸು ಮತ್ತು ರೋಗ-ರುಜಿನಗಳಿಂದ ತೊಂದರೆ ಅನುಭವಿಸುತ್ತಿದ್ದಲ್ಲಿ ಗ್ರಹ ಶಾಂತಿಯನ್ನು ಮಾಡಿಸಿ ಕೊಳ್ಳ ಬೇಕು.

೨೯. ವಾಸ್ತು ಶಾಂತಿ: ಹೊಸದಾಗಿ ತೆಗೆದು ಕೊಂಡ ಮನೆ ಅಥವಾ ವಸತಿ ಸಮುಚ್ಛಯ ನಿರ್ಮಿಸುವಾಗ ಸ್ಥಳದಲ್ಲಿ ಇರುವಂತಹ ನೂನ್ಯತೆಯನ್ನು ಹೊಗಲಾಡಿಸಿ ಸುಖ ಶಾಂತಿ, ಸಮೃದ್ಧಿಯಿಂದ ನೆಲೆಸುವುದಕ್ಕಾಗಿ ವಾಸ್ತು ಶಾಂತಿಯನ್ನು ಮಾಡುವುದು ಅಗತ್ಯ.

೩೦. ರಾಕ್ಷೋಘ್ನ ಶಾಂತಿ: ಹೊಸ ಮನೆಯನ್ನು ನಿರ್ಮಿಸುವಾಗ ಸ್ಥಳದಲ್ಲಿ ಉಪಯೋಗಿಸಿರುವ ಮರದ ಸಲಕರಣೆಗಳಲ್ಲಿ ಇರುವ ಭೂತ, ಪ್ರೇತ, ಪಿಶಾಚಿ ಬಾಧೆ ನಿವಾರಣೆಗಾಗಿ ವಾಸ್ತು ಹೋಮದ ಪೂರ್ವದಲ್ಲಿ ಈ ಹೋಮವನ್ನು ರಾತ್ರಿಯಲ್ಲಿ ಮಾಡ ಬೇಕು.

೩೧. ಗೇಹಾಭಿವೃದ್ಧಿ ಶಾಂತಿ: ದೇವಸ್ಥಾನದಲ್ಲಿ ಸ್ಥಾಪಿಸಿರುವ ವಿಗ್ರಹಕ್ಕೆ ದೇವರ ಸಾನಿಧ್ಯ ಪ್ರಾಪ್ತಿಗಾಗಿ, ದೇವಾಲಯದ ಅಭಿವೃದ್ಧಿಗಾಗಿ ಈ ಶಾಂತಿಯನ್ನು ಮಾಡ ಬೇಕು.

೩೨. ಸರ್ವಾದ್ಭುತ ಶಾಂತಿ: ಮನೆಯಲ್ಲಿ ಅಮಂಗಲವಾದ ಘಟನೆಗಳು ನಡೆದಾಗ; ಉದಾಹರಣೆಗೆ ಮನೆಗೆ ಬೆಂಕಿ ತಗಲುವುದು, ಮನೆಗೆ ಕಾಗೆ ಪ್ರವೇಶಿಸುವುದು, ಮನೆಯಲ್ಲಿ ಜೇನುಗೂಡು ಕಟ್ಟುವುದು ಮನೆಯ ಒಂದು ಭಾಗ ಕುಸಿಯುವುದು ಇಂತಹ ಅನಿಷ್ಠಗಳಿದ್ದಲ್ಲಿ ಈ ಶಾಂತಿಯನ್ನು ಮಾಡಿಸಿ ಕೊಳ್ಳ ಬೇಕು.

೩೩. ಗ್ರಾಮೊತ್ಪಾತ ಶಾಂತಿ: ಗ್ರಾಮದಲ್ಲಿ ಉತ್ಪನ್ನವಾಗಿರುವ ನಾನ ಾವಿಧ ಭಾದೆ ನಿವಾರಣೆಗೆ ಈ ಶಾಂತಿಯನ್ನು ಮಾಡಿಸಿ ಕೊಳ್ಳ ಬೇಕು.

೩೪. ರಕ್ತ ವಲ್ಮೀಕ ಶಾಂತಿ: ದೇವಾಲಯದಲ್ಲಿ, ಮನೆಯಲ್ಲಿ ಅಥವಾ ಸಭಾಸ್ಥಾನದಲ್ಲಿ ಉತ್ಪತ್ತಿಯಾಗಿರುವ ಹುತ್ತವು ಅಶುಭ ಸೂಚಕ ಆಗಿರುವುದರಿಂದ ಈ ಶಾಂತಿಯನ್ನು ಮಾಡಿಸಿ ಕೊಳ್ಳ ಬೇಕು.

೩೫. ವಾನರ ಪ್ರವೇಶ ಶಾಂತಿ: ಮನೆಯೊಳಗೆ ವಾನರ ಪ್ರವೇಶವಾದಲ್ಲಿ ಬರುವ ಅಪಮೃತ್ಯು, ಮಹಾರೋಗಾದಿ ಸರ್ವ ಅಮಂಗಲ ನಿವಾರಣೆಗಾಗಿ ಈ ಶಾಂತಿಯನ್ನು ಮಾಡ ಬೇಕು.

೩೬. ಮರ್ಕಟ ಪ್ರವೇಶ ಶಾಂತಿ: ಮನೆಯೊಳಗೆ ಕೃಷ್ಣಮುಖ ವಾನರ ಪ್ರವೇಶ ಆದಲ್ಲಿ ಬರುವ ಅಪಮೃತ್ಯು, ಮಹಾರೋಗಾದಿ ಸರ್ವ ಅಮಂಗಲ ನಿವಾರಣೆಗಾಗಿ ಈ ಶಾಂತಿಯನ್ನು ಮಾಡ ಬೇಕು.

೩೭. ಮಹಿಷಿ ಪ್ರವೇಶ ಶಾಂತಿ: ಮನೆಯೊಳಗೆ ಎಮ್ಮೆ ಅಥವಾ ಕೋಣ ಪ್ರವೇಶಿಸಿದರೆ ಸೂಚಿತ ಅಪಮೃತ್ಯು ಹಾಗೂ ಸರ್ವ ಅಮಂಗಲ ನಿವಾರಣೆಗಾಗಿ ಈ ಶಾಂತಿಯನ್ನು ಮಾಡ ಬೇಕು.

೩೮. ದೀಪ ಪತನ ಶಾಂತಿ: ಮನೆಯಲ್ಲಿ ಪೂಜೆ ಮಾಡುತ್ತಿರುವಾಗ ಉರಿಯುತ್ತಿರುವ ದೀಪ ಆರಿ ಹೋದಲ್ಲಿ ಅಮಂಗಲ ನಿವಾರಣೆಗಾಗಿ ಈ ಶಾಂತಿಯನ್ನು ಮಾಡ ಬೇಕು.

೩೯. ಭೀತಿಹರ ದಕ್ಷಾಕರ ದುರ್ಗಾ ಶಾಂತಿ: ಗ್ರಹ ಪೀಡೆಗಳಿಂದ ಪುನಃ ಪುನಃ ಆಗುತ್ತಿರುವ ತೊಂದರೆಗಳ ನಿವಾರಣೆಗೆ ಈ ಶಾಂತಿಯನ್ನು ಮಾಡಿಸಿ ಕೊಳ್ಳ ಬೇಕು.

  ಅನ್ನಂ ಬ್ರಹ್ಮ ಸ್ವರೂಪಂ

೪೦. ಅನಾವೃಷ್ಟಾದಿ ಶಾಂತಿ: ಇದನ್ನು ಸಾಮೂಹಿಕವಾಗಿ ಉತ್ಪತ್ತಿಯಾಗಿರುವ ಮಹಾಮಾರಿ, ಪಶುರೋಗಾದಿ ನಿವಾರಣೆಗೆ ಈ ಶಾಂತಿಯನ್ನು ಮಾಡಿಸಿ ಕೊಳ್ಳ ಬೇಕು.

೪೧. ಕೃತ್ಯಾದ್ರೋಹ ಶಾಂತಿ: ವಿರೋಧಿಗಳ ಯಾವುದೇ ಕುಟುಂಬ, ಉದ್ಯಮ, ಕೋಷ್ಠಗಳ ಮೇಲೆ ಮಾಡಿದ ಕೃತ್ರಿಮ ದೋಷ ನಿವಾರಣೆಗಾಗಿ ಈ ಶಾಂತಿಯನ್ನು ಮಾಡ ಬೇಕು.

೪೨. ದುಃಸ್ವಪ್ನ ಶಾಂತಿ: ಕೆಲವೊಂದು ಸ್ವಪ್ನಗಳು ಅಮಂಗಲತೆಯ ಮುನ್ಸೂಚನೆ ಆಗಿರುವುದರಿಂದ ಈ ದೋಷ ನಿವಾರಣೆಗಾಗಿ ಶಾಂತಿಯನ್ನು ಮಾಡಿಸಿ ಕೊಳ್ಳ ಬೇಕು.

೪೩. ಪರ್ಜನ್ಯ ಶಾಂತಿ: ದೇಶದ ಅಥವಾ ಯಾವುದೇ ಪ್ರಾಂತದಲ್ಲಿ ಸಕಾಲದಲ್ಲಿ ಮಳೆ ಆಗದಿದ್ದಲ್ಲಿ ಜೀವಿಗಳಿಗೆ ಅತಿ ಆತಂಕ ಆಗುವುದು. ಆ ಪರಿಸ್ಥಿತಿ ನಿವಾರಣೆಗೆ ಪ್ರಕೃತಿ ದೇವಿಯನ್ನು ಶಾಂತಿಗೊಳಿಸಿ ಮಳೆ ಪಡೆಯುವುದಕ್ಕೆ ಈ ಶಾಂತಿ ಹೆಸರಿದೆ.

೪೪. ಸರ್ವ ವ್ಯಾಧಿಹರ ನಾಮತ್ರಯೀ ಶಾಂತಿ: ಜನ್ಮ ಜನ್ಮಾಂತರಗಳಿಂದ ಸಂಚಿತ ಪ್ರಾರಾಬ್ಧ ರೂಪ, ಪಾಪ, ನಿವೃತ್ತಿ ಮತ್ತು ವ್ಯಾಧಿ ಬಾಧೆ ನಿವಾರಣೆಗಾಗಿ ಮತ್ತು ಆಯುಃ ಆರೋಗ್ಯ ಪ್ರಾಪ್ತಿಗಾಗಿ ಈ ಶಾಂತಿಯನ್ನು ಮಾಡಿಸಿ ಕೊಳ್ಳ ಬೇಕು.

೪೫. ನಾಳವೇಷ್ಟನ ಶಾಂತಿ: ಮಗುವಿನ ಜನನ ಸಮಯದಲ್ಲಿ ತಾಯಿಯಿಂದ ಮಗುವಿಗೆ ಆಹಾರಾದಿಗಳನ್ನು ಕೊಡುವ ನಾಳವು ಕಂಠ, ಕೈ, ಕಾಲುಗಳಿಗೆ ಸುತ್ತಿಕೊಂಡು ಜನಿಸಿದರೆ ತಂದೆ, ತಾಯಿಗೆ ಅನಿಷ್ಟ, ಸಂಪತ್ತು ನಾಶ, ಸರ್ವ ನಾಶ ಎಂದಿರುತ್ತದೆ. ಆದ್ದರಿಂದ ದೋಷ ನಿವಾರಣೆಗೆ ಈ ಶಾಂತಿಯನ್ನು ಮಾಡ ಬೇಕು.

೪೬. ವಿಶಾಖಾ ನಕ್ಷತ್ರ ಜನನ ಶಾಂತಿ: ವಿಶೇಷವಾಗಿ ಮಗುವು ವಿಶಾಖಾ ನಕ್ಷತ್ರದ ೪ನೇ ಚರಣದಲ್ಲಿ ಜನಿಸಿದರೆ ತಂದೆ, ತಾಯಿ, ಬಂಧುಗಳಿಗೆ ವಿವಾಹದ ನಂತರ ವರನ ಸಹೋದರರಿಗೂ ಅನಿಷ್ಟ ಆದ್ದರಿಂದ ಶಾಂತಿಯ ಅಗತ್ಯವಿದೆ. ೧, ೨, ೩ ಚರಣಗಳಿಗೆ ಅಗತ್ಯವಿಲ್ಲ.

೪೭. ಯೋನಿ ವೈಕೃತಿ ಶಾಂತಿ: ಒಂದು ಹೆಣ್ಣು ಮಗಳು ಮೊದಲನೇ ಬಾರಿಗೆ ರಜೋ ದರ್ಶನವಾಗಿ (ಮಾಸಿಕ ರಜೆ) ನಂತರ ೬ ತಿಂಗಳವರೆಗೆ ರಜೋ ದರ್ಶನ ಆಗದಿದ್ದಲ್ಲಿ ಮುಂದೆ ಮದುವೆಯಾದ ಮೇಲೆ ಬರುವಂತಹ ದೋಷ ನಿವಾರಣೆಗಾಗಿ ಈ ಶಾಂತಿಯನ್ನು ಮಾಡಿಸಿ ಕೊಳ್ಳ ಬೇಕು.

೪೮. ಪ್ರಪೌತ್ರ ದರ್ಶನ ಶಾಂತಿ: ಒಂದು ವೇಳೆ ನಮ್ಮ ಮಗನಿಗೆ ಮಗನು ಜನಿಸಿ,ಅವನಿಗೆ ಮಗನು ಜನಿಸಿದಾಗ ನಾವು ಪ್ರಪೌತ್ರವನ್ನು ಪಡೆದಂತೆ.ಈ ಪ್ರಪೌತ್ರ ದರ್ಶನವು ಮುತ್ತಜ್ಜನಿಗೆ ಒಳ್ಳೆಯದಲ್ಲ. ಆದ್ದರಿಂದ ಈ ಶಾಂತಿಯನ್ನು ಮಾಡಿಸಿ ಕೊಳ್ಳ ಬೇಕು.

೪೯. ಕುಂಭ ವಿವಾಹ ಶಾಂತಿ: ಒಂದು ವೇಳೆ ಯುವತಿಯ ಕುಂಡಲಿಯಲ್ಲಿ ವೈಧವ್ಯ ಯೋಗವಿದ್ದಾಗ ಅಥವಾ ಎರಡು ಇಲ್ಲವೇ ಮೂರು ವಿವಾಹ ಯೋಗವಿದ್ದಲ್ಲಿ ದೋಷ ನಿವಾರಣೆಗೆ ಈ ಶಾಂತಿಯನ್ನು ಮಾಡಿಸುವುದು ಉತ್ತಮ.

೫೦. ಕದಳಿ ವಿವಾಹ ಶಾಂತಿ: ಈ ವಿಧಿಯನ್ನು ಸಹ ಮೇಲೆ ಕಾಣಿಸಿದ ದೋಷ ನಿವಾರಣೆಗೆ ಮಾಡಿಸಲಾಗುತ್ತದೆ.

೫೧. ಅರ್ಕ ವಿವಾಹ ಶಾಂತಿ: ಒಂದು ವೇಳೆ ಯುವಕನ ಜಾತಕದಲ್ಲಿ ಮೊದಲನೇಯ ವಿವಾಹವಾಗಿ ಆತನ ಪತ್ನಿಯು ಪತಿಯನ್ನು ತ್ಯಜಿಸಿದಾಗ ಇಲ್ಲವೇ ಮರಣ ಹೊಂದಿದಾಗ ಅದೇ ರೀತಿ ಎರಡನೇಯ ವಿವಾಹವು ಇದೇ ರೀತಿಯಾದಲ್ಲಿ ಮೂರನೇಯ ವಿವಾಹವಾಗುವ ಮುನ್ನ ಈ ಶಾಂತಿಯನ್ನು ಮಾಡಿಸಿ ಕೊಂಡು ವಿವಾಹವಾಗ ಬೇಕು.

ಹೀಗೆ ಅನೇಕ ವಿಧವಾದ ಶಾಂತಿ, ಹೋಮ,ಯಜ್ಞಾದಿಗಳು ಇರುತ್ತಿದ್ದು ಅವುಗಳನ್ನು ಜ್ಯೋತಿಷಿಗಳ ಅಥವಾ ಪುರೋಹಿತರ ಸಲಹೆ ಅಗತ್ಯ.
(ಸಂಗ್ರಹ)

Leave a Reply

Your email address will not be published. Required fields are marked *

Translate »