ನಮ್ಮ ಬಗ್ಗೆ

ನಮ್ಮ ಬಗ್ಗೆ – About Us

ಈ ಜಾಲತಾಣವು ಸಮಾಜದ ಎಲ್ಲ ವರ್ಗದವರಿಗೆ ವಿವಿಧ ರೀತಿಯ ಉಪಯುಕ್ತ ವಿಷ್ಯ, ಮಾಹಿತಿಗಳನು ತಿಳಿಸಲು ಹಾಗು ಸಾಮಾನ್ಯ ಜ್ಞಾನವನ್ನು ಹೆಚ್ಚಿಸುವ

ಸಾಮಾಜಿಕ ಮಾಧ್ಯಮ

ಕನ್ನಡ ಸಾವಿರ ಗಾದೆಗಳು ಭಾಗ – ೩ – Kannada Proverb

Kannada thousand Gaadegalu | ಕನ್ನಡ ಸಾವಿರ ಗಾದೆಗಳು | Kannada Proverbs | ಕನ್ನಡ ಜನಪ್ರಿಯ ಗಾದೆಗಳು | Kannada Popular Proverbs | Janapriya Gaadegalu | Kannada Gaadegalu | ಕನ್ನಡ ಗಾದೆಗಳು | Kannada Proverbs | ಜನಪ್ರಿಯ ಗಾದೆಗಳು | Kannada Gaade Maathu | kannada gaade maathu | ಕನ್ನಡ ಗಾದೆ ಮಾತು | ಗಾದೆ ವಿಸ್ತರಣೆ | Gaade expand | ಗಾದೆ ಅರ್ಥ ಸಹಿತ | proverbs with meanings

ಕನ್ನಡ ಸಾವಿರ ಗಾದೆಗಳು ಭಾಗ – ೩ – Kannada Proverb

ಕೈಲಾದವರು ಮಾಡುತ್ತಾರೆ ಕೈಲಾಗದವರು ಆಡುತ್ತಾರೆ
ಆಪತ್ತಿಗೆ ಹರಕೆ, ಸಂಪತ್ತಿಗೆ ಮರವು
ತನ್ನ ಮೊಸರನ್ನು ಯಾರೂ ಹುಳಿ ಅನ್ನುವುದಿಲ್ಲ.
ಬಾಯಲೆಲ್ಲಾ ವೇದಾಂತ, ಮಾಡುವುದೆಲ್ಲಾ ರಾದ್ಧಾಂತ.
ಸಾವಿರ ಕೊಟ್ಟರೂ ಸವತಿ ಮನೆ ಬೇಡ
ಬಾಯಿ ಬಂಗಾರ, ಮನ ಅಂಗಾರ.
ಬಡ ದೇವರನ್ನು ಕಂಡರೆ ಬಿಲ್ಪತ್ರೇನೂ ‘ಭುಸ್’ ಅಂತಂತೆ
ಆಳು ನೋಡುದ್ರೆ ಅಬ್ಬಬ್ಬಾ! ಬಾಳು ನೋಡುದ್ರೆ ಬಾಯ್ ಬಡ್ಕೊಬೇಕು
ತಪ್ಪು ಹೊರಿಸಿದವನಿಗೆ ಒಪ್ಪುವವನು ಯಾರು
ಕೋತಿಗೆ ಹೆ೦ಡ ಕುಡಿಸಿದ ಹಾಗೆ.
ತಾನು ಹೋದರೆ ಮಜ್ಜಿಗೆ ಇಲ್ಲ ಹೇಳಿ ಕಳಿಸಿದರೆ ಮೊಸರು ಕೊಟ್ಟಾರೆ
ಅಕ್ಕಿಯ ಮೇಗಳ ಆಸೆ, ನೆಂಟರ ಮೇಗಳ ಬಯಕೆ
ಆರು ಯತ್ನ ತನ್ನದು, ಏಳನೇದು ದೇವರಿಚ್ಛೆ
ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿ ನೋಡಿಕೊಂಡ
ಎತ್ತೂ ಕೋಣಕ್ಕೆ ಎರಡು ಕೋಡು, ನಮ್ಮ ಅಯ್ಯಂಗಾರ್ಗೆ ಮೂರು ಕೋಡು
ಹುಟ್ಟಿಸಿದ ದೇವರು ಹುಲ್ಲು ಮೇಯಿಸುತ್ತಾನೆಯೆ ?
ಹುಚ್ಚರ ಮದುವೆಯಲ್ಲಿ ಉಂಡೋನೇ ಜಾಣ.
ತಟಕು ಬಿದ್ದು ಮಠಾ ಕೆಡಿಸಿತು
ಸೊನ್ನೆಯಿಂದ ಸೊನ್ನೆಗೆ
ಶರೀರಕ್ಕೆ ಸುಖ, ಹೊಟ್ಟೆಗೆ ದುಃಖ.
ಒಳ್ಳೇರ ಒಡನಿದ್ದು ಕಳ್ಳ ಒಳ್ಳೇನಾದ
ಕೊಡಲಾರದ ಹೆಣ್ಣಿಗೆ ತೆರವ ಕೇಳಿದರಂತೆ
ತಾ ಮಾಡಿದ್ದು ಉತ್ತಮ, ಮಗ ಮಾಡಿದ್ದು ಮಧ್ಯಮ, ಆಳು ಮಾಡಿದ್ದು ಹಾಳು
ತಾಳ ತಪ್ಪಿದರೆ ಕುಣಿಯೊದು ತಪ್ಪುವುದಿಲ್ಲ
ಆಪತ್ತಿಗಾದವನೇ ನೆಂಟ ಕೆಲಸಕ್ಕಾದವನೇ ಭಂಟ
ಹೆಣ್ಣು ಹಡೆದವರ ಮನೆ ನುಣ್ಣಗೆ ಗಂಡು ಹಡೆದವರ ಮನೆ ತಣ್ಣಗೆ
ಮಳೇ ನೀರ ಬಿಟ್ಟು ಮಂಜಿನ ನೀರಿಗೆ ಕೈ ಒಡ್ಡಿದಂತೆ
ಉದ್ಯೋಗಂ ಪುರುಷಲಕ್ಷಣಂ
ಹೋದೆಯಾ ಪಿಶಾಚಿ ಅಂದರೆ ಬಂದೆ ಗವಾಕ್ಷೀಲಿ ಅಂದಂತೆ
ರಾಜ ಇರೋತನಕ ರಾಣಿ ಭೋಗ
ಮುಖ ನೋಡಿ ಮಣೆ ಹಾಕು
ಒಂದು ದುಡ್ಡು ಕೊಡುವೆ ಹಾಡು ದಾಸಯ್ಯ ಎರಡು ದುಡ್ಡು ಕೊಡುವೆ ಬಿಡು ದಾಸಯ್ಯ
ಪುರಾಣ ಹೇಳೋಕ್ಕೆ, ಬದನೇಕಾಯಿ ತಿನ್ನೋಕ್ಕೆ.
ಅಲ್ಪ ವಿದ್ಯೆ ಬಲು ಗರ್ವ
ಸ್ವಾತಿ ಮಳೆ ಮುತ್ತಿನ ಬೆಳೆ.
ಕಿಡಿಯಿಂದ ಕಾಡ ಸುಡಬಹುದು
ಚೇಳಿಗೊಂದೇ ಬಸಿರು ; ಬಾಳೆಗೊಂದೇ ಗೊನೆ
ವಯಸ್ಸಿಗೆ ತಕ್ಕ ಬುದ್ಧಿ ಕಲಿ.
ಹುಲ್ಲಿನ ಬಣವೇಲಿ ಸೂಜಿ ಹುಡುಕಿದ ಹಾಗೆ
ಹಗ್ಗ ಹರಿಯಲಿಲ್ಲ ಕೋಲು ಮುರಿಯಲಿಲ್ಲ
ನಗುವ ಹೆ೦ಗಸು, ಅಳುವ ಗ೦ಡಸು ಇಬ್ಬರನ್ನೂ ನ೦ಬಬಾರದು.
ಹೊರಗೆ ಥಳಕು ಒಳಗೆ ಹುಳಕು.
ಊರಿಗೆ ಊರ ಚಿಂತೆಯಾದರೆ ಅಜ್ಜಿಗೆ ಅರಿವೆ ಚಿಂತೆಯತೆ
ಕಾಗೆಯ ಕೈಯಲ್ಲಿ ಕೊಟ್ಟರೆ ಕಾರಭಾರ, ಅದು ಮಾಡುವುದೇ ಉಪಕಾರ?
ತಿರಿದುಂಬುವ ಭಟ್ಟ ದಕ್ಷಿಣೆಯಾದರೂ ಬಿಟ್ಟಾನು ಭೋಜನ ಸಿಕ್ಕಿದರೆ ಬಿಡಲೊಲ್ಲ
ತಾಯಿಗೆ ಕುಲವಿದ್ದರಷ್ಟೇ ಮಗಳಿಗೂ ಕುಲ
ಹೆಂಡ್ರ ಅವಾಂತರ ತಡಿಲಾರದೆ ಗಂಡ ದೇಶಾಂತರ ಹೋದ
ಕಾಲ ತಪ್ಪಿದ ಬಳಿಕ ನೂರು ಮಾಡಿದರು ಹಾಳು
ಸಮುದ್ರದ ನೆಂಟಸ್ತನ ; ಉಪ್ಪಿಗೆ ಬಡತನ
ಇದ್ದಾಗ ಹಿರಿಯಣ್ಣ ಇಲ್ಲದಾಗ ತಿರಿಯಣ್ಣ
ಶಿವಪೂಜೇಲಿ ಕರಡಿ/ಕರಡಿಗೆ ಬಿಟ್ಟ ಹಾಗೆ
ತೂಕಡಿಸುವವನಿಗೆ ಹಾಸಿಗೆ ಹಾಸಿ ಕೊಟ್ಟ ಹಾಗೆ
ಮನುಜನಾಗಿ ಹುಟ್ಟಿ ಪಶುವಿನಂತೆ ಬದುಕಿದಂತೆ!
ಹರ ಮುನಿದರೆ ಗುರು ಕಾಯ್ವ
ಮನಸ್ಸು ಇಲ್ಲದಿದ್ದರೆ ಗಟ್ಟಿ, ಎಲ್ಲವೂ ಮೂರಾಬಟ್ಟಿ.
ಯಾರನ್ನ ನಂಬಿದರು ಆರೈದು ನಂಬಬೇಕು
ತಟಸ್ಥನಾದವನಿಗೆ ತಂಟೆಯೇನು?
ಸದಾಶಿವನಿಗೆ ಅದೇ ಧ್ಯಾನ
ರೋಗಿ ಬಯಸಿದ್ದು ಹಾಲು ಅನ್ನ ವೈದ್ಯರು ಹೇಳಿದ್ದು ಹಾಲು ಅನ್ನ
ತಾಯಂತೆ ಮಕ್ಕಳು ನೂಲಂತೆ ಸ್ಯಾಲೆ
ಹಣ ಎರವಲು ತಂದು ಮಣ ಉರುವಲು ಕೊಂಡ
ಇಕ್ಕೇರಿ ತನಕ ಬಳಗ, ಮಾನ ಮುಚ್ಚಲಿಕ್ಕೆ ಅರಿವೆ ಇಲ್ಲ
ಕೊಡಲಿ ಕಾವು ಕುಲಕ್ಕೆ ಸಾವು
ತಕ್ಕುದನ್ನು ಅರಿಯದ ಓದು ಲಕ್ಷ ಓದಿದರೇನು
ಕಣ್ಣೆರಡಾದರೂ ನೋಟ ಒಂದೇ
ಹಸಿದು ಹಲಸು, ಉಂಡು ಮಾವು.
ತಾಸಿಗೊಂದು ಕೂಸು ಹೆತ್ತರೆ ಈಸೀಸು ಮುತ್ತು
ಬಡವರ ಮಾತು ನುಡಿ ನುಡಿಗೂ ಬೇಸರ
ತಮ್ಮನೇಲಿ ಹೆಗ್ಗಣ ಸತ್ತು ಬಿದ್ದಿದ್ದರೂ ಬೇರೇ ಮನೇ ಸತ್ತ ನೊಣದ ಕಡೆಗೆ ಬೆಟ್ಟು ಮಾಡಿದರು
ಆಕಳು ದಾನಕ್ಕೆ ಕೊಟ್ರೆ, ಹಲ್ಲು ಹಿಡಿದು ನೊಡಿದ್ರಂತೆ.
ಕಳ್ಳನ ಹೆಂಡತಿ ಎಂದಿದ್ದರೂ …ಯೆ
ನಿನ್ನಲ್ಲಿರುವ ಮಾನ ನಿನಗೆ ಕೊಡುವುದು ಬಹುಮಾನ.
ಹೊತ್ತು ಕಳೆದರೆ ಮತ್ತೆ ಬಾರದು
ಉಣ್ಣದವನ ಬಾಯಲ್ಲಿ ಕಡೆಗೆ ಮಣ್ಣು ಬಿತ್ತು
ಒನಕೆ ಮುಂಡು ಚಿಗುರಿದಂತೆ
ಹಾವು ಸಾಯಬಾರದು , ಕೋಲು ಮುರೀಬಾರದು
ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದರು
ಹಳ್ಳೀ ದೇವರ ತಲೆ ಒಡೆದು, ದಿಲ್ಲೀ ದೇವರ ಹೊಟ್ಟೆ ಹೊರೆದ ಹಾಗೆ
ನಮ್ಮವಳಾದ್ರೆ ಕೊಟ್ಟಿಗೆಯಲ್ಲಾದರೂ ಉಣಲಕ್ಕು
ಸ೦ಕಟ ಬ೦ದಾಗ ವೆ೦ಕಟರಮಣ.
ನವಿಲಾಡಿತು ಅಂತ ಕೆಂಬೂತ ಪುಕ್ಕ ತೆರೆಯಿತು
ಆಳಾಗದವ ಅರಸನಲ್ಲ, ಹಟ ಹಿಡಿದವ ಸಾಮ್ರಾಟನಲ್ಲ.
ನಾಯಿ ಬಾಲ ಡೊಂಕು
ಸಾವಿರ ಸುಳ್ಳು ಹೇಳಿ ಮದುವೆ ಮಾಡು
ಇಕ್ಕಲಾರದ ಕೈ ಎಂಜಲು
ಮದುವೇಲಿ ಗಂಡು, ಸ್ಮಶಾನ ಯಾತ್ರೇಲಿ ಹೆಣವಾಗೋ ಬಯಕೆ
ಕಂಡದ್ದನ್ನು ಕಂಡಹಾಗೆ ಹೇಳಿದರೆ ಕೆಂಡದಂಥಾ ಕೋಪವಂತೆ
ದುಷ್ಟರ ಸಂಗದಿ ನೆರಳು ಕೊಯ್ಯದೆ ಬಿಡದು ಕೊರಳು.
ಕಷ್ಟಕ್ಕೆ ಕರೆಯಬೇಡ…ಊಟಕ್ಕೆ ಮರೆಯಬೇಡ
ಕುದಿಯುವ ಎಣ್ಣೆಯಿಂದ ಕಾದ ತವದ ಮೇಲೆ ಬಿದ್ದ ಹಾಗೆ
ಹೃದಯಶೂನ್ಯರ ಒಲವಿಗಿಂತ ಬಲ್ಲವರ ಕದನವೇ ಲೇಸು
ಬಿದ್ದರೂ ಮೀಸೆ ಮಣ್ಣಾಗಲಿಲ್ಲ
ಇದ್ದದ್ದನ್ನು ಇದ್ದಹಾಗೆ ಹೇಳಿದರೆ ಎದ್ದು ಬಂದು ಎದೆಗೆ ಒದ್ದರಂತೆ
ಮುದುಕರಿಗೆ ಮುದ್ದೆ ಕೇಡು ಹಳೇ ಬಟ್ಟೆಗೆ ನೂಲು ಕೇಡು
ಭಾವಿಸಿದರೆ ಬಳಗ, ಕೂಡಿಸಿದರೆ ಕಾಸು.
ಸತ್ತ ಮೇಲಿನ ಸೊರ್ಗಕ್ಕಿಂತ ಇದ್ದ ನರಲೋಕ ವಾಸಿ
ರಸವಳ್ಳಿ ಹೆಣ್ಣು ಒಲಿವಂತೆ ಮಾಡುವುದು ಎಳ್ಳ ತಿಂದ ಋಣ
ಅ೦ಕೆ ಇಲ್ಲದ ಕಪಿ ಲ೦ಕೆ ಸುಟ್ಟಿತು.
ಜಾಣನಿಗೆ ಮಾತಿನ ಪೆಟ್ಟು; ದಡ್ಡನಿಗೆ ದೊಣ್ಣೆಯ ಪೆಟ್ಟು
ಹಿರಿದು ಪಾಪ ಮಾಡಿ ಗಂಗೆಗೆ ಹರಿದರು
ಕೂಸು ಹುಟ್ಟೋಕೆ ಮುಂಚೆ ಕುಲಾವಿ ಹೊಲಿಸಿದರು
ರೇಶ್ಮೆ ಶಾಲಿನಲ್ಲಿ ಸುತ್ತಿದ ಚಪ್ಪಲಿ ಏಟು
ಹಗೆಯೋನ ಕೊಲ್ಲಾಕೆ ಹಗಲೇನು ಇರುಳೇನು
ಕೆಟ್ಟ ಕಾಲ ಬಂದಾಗ ಕಟ್ಟಿಕೊಂಡವಳೂ ಕೆಟ್ಟವಳು
ಮಾಳಿಗೆ ಮನೆ ಬೇಕು ಜೋಳಿಗೆ ಹಣ ಬೇಕು ಮಾದೇವನಂಥಾ ಮಗ ಬೇಕು ಗೌರಿಯಂಥಾ ಸೊಸೆ ಬೇಕು
ಹರೆಯಕ್ಕೆ ಬಂದಾಗ ಹಂದಿನೂ ಚಂದ
ಅಹಂಕಾರಕ್ಕೆ ಉದಾಸೀನವೇ ಮದ್ದು.
ಕರ್ಪೂರವ ತಿಪ್ಪೇಲಿಟ್ರೂ ತನ್ನ ಸುವಾಸನೆ ಬಿಡದು.
ಬೇವು ಕಾಗೆಗೆ ಇಂಪು ಮಾವು ಕೋಗಿಲೆಗೆ ಇಂಪು
ಹೊಟ್ಟೆ ಉರಿದು ಕೊಳ್ಳೋದು ಒಂದೇಯ, ಹೊಟ್ಟೆ ಇರಿದು ಕೊಳ್ಳೋದು ಒಂದೇಯ
ಊರಿಗಾಗದ ಗೌಡ, ಮೇಲೆರಗುವ ಗಿಡುಗ
ಪ್ರದಕ್ಷಿಣೆ ಹಾಕಿದರೆ ಪ್ರಯೋಜನವಿಲ್ಲ, ದಕ್ಷಿಣೆ ಹಾಕಿದರೇಯ ತೀರ್ಥ ಸಿಗೋದು
ಬೀಜ ಸಣ್ಣದಾದರೆ ಮರ ಸಣ್ಣದೋ.
ಎತ್ತೋರ್ ಇಲ್ಲದ ಮಕ್ಕಳ ಹೆತ್ತೇನು ಫಲ
ಸಿರಿತನ ಇರೂತನ ಪಿರಿಪಿರಿ ಸಿರಿಹೋದ ಮರುದಿನ ಕಿರಿಕಿರಿ
ಚಿಂತೆ ಇಲ್ಲದವನಿಗೆ ಸ೦ತೇಯಲ್ಲೂ ನಿದ್ದೆ.
ಎಂಟು ಹೊನ್ನು ಘನವಾದ ನಂಟು
ತಬ್ಬಳಿ ದೇವರಿಗೆ ತಂಗಳ ನೈವೇದ್ಯ
ನೆಂಟರಿಗೆ ದೂರ ; ನೀರಿಗೆ ಹತ್ತಿರ
ಆತುರಕ್ಕೆ ಅಜ್ಜಿ ಮೈನೆರೆದಳು
ಹಗ್ಗ ತಿನ್ನೋ ಹನುಮಂತ ರಾಯನಿಗೆ ಜ್ವಾಳದ ಶಾವಿಗೆ ಎಷ್ಟು ಕೊಟ್ಟೀಯ
ಸಂತೆ ಕಟ್ಟೋಕು ಮೊದಲೇ ಸೇರಿದರು ಗಂಟು ಕಳ್ಳರು
ತಿರುಕನ ಬಳಿಗೆ ತಿರುಕ ಹೋದರೆ ಮರುಕ ತಾ ಬರುವುದೇ?
ಉರಗಕ್ಕೆ ಹಾಲೆರೆದರೆ ಅದು ತನ್ನ ಗರಳ್ವ ಬಿಡಬಲ್ಲುದೇ
ಅವರು ಚಾಪೆ ಕೆಳಗೆ ತೂರಿದರೆ ನೀನು ರ೦ಗೋಲಿ ಕೆಳಗೆ ತೂರು.
ಬರೀ ಮಾತಾಡಿ ಬಯ್ಯಿಸಿಕೊಂಡ
ಪುಷ್ಪವಿಲ್ಲದ ಪೂಜೆ, ಅಶ್ವವಿಲ್ಲದ ಅರಸನಿಗೆ ಸಮ.
ಕುಚುಕು ಬುದ್ಧಿ ಹೊಕ್ಕವನು ಕೆಟ್ಟ
ಎತ್ತು ಹೊರಬಲ್ಲ ಭಾರವನ್ನು ಕರು ಹೊರಬಲ್ಲುದೆ ?
ಎಲ್ಲಾ ಜಾಣ,ತುಸಾ ಕೋಣ.
ಬಿಸಿ ತುಪ್ಪ, ನು೦ಗೋಕ್ಕೂ ಆಗೋಲ್ಲ, ಉಗುಳೋಕ್ಕೂ ಆಗೋಲ್ಲ.
ಉದ್ದುದ್ದ ಮಾತಿನವರ ಮೊಳಕೈ ಮೊಂಡ.
ಹೋದ ಪುಟ್ಟ ಬಂದ ಪುಟ್ಟ
ನೀರಿಳಿಯದ ಗಂಟಲೊಳ್ ಕಡುಬಂ ತುರುಕಿದಂತಾಯ್ತು (ಮುದ್ದಣ)
ದಂಡಿಗೆ ಹೆದರಲಿಲ್ಲ, ದಾಳಿಗೆ ಹೆದರಲಿಲ್ಲ, ಇನ್ನು ನಿನ್ನ ಗಳಗಂಟೆಗೆ
ದನಿಯಿದ್ದವರು ಅತ್ತರೂ ಚಂದ ನಕ್ಕರೂ ಚಂದ
ಹಿಡಿದ ಕೆಲಸ ಕೈ ಹತ್ತಲ್ಲ, ತಿಂದ ಅನ್ನ ಮೈ ಹತ್ತಲ್ಲ
ಗಂಡ-ಹೆಂಡಿರ ಜಗಳ ತಿಂದು ಮಲುಗೊ ವರೆಗೆ
ಕಂಡವರ ಕಂಡು ಕೈಕೊಂಡ ಕೆಲಸ ಕೆಂಡವಾಯ್ತು
ನಲ್ಲೆ ಮುಂದೆ ಸುಳಿದರೆ ಲೋಕದೊಳಗೆ ಒಲ್ಲದವರಾರು
ಹಾಲು ಮಾರಿದ್ದು ಹಾಲಿಗೆ ನೀರು ಮಾರಿದ್ದು ನೀರಿಗೆ
ಬಂದ ದಾರಿಗೆ ಸುಂಕವಿಲ್ಲ
ಸಿರಿತನ ಇರೂತನ ಹಿರಿತನ ಸಿರಿಹೋದ ಮರುದಿನ ಕಿರಿತನ
ಸುಡುಗಾಡಿನಲ್ಲಿ ಕುಳಿತು ಸುಖ ಬಯಸಿದಂತೆ.
ಸೊಕ್ಕಿದ್ದು ಉಕ್ತದೆ ಉಕ್ಕಿದ್ದು ಒಲೆಗೆ ಹಾರ‍್ತದೆ
ಬೆಳಗೂ ಹೆತ್ತ ಮಗೂನ ನಾಯಿ ಕೊಂಡೊಯ್ಯಿತಂತೆ
ತಲೆ ತಾಗಿದ್ದಲ್ಲದೆ ಬುದ್ಧಿ ಬಾರದು
ಅಕ್ಕರೆಯ ಅಕ್ಕ ಬಂದಾಗೇ ಸಕ್ಕರೆಯೆಲ್ಲ ಕಹಿ ಆಯ್ತು
ತಾಳೇ ಹಣ್ಣು ತಾನೇ ಬಿದ್ದರೂ ಬಾಳಾದ ಮುರವಗೆ ಬಾಯಿ ಮುಚ್ಚಿತು
ಖಂಡಿತ ವಾದಿ, ಲೋಕ ವಿರೋಧಿ
ಒಬ್ಬರ ಕೂಳು ಇನ್ನೊಬ್ಬರ ಕುತ್ತು.
ಪ್ರೇಮಿಗಳಿಲ್ಲದ ನಾಡು ಬರೀ ಶೂನ್ಯದ ಬೀಡು.
ಆಳ್ ಮೇಲ್ ಆಳ್ ಬಿದ್ದು ಗೋಣು ಬರಿದಾಯ್ತು
ಸಾವಿರ ಸುಳ್ಳು ಹೇಳಿ ಒಂದು ಮದುವೆ ಮಾಡು
ಬಂಗಾರಕ್ಕೆ ಕುಂದಣವಿಟ್ಟಂತೆ
ಹಗೆ ಮಾತು ಆತುಕೊಂಡ, ತುಟಿ ಬಿಚ್ಚದೆ ಕೂತುಕೊಂಡ
ಮಾಡಿದ ಕರ್ಮ ಹಿಡಿದೊಯ್ಯದೆ ಬಿಡದು
ಬೆಳ್ಳಗಿರುವದೆಲ್ಲ ಹಾಲಲ್ಲ
ಉತ್ತಮವಾದ ನಗು ನೇಸರನ ಮಗು.
ಆದ ಕೆಲಸಕ್ಕೆ ಅತ್ತೆಗಳು ಬಂದಂತೆ
ಕುಡಿಯೋದು ಅ೦ಬಲಿ ಮುಕ್ಕಳಿಸೋದು ಪನ್ನೀರು.
ಸಾವಿರ ಚಿತ್ತಾರ ಮಸಿ ನುಂಗಿತು
ಸೋದರ ಮಾವನ ಚಾಳು ತುಂಡಪುಂಡರ ಪಾಲು
ಮೋಟಾಳಿಗೊಂದು ಚೋಟಾಳು
ಮಾಡಬಾರದ್ದು ಮಾಡಿದರೆ ಆಗಬಾರದ್ದೇ ಆಗುತ್ತೆ
ನದೀನೆ ನೋಡದೆ ಇರುವನು ಸಮುದ್ರವರ್ಣನೆ ಮಾಡಿದ ಹಾಗೆ.
ಅಕ್ಕಿ ಸರಿಯಾಗ ಬಾರದು ಅಕ್ಕನ ಮಕ್ಕಳು ಬಡವಾಗ ಬಾರದು
ಭಂಗಿ ರಸ ನೆತ್ತಿಗೇರಿ ಬಿಂಗಿಯಂತೆ ಆಡಿದ
ಮಾತು ಮನೆ ಮುರಿತು, ತೂತು ಓಲೆ ಕೆಡಿಸಿತು.
ಸಮಯಕ್ಕಿಲ್ಲದ ನೆರವು ಸಾವಿರ ಇದ್ದರೂ ಎರವು (ಅನ್ಯ)
ತಾಳ್ಮೆ ಇದ್ದ ಪುರುಷರಲ್ಲಿ ಬೀಳು ಬಿದ್ದರೆ ಬಾಳ್ಯಾನು
ಅರೆಗೊಡದ ಅಬ್ಬರವೇ ಬಹಳ.
ತೆಂಗು ಬೆಳೆದವನಿಗೂ ಗಂಡು ಹೆಡೆದವಳಿಗೂ ಚಿಂತೆಯಿಲ್ಲ.
ಹಾವು ಸಾಯಬಾರದು ;ಕೋಲು ಮುರಿಯಬಾರದು
ಉಟ್ಟರೆ ತೊಟ್ಟರೆ ಪುಟ್ಟಕ್ಕ ಚೆನ್ನ
ರಾಗಿ ಇದ್ರೆ ರಾಗ ರಾಗಿ ಇಲ್ದಿದ್ರೆ ರೋಗ
ಹಳೆ ಮನೆಗೆ ಹೆಗ್ಗಣ ಸೇರಿಕೊಂಡಂಗೆ
ಹಾದೀಲಿ ಹೋಗುವವನ ಕೆಣಕ ಅವನು ಬಂದು ನಿನ್ನ ತದಕ.
ಸಮುದ್ರ ದಾಟಿದವನಿಗೆ ಹಸುವಿನ ಹೆಜ್ಜೆ ದೊಡ್ಡದೆ
ಹಾಕೋದು ಬಿತ್ತೋದು ನನ್ನಿಚ್ಛೆ; ಆಗೋದು ಹೋಗೋದು ದೇವರಿಚ್ಛೆ
ಲಿಂಗ ಹರಿದ ಮೇಲೆ ಜಂಗಮನ ಹಂಗೇನು
ಮಿಂದರೆ ಮೈಯ ಕೊಳೆ ಹೋಯ್ತು
ತನ್ನ ತಾ ಬಲ್ಲವನೆ ಬಲ್ಲವ
ಕಷ್ಟ ಪಟ್ಟರೆ ಫಲವುಂಟು
ತರುಬು ಇದ್ದರೆ ಹರುಬು ನಿಂತೀತೇ
ಜೀವ ಜೀವವ ತಿಂದು ಜೀವಿಸುತಿದೆ
ಇತ್ತಿತ್ತ ಬಾ ಅಂದ್ರೆ ಇದ್ದ ಮನೇನೂ ಕಿತ್ತುಕೊಂಡ
ಸೀರೆ ಗಂಟು ಬಿಚ್ಚೋವಾಗ ದಾರದ ನಂಟು ಯಾರಿಗೆ ಬೇಕು?
ಬೇಡಿದರೆ ಇಲ್ಲ ಅನ್ನೋದ್ ಕಷ್ಟ
ತಾಳೆ ಹೂವು ಶಿವನಿಗೆ ಆಗದು ಸಂಪಿಗೆಯ ಹೂ ಸಾಲಿಗ್ರಾಮಕೆ ಆಗದು
ಹುಟ್ಟು ಗುಣ ಸುಟ್ಟರೂ ಹೊಗೋದಿಲ್ಲ
ಉಣ್ಣು ಬಾ ಅಂದ್ರೆ, ಇರಿ ಬಾ ಅಂದ್ರಂತೆ
ಅಕ್ಕ ನನ್ನವಳಾದ್ರೆ ಬಾವ ನನ್ನವನೇನು
ಓದಿ ಬರೆಯೋ ಕಾಲದಲ್ಲಿ ಆಡಿ ಮಣ್ಣು ಹುಯ್ಕೊಂಡರು
ತಾರು ಮಾರು ಮಾಡುವವನಿಗೆ ಯಾರು ತಾನೆ ನಂಬ್ಯಾರು
ಎಡದ ನೆತ್ತಿಗೆ ಬಡಿದರೆ ಬಲದ ನೆತ್ತಿಗೆ ತಾಕಿತು
ಸಾಯೋ ತನಕ ಶನಿ ಕಾಟ ಆದ್ರೆ ಬಾಳೋದು ಯಾವಾಗ
ಆಳಾಗಬಲ್ಲವನು ಅರಸಾಗಬಲ್ಲ
ಬೆಲ್ಲ ಇದ್ದಲ್ಲಿ ನೊಣ ತಿರುಗಾಡಿದಂತೆ.
ಹುಳ್ಳಿಕಾಳು ತಿನ್ನೊ ಮುಕ್ಕ ಒಬ್ಬಟ್ಟಿನ ಹೂರ್ಣ ಕೇಳಿದಂಗೆ
ಹೆಂಡ ಕುಡಿಯುವ ದೇವರಿಗೆ ಹೇ.. ತಿನ್ನುವ ಪೂಜಾರಿ
ಎಲ್ಲರ ಮನೆಯ ದೋಸೆಯೂ ತೂತೆ !
ನಡೆವರ್ ಎಡವದೇ ಕುಳಿತವರ್ ಎಡವುವರೇ
ಹತ್ತಾರು ಜನ ಓಡಾಡೋ ಕಡೇಲಿ ಹುಲ್ಲು ಬೆಳೆಯೊಲ್ಲ
ಹತ್ತರೊಟ್ಟಿಗೆ ಹನ್ನೊಂದು ಜಾತ್ರೆಯೊಟ್ಟಿಗೆ ಗೋವಿಂದು
ದುರ್ಭಿಕ್ಷದಲ್ಲಿ ಅಧಿಕ ಮಾಸ ಬಂದಂತೆ
ಕಷ್ಟ ತರುಬಿ ಹೋಗುವನ್ನ ಕರುಬಿ ಮಾಡುವುದೇನು?
ಅಳಿಯನಿಗೆ ದೀಪಾವಳಿ ಮಾವನಿಗೆ ಕೋಪಾವಳಿ.
ತನ್ನ ತಾ ತಿಳಿದು ತಾನು ತಾನಾದುದೆ ಉನ್ನತಿ
ತಾಯಿ ಒಂದಾದರೂ ಬಾಯಿ ಬೇರೆ
ಓಡ್ಹೋಗುವನ ಚಡ್ಡಿ ಹರಕಂಡಷ್ಟೆ ಲಾಭ.
ನುಡಿಯೊಳು ಕ೦ಪಿಡುವುದು ಬದುಕು ನುಡಿಯಿರದವನಿಗೆ ಇಲ್ಲವು ನಾಡೂ ನುಡಿಯಲಿ ಸಲ್ಲನದಾವುದಕೂ.
ಅಧರಕ್ಕೆ ಕಹಿ ಉದರಕ್ಕೆ ಸಿಹಿ
ಕ೦ಡವರ ಮನೇಲಿ ನೋಡು ನನ್ನ ಕೈ ಧಾರಾಳಾವ!
ಶೀಲವಂತರ ಓಣೀಲಿ ಕೋಳಿ ಮಾಯ ಆದವಂತೆ
ಓಲೆ ಆಸೆಗೆ ಬೆಕ್ಕು ಮೂಗುತಿ ಕಳಕೊಂಡಿತು
ಬೆಕ್ಕು ಕಣ್ಣು ಮುಚ್ಚಿಕೊಂಡು ಹಾಲು ಕುಡಿದಂತೆ
ಕರೆದು ಹೆಣ್ಣು ಕೊಟ್ಟರೆ ಮಲ್ಲೋಗರ ಬಂತಂತೆ.
ಓದೋದು ಕಾಶಿ ಖಂಡ, ತಿನ್ನೋದು ಮಶಿ ಕೆಂಡ
ಇಲ್ಲದ ಕಾಲಕ್ಕೆ ಕಲ್ಲೆದೆ ಬೇಕು
ಯೋಗಿ ತಂದದ್ದು ಯೋಗಿಗೆ, ಭೋಗಿ ತಂದದ್ದು ಭೋಗಿಗೆ
ನೇಯುವ ಕಾಲ ತಪ್ಪಿದರೂ, ಸಾಯುವ ಕಾಲ ತಪ್ಪದು.
ಪಾಯಸ ಮಾಡಿ ನಾಯಿ ಬಾಲದಲ್ಲಿ ತೊಳಸಿದ ಹಾಗೆ
ಆಕೆಗೆ ಬುದ್ಧಿ ಹೇಳಕ್ಕೆ ಆತನ್ನ ಕರೆಸಿದರೆ,ಆತ ಆಕೇನ ಬಿಟ್ಟು ಆರು ವರ್ಷ ಆಗಿತ್ತಂತೆ.
ಕುಂಬಾರನ ಮಗಳು ಲಾಭ ಬಂದ ಹೊರತು ಮಡಿಕೆ ಒಡೆಯುವುದಿಲ್ಲ.
ಊರೆಲ್ಲ ಸೂರೆ ಆದ ಮೇಲೆ ಬಾಗಿಲ ಮುಚ್ಚಿದರು
ತಾ ಬಲವೋ ಜಗ ಬಲವೋ
ಬೆಂಕಿ ಇಲ್ಲದೆ ಹೊಗೆ ಏಳಲ್ಲ
ದಕ್ಷಿಣೆಗಾದರೆ ಮಾತು ಹಿಡಿದಾನು, ಮಂತ್ರಕ್ಕಾದರೆ ಬೆನ್ನು ತೋರ್ಸಿಯಾನು.
ಕಂಕುಳಲ್ಲಿ ದೊಣ್ಣೆ; ಕೈಯಲ್ಲಿ ಶರಣಾರ್ಥಿ
ಏತಿ ಅಂದರೆ ಪ್ರೇತಿ ಅಂದಂತೆ
ಉಣವಲ್ಲ ಉಡವಲ್ಲದವನ ಒಡವೆ ಕಂಡವರ ಪಾಲಾಯ್ತು
ಮುಳ್ಳಿನಿಂದ ಮುಳ್ಳು ತೆಗೆ,
ಹುಲ್ಲಿನ ಬಣವೇಲಿ ಸೂಜಿ ಹುಡುಕಿದ ಹಾಗೆ.
ಮಾತಿಗೆ ಸಿಕ್ಕಿದರೆ ಮಳೆಗೆ ಸಿಕ್ಕಂತೆ.
ಅಲ್ಲದವನ ಒಡನಾಟ ಮೊಳಕೈಗೆ ಕಲ್ಲು ಬಡಿದಂತೆ
ತಲೆ ಹೋಗುವುದಕ್ಕೆ ಕಾಲು ಹೊಣೆಯಾದ ಹಾಗೆ
ಹಲವು ದೇವರ ಮಾಡಿ ಹಾರುವಯ್ಯ ಕೆಟ್ಟ
ಕಪ್ಪೆ ತಕ್ಕಡೀಲಿ ಹಾಕಿದ ಹಾಗೆ
ಹೆಣ್ಣು ಪಂಜರ ಜೀವಿ. ಗಂಡು ಅಂಬರ ಜೀವಿ
ಹಣ್ಣು ತಿಂದವನು ನುಣುಚಿಕೊಂಡ; ಸಿಪ್ಪೆ ತಿಂದವನು ಸಿಕ್ಕಿ ಹಾಕಿಕೊಂಡ
ಮಾಡೋರನ್ನು ಕಂಡರೆ ನೋಡು ನನ್ನ ಸಿರೀನ
ಹೊಟ್ಟೆ ತುಂಬಿದೋರಿಗೆ ಹುಡುಗಾಟ, ಹೊಟ್ಟೆಗಿಲ್ಲದೋರಿಗೆ ಮಿಡುಕಾಟ
ಓಡಿ ಹೋಗೋ ಬಡ್ಡಿ ಹಾಲು ಹೆಪ್ಪಿಟ್ಟಾಳೆ?
ಹೆಂದತಿಯಿಲ್ಲದ ಮನೆ ದೇವರಿಲ್ಲದ ಗುಡಿ
ಕುದಿಯುವುದರೊಳಗಾಗಿ ಮೂರು ಸಾರಿ ಹಳಸಿದಂತೆ
ನೆಲಕ್ಕೆ ಬಿದ್‍ದ್ರೂ ಮೀಸೆ ಮಣ್ಣಾಗಿಲ್ಲ
ತಮ್ಮ ನಮ್ಮವನಾದರೂ ನಾದಿನಿ ನಮ್ಮವಳಲ್ಲ
ಬೆಂಗಳೂರಿಗೆ ಬಂದೋನೇ ಬಹದ್ದೂರ
ತಿರಿಚಿನಾಪಳ್ಳಿಗೆ ತಿರಿದುಂಬೊದಕ್ಕೆ ಇಲ್ಲಿಂದ ಕೈ ಸವರಿಸಬೇಕೆ
ವಿದ್ಯೆ ಇಲ್ಲದವನ ಮೋರೆ ಹಾಳೂರ ಹದ್ದಿನಂತೆ
ಕಹಿ ಪದಾರ್ಥ ತಿಂದು ಸಿಹಿ ಮಾತನಾಡು.
ಹಲ್ಲು ಹತ್ತಿದವ ಒರಳು ನೆಕ್ಕಿದ
ಹತ್ತು ಜನರ ಹುಲ್ಲು ಕಡ್ಡಿ ಒಬ್ಬನಿಗೆ ತಲೆ ಹೊರೆ.
ಕಣ್ಣಿಗೂ ಮೂಗಿಗೂ ಮೂರು ಗಾವುದ.
ರಸ್ತೇಲಿ ಕುತ್ಕೊಂಡು ಗಳಗಳನೆ ಅತ್ತರೆ ಹೋದ ಪ್ರಾಯ ಬಂದೀತೆ?
ಉಸ್ ಎಂದರೆ ಉಸಳಿ ಬೇಡಿದ್ದನಂತೆ
ಹಾಡ್ತಾ ಹಾಡ್ತಾ ರಾಗ; ಉಗುಳ್ತಾ ಉಗುಳ್ತಾ ರೋಗ
ಅತ್ತೆ ಮೇಲಿನ ಕೋಪ ಕೊತ್ತಿ ಮೇಲೆ
ಹೊರೆ ಹೊತ್ತುಕೊಂಡು ಗ್ರಹಗತಿ ಕೇಳ್ದಂದೆ
ಬೆಳ್ಳಗಿರೋದೆಲ್ಲಾ ಹಾಲಲ್ಲ ಹೊಳೆಯುವುದೆಲ್ಲಾ ಚಿನ್ನವಲ್ಲ
ಬೇವು ಕಾಗೆಗೆ ಇಷ್ಟ , ಮಾವು ಕೋಗಿಲೆಗೆ ಇಷ್ಟ
ತಂತು ಕೂಟಸ್ಥ ಇಲ್ದೋನ ಓದು ಗಿಳಿ ಕಲ್ತ ಪಾಠದಂತೆ
ದುಡಿಮೆಯೇ ದುಡ್ಡಿನ ತಾಯಿ
ಬರೋಳನ್ನು ನೆಚ್ಚಿ ಇರೋಳನ್ನು ಬಿಟ್ಟ
ಕಾಸಿದ್ದರೆ ಕೈಲಾಸ.
ಗುಂಪಿನಲ್ಲಿ ಗೋವಿಂದ
ಹುಣ್ಣಿನ ಮೇಲೆ ಉಪ್ಪು ಸವರಿದಂತೆ
ಕಾಯಕವೇ ಕೈಲಾಸ
ಹಲವು ಸಲ ಸಾಯುವವನು ಹೇಡಿ,ವೀರಯೋಧನಿಗೊಂದೇ ಸಲ ಸಾವು
ಉರಿದ ಹೊಟ್ಟೆಗೆ ಉಪ್ಪು ತುಂಬಿಸಿದಂಗೆ
ಸತ್ತೋರ ಮಕ್ಕಳು ಇದ್ದೋರ ಕಾಲ್ದಸೀಲಿ
ಆಗ ಬಾ ಈಗ ಬಾ ಹೋಗಿ ಬಾ ಅನ್ನದೆ ಕೊಡುವ ತ್ಯಾಗವಾಗು
ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿ ನೋಡ್ಕಂಡನಂತೆ
ತನ್ನ ಮನೆ ಉಪ್ಪು ಇಲ್ಲ ಬೆನ್ನ ಹಿಂದೆ ಉರಿಯೋ
ಕೇಡು ಬರೋ ಕಾಲಕ್ಕೆ ನಂಟೆಲ್ಲ ಹಗೆಯಾಯ್ತು
ಸೊಕ್ಕುವುದು ಕೆಕ್ಕರಿಸಿ ನೋಡುವುದು ಸೇರಕ್ಕಿಯ ಗುಣ
ಕೋಳಿಯ ಕಾಲಿಗೆ ಗೆಜ್ಜೆ ಕಟ್ಟಿದರೆ ತಿಪ್ಪೆ ಕೆದರುವುದನ್ನು ಬಿಟ್ಟೀತೆ?
ಚಳಿಗಿಲ್ಲದ ಕಂಬಳಿ ಮೆಳೇ ಮೇಲೆ ಬಿದ್ದರೇನು ಮುಳ್ಳಿನ ಮೇಲೆ ಬಿದ್ದರೇನು
ತಿರೋಕಲ್ಲು ಗಾಳಿಯಿಂದ ಹಾರುವುದೋ
ಸಮುದ್ರದ ಮದ್ಯೆ ಇದ್ದರೂ ಉಪ್ಪಿಗೆ ಬರವಂತೆ
ಮೈತುಂಬ ಕಣ್ಣಿರಲಿ, ಕೈಯಲ್ಲಿ ಪೆನ್ನಿರಲಿ.
ಅತಿ ಆಸೆ ಗತಿಗೇಡು
ತಾನೂ ತಿನ್ನ; ಪರರಿಗೂ ಕೊಡ
ಹಂಚಿದವರಿಗೆ ಹಲ್ಲು ಬಾಯಿ
ಅತ್ತೆ ಒಡೆದ ಪಾತ್ರೆಗೆ ಬೆಲೆ ಇಲ್ಲ
ಓತಿಕ್ಯಾತಕ್ಕೆ ಬೇಲಿ ಗೂಟ ಸಾಕ್ಷಿ
ಕಣ್ಣು ಕುರುಡಾದರೆ ಬಾಯಿ ಕುರುಡೇ
ರಸಿಕನ ನುಡಿ ತಿಂಗಳ ಬೆಳಕಿನಂತೆ
ಹಾರುವಯ್ಯನಿಗೆ ಹರಕೆ ಕಟ್ಟಿದಕ್ಕೆ ಹಳೇ ಪರಕೇಲಿ ಹೋಡ್ದ ಹಾಗೆ
ವಿದ್ಯೆ ಬಲ್ಲವ ಇದ್ದಲ್ಲು ಸಲ್ಲುವ ಹೋಗಿದ್ದಲ್ಲು ಸಲ್ಲುವ
ಏರಿದವ ಇಳಿದಾನು
ಉಳಿ ಸಣ್ಣದಾದರು ಕುಳಿ ತೋಡದೆ ಬಿಡಲಾರದು.
ಕಳೆದುಕೊಂಡ ವಸ್ತುವನ್ನು ಕಳೆದುಹೋದ ಜಾಗದಲ್ಲೇ ಹುಡುಕು
ಕೊಂಕಣ ಸುತ್ತಿ ಮೈಲಾರಕ್ಕೆ ಬಂದರು
ಅತ್ತೆಗೊ೦ದು ಕಾಲ ಸೊಸೆಗೊ೦ದು ಕಾಲ.
ನಿಜ ಆಡಿದರೆ ನಿಷ್ಠೂರ
ನಡತೆ ಕಲಿಯೋದು ಏರುಬಂಡೆ ನಡತೆ ಕೆಡೋದು ಜಾರುಬಂಡೆ
ತಲೇ ಮೂರು ಸುತ್ತು ತಿರುಗಿದರೂ ತುತ್ತು ಬಾಯಿಲೇ
ರಾತ್ರಿ ಎಲ್ಲ ರಾಮಾಯಣ ಕೇಳಿ, ಬೆಳಗಾಗೆದ್ದು ರಾಮಂಗೂ ಸೀತೆಗೂ ಏನು ಸಂಬಂಧ ಅಂದ್ರಂತೆ
ದುಡ್ಡಿಗಿಂತ ದೊಡ್ಡ ಹೆಸರೇ ಉತ್ತಮ.
ಬಿಡುಕು ಮಾತಿಗೆ ಮಾಡಿಕೊಳ್ಳದಿರು ಕೆಡುಕು.
ಅಂಕೆ ಇಲ್ಲದ ಕಪಿ ಲಂಕೆ ಸುಟ್ಟಿತು
ತಿಳಿದವ ಮಾಡ್ಯಾನು ನಳಪಾಕವ
ಊರಿಗೆ ಊರ ಚಿಂತೆಯಾದರೆ ಅಜ್ಜಿಗೆ ಅರಿವೆ ಚಿಂತೆಯಂತೆ
ಸಾವಿರ ಸುಳ್ಳು ಹೇಳಿ ಒಂದು ಮದುವೆ ಮಾಡು.
ಆಸೆಗೆ ಕೊನೆಯಿಲ್ಲ
ಕರೆದುಣ್ಣುವ ಕೆಚ್ಚಲನ್ನು ಕೊರೆದುಂಡ ಹಾಗೆ.
ಒಂದು ಒಳ್ಳೇ ಮಾತಿಗೆ ಸುಳ್ಳೇ ಪ್ರಧಾನ
ಒಂದು ಕಣ್ಣೀಗೆ ಬೆಣ್ಣೆ ಮತ್ತೊಂದು ಕಣ್ಣಿಗೆ ಸುಣ್ಣ
ಅತಿ ಸ್ನೇಹ ಗತಿ ಕೇಡು
ದೀಪದ ಕೆಳಗೆ ಯಾವತ್ತೂ ಕತ್ತಲೇ
ಕೈಯಲ್ಲಿ ಶರಣಾರ್ಥಿ, ಕಂಕುಳಲ್ಲಿ ದೊಣ್ಣೆ
ನೀರೆ ನಿನ್ನ ಮಾತು ನಿಜವೇನೆ ನೀರ ಕಡಿದರೆ ಬೆಣ್ಣೆ ಬಂದಾದೇನೆ
ಇರುಳು ಕಂಡ ಭಾವೀಲಿ ಹಗಲು ಬಿದ್ದರು
ಸೊಲ್ಲಿನ ಬೇದ ತಿಳಿದ ಕಿರಿಯ ಎಲ್ಲರಿಗೂ ಹಿರಿಯ
ಪಾಲಿಗೆ ಬಂದದ್ದೆ ಪರಮಾನ್ನ.
ಬಿದ್ದಲ್ಲಿ ಸೋತಲ್ಲಿ ಹೊದಿದ್ದ ಬುದ್ಧಿ ತಪ್ಪಿತು
ರವಿ ಕಾಣದ್ದನ್ನು ಕವಿ ಕಂಡ
ಊರ ದನ ಕಾದು ದೊಡ್ಡ ಬೋರೇಗೌಡ ಅನ್ನಿಸಿಕೊಂಡ
ನೂಲಿನಂತೆ ಸೀರೆ; ತಾಯಿಯಂತೆ ಮಗಳು
ತರಗು (=ಒಣಗಿದ ಎಲೆ) ತಿಂಬುವುದೇ ಪರಮ ಸುಖ
ಆರಕ್ಕೇರಲ್ಲ, ಮೂರಕ್ಕಿಳಿಯಲ್ಲ
ಉಂಬಾಗ ಉಡುವಾಗ ಊರೆಲ್ಲ ನೆಂಟರು
ಯಥಾ ರಾಜಾ ತಥಾ ಪ್ರಜಾ
ತುಪ್ಪದಂಥಾ ಮಾತಿಗೆ ಒಪ್ಪಿಕೊಂಡು ತಿಪ್ಪೇ ಪಾಲಾದ
ಅಮ್ಮನವರು ಪಟ್ಟಕ್ಕೆ ಬಂದಾಗ,ಅಯ್ಯನವರು ಚಟ್ಟಕ್ಕೇರಿದರು
ಹೆಣ್ಣು ಹೊನ್ನು ಮಣ್ಣು ಇನ್ನೊಬರ ಕೈ ಸೇರಿದರೆ ಹೋದಂತೆ
ಹತ್ತಾರು ಜನ ಓಡಾಡೋ ಕಡೇಲಿ ಹುಲ್ಲು ಬೆಳೆಯೋಲ್ಲ.
ಎಂಥೆಂಥ ದೇವರಿಗೇ ಅಂತರಾಟ ಆಗಿರುವಾಗ ಕಾಲ್ಮುರುಕ ದೇವರಿಗೆ ಕೈಲಾಸವೇ
ಹಂಗಿನ ಅರಮನೆಗಿಂತಾ ಗುಡಿಸಿಲೇ ಮೇಲು
ನವಿಲನ್ನು ನೋಡಿ ಕೆಂಬೂತ ಪುಕ್ಕ ಕೆದರಿತಂತೆ
ಅರವಲ್ಲದ್ದು ಮಾಡಿದರೂ ತರವಲ್ಲದ್ದು ಮಾಡಬಾರದು
ಹುಚ್ಚರ ಮದುವೆಯಲ್ಲಿ ಉನ್ಡೋನೆ ಜಾಣ.
ಸುಳ್ಳು ಹೇಳಿದರೂ ನಿಜದ ತಲೆಯ ಮೇಲೆ ಹೊಡೆದಂಗೆ ಹೇಳಬೇಕು
ಮಳೆಗಾಲದೇಲಿ ಚಿಗಿಯೂದಿಲ್ಲ ಬೇಸಿಗೇಲಿ ಒಣಗೂದಿಲ್ಲ
ಕೈ ತೋರಿಸಿ ಅವಲಕ್ಷಣ ಅನ್ನಿಸಿಕೊ೦ಡರು.
ಹೆಣು ಮಕ್ಕಳು ಇದ್ದ ಮನೆ ಕನ್ನಡಿಯಂಗೆ
ಮಾತು ಅಂಗಾರ ಮೌನ ಬಂಗಾರ
ಸಾಮವೇದದ ಗಾನ ಭೂಮಿ ದಾನದ ಫಲವ ಜಂಬೂದ್ವೀಪದವರೇ ಬಲ್ಲರು
ಕೊಟ್ಟದ್ದು ತನಗೆ; ಬಚ್ಚಿಟ್ಟದ್ದು ಪರರಿಗೆ
ಗುಡಿಸಿದ ಮೇಲೆ ಕಸವಿರಬಾರದು ಬಡಿಸಿದ ಮೇಲೆ ಹಸಿವಿರಬಾರದು
ಅಲಗಿನ ಗಾಯಕ್ಕಿಂತ ಗಲಗಿನ ಗಾಯ ಹೆಚ್ಚು
ಯೋಗ್ಯತೆ ಅರಿಯದ ದೊರೆ ರೋಗ ಅರಿಯದ ವೈದ್ಯ ಒಂದೇ
ತನ್ನ ತಾನರಿತರೆ ತನ್ನರಿವೆ ಗುರು
ಗಾಳಿ ಗುದ್ದಿ ಮೈ ಕೈ ನೋಯಿಸಿಕೊಂಡಂತೆ
ಆಪತ್ತಿಗಾದವನೇ ನಿಜವಾದ ಗೆಳೆಯ.
ಕಾಲಿನದು ಕಾಲಿಗೆ; ತಲೆಯದು ತಲೆಗೆ
ಚಿಂದಿಯಾದರೂ ದೊಂದಿಗೆ (= ಪಂಜು) ಆಗುತ್ತದೆ.
ತಪ್ಪನೆ ಬಾ ಅಂದ್ರೆ ತಬ್ಬಲಿಕ್ಕೆ ಬಂದ ಹಾಗೆ
ಕಲ್ತ ಕೈ ಕದ್ದಲ್ಲದೆ ಬಿಡದು
ತನಗೇ ಇಲ್ಲದವ ಪರರಿಗೆ/ಮಂದಿಗೆ ಏನು ಕೊಟ್ಟಾನು
ಮೂರ್ತಿ ಚಿಕ್ಕದಾದ್ರು ಕೀರ್ತಿ ದೊಡ್ಡದು
ಆಶ್ಲೇಷ ಮಳೆ , ಈಸಲಾರದ ಹೊಳೆ.
ಆಳು ಮೇಲೆ ಆಳು ಬಿದ್ದು ದೋಣು ಬರಿದಾಯ್ತು
ಒಪ್ಪವಿಲ್ಲದವಳ ನಗೆ ನುಡಿ ನೋಟ ಎಂದೂ ಸಪ್ಪಗೆ
ಇಕ್ಕಲಾರದ ಕೈ ಎಂಜಲು ಇಕ್ಕುವಳು
ಗುರುವಿಗೇ ತಿರುಮಂತ್ರ
ಮದುವೇಲಿ ಗಂಡು,ಸ್ಮಶಾನ ಯಾತ್ರೇಲಿ ಹೆಣವಾಗೋ ಬಯಕೆ
ಆಗೋದೆಲ್ಲಾ ಒಳ್ಳೇದಕ್ಕೆ
ಕುಣಿಯಲಾರದವಳು ನೆಲ ಡೊಂಕು ಅಂದಳಂತೆ
ಮಕ ನೋಡಿ ಮಾರು ಹೋದ, ಗುಣ ನೋಡಿ ದೂರ ಹೋದ
ಆಸೆ ಮಾತು ಕೊಟ್ಟು ಬಾಸೆ ತಪ್ಪಬಾರ್‍ದು
ಸಗಣಿಯವನ ಸ್ನೇಹಕ್ಕಿ೦ತ ಗ೦ಧದವನ ಜೊತೆ ಗುದ್ದಾಟ ಮೇಲು.
ಮದ್ದು ಬುದ್ಧಿ ದೈವ ಒಲ್ಲದೆ ತಿದ್ದವು
ಇಟ್ಟ ವಿಭೂತಿ ಅಳಿದರೆ ಚಟ್ಟ ಹತ್ತಿದಂತೆ
ಕಿಡಿಯಿಂದ ಕಾಡ ಸುಡ ಬಹುದು
ಮುದುಕೀ ನಿನ್ನಾಟ ಮುಂದೈತಿ
ದುಡಿಮೆಯೇ ದೇವರು
ಹಾವೂ ಸಾಯಲಿಲ್ಲ ಕೋಲು ಮುರೀಲಿಲ್ಲ
ಭಾವಿಗೆ ಬಿದ್ರೆ,ಸಾಲಿಗ್ರಾಮ ಸಿಗ್‌ತಂತೆ
ತಟ್ಟನೆ ಬಾ ಅಂದ್ರೆ ತುಟಿ ಬಿಟ್ಟನಂತೆ
ಸಾಲ್ಗಾರ ಸುಮ್ಮನಿದ್ರು ಸಾಕ್ಷಿಗಾರ ಸುಮ್ಮನಿರ.
ಬಡವನ ಕೋಪ ದವಡೆಗೆ ಮೂಲ
ನಿಷ್ಠೆ ಇಲ್ಲದವನಿಗೆ ದೈವ ಬಟ್ಟಬಯಲು
ಗೆದ್ದೆತ್ತಿನ ಬಾಲ ಹಿಡಿದ ಹಾಗೆ
ಕಡ್ಡೀನ ಗುಡ್ಡ ಮಾಡು.
ಪ್ರಾರಬ್ಧ ಬಂದ ಕಾಲಕ್ಕೆ ಒಂದಲ್ಲ ಒಂದು ಕೇಡು
ಲಂಚ ಕೊಟ್ಟು ಮಂಚ ಏರು ವಂಚನೆ ಮಾಡಿ ಕೈಲಾಸ ಏರು
ವಿಶಾಖ ಮಳೆ ಪಿಶಾಚಿ ಹಿಡಿದ ಹಾಗೆ.
ಮಾಡಿದವರ ಪಾಪ ಆಡಿದವರ ಬಾಯಲ್ಲಿ.
ವೈದ್ಯರ ಹತ್ತಿರ ವಕೀಲರ ಹತ್ತಿರ ಸುಳ್ಳು ಹೇಳಬೇಡ.
ಬೆಟ್ಟ ಅಗೆದು ಇಲಿ ಹಿಡಿದಂತೆ
ರಂಭೆಯಂಥ ಹೆಣ್ತೀನ ಬಿಟ್ಟು ದೊಂಬಿತಿಯ ಹಿಂದೆ ಹೋದ
ಹೆತ್ತವರಿಗೆ ಹೆಗ್ಗಣ ಮುದ್ದು.
ಚೂರಿ ಹದ ಆದರೂ ಗಿಡ ಕಡಿಯಲಾರದು
ಚಿಂತೆ ಇಲ್ಲದವನಿಗೆ ಸಂತೆಯಲ್ಲಿಯೂ ನಿದ್ದೆ.
ಆವು ಕಪ್ಪಾದ್ರೆ ಹಾಲು ಕಪ್ಪೇನು
ಎಣ್ಣೆ ಚೆಲ್ಲಿದವನೂ ಅತ್ತ, ಕಾಯಿ ಚೆಲ್ಲಿದವನೂ ಅತ್ತ.
ದುಡ್ಡನ್ನು ಕಾದಿಟ್ಟುಕೊಳ್ಳದವನು ಹಣವಂತನು ಹೇಗೆ ಆದಾನು?
ಕೂಸು ಹುಟ್ಟೋಕೆ ಮುಂಚೆ ಕುಲಾವಿ ಹೊಲಿದ್ರು
ತಟಕಿನಿಂದ ತಟಪಟವಾಯಿತು ತಟಕು ಬಿದ್ದು ಮಠಾ ಕೆಡಿಸಿತು
ಅಲ್ಪರ ಸಂಗ ಅಭಿಮಾನ ಭಂಗ
ಬಿಸಿ ತುಪ್ಪ; ನುಂಗೋದಕ್ಕೂ ಆಗೊಲ್ಲ; ಉಗುಳೋದಕ್ಕೂ ಆಗೊಲ್ಲ
ಕಾಲಿಗೆ ಬಿದ್ದು ಕಾಲುಂಗರ ಉಚ್ಚಿಕೊಂಡರಂತೆ
ಸಾರು ಉಕ್ಕಬಾರದು ಹೆಣ್ಣು ಸೊಕ್ಕಬಾರದು.
ಕೊಣನಿಗೆ ಕೊಸೆಯೋ ಸಂಕಟ, ಎಮ್ಮೆಗೆ ಈಯೋ ಸಂಕಟ
ಅಳೀಮಯ್ಯ ನಾಚ್ಕಂಡ್ ನಾಚ್ಕಂಡು ನಾಲ್ಕು ಮುದ್ದೆ ತಿಂದ್ನಂತೆ, ಸೇರಲ್ಲ ಸೇರಲ್ಲ ಅಂತ ಸೇರಕ್ಕಿ ತಿಂದ್ನಂತೆ.
ಬಾಡಿಗೆ ಎತ್ತು ಎಂದು ಬಡಿದು ಬಡಿದು ಹೂಡಬಾರದು.
ಉಪ್ಪ ತಿಂದ ಮೇಲೆ ನೀರು ಕುಡಿಯಲೇ ಬೆಕು
ನೂಲಿನಂತೆ ಸೀರೆ, ಬೀಜದಂತೆ ವೃಕ್ಷ.
ಎರೆ-ತೆರೆ ಬಂಗಾರ, ಮರಳು ಬರೀ ಸಿಂಗಾರ!
ಕಳ್ಳನ ಕೈಯಲ್ಲಿ ಕೀಲಿಕೈ ಕೊಟ್ಟಂತೆ
ಮದುವೆ ಮಡಿನೋಡು ಮನೆ ಕಟ್ಟಿ ನೋಡು
ಪ್ರತ್ಯಕ್ಷ ಕಂಡರೂ ಪ್ರಮಾಣಿಸಿ ನೋಡು
ಹರಕಿನಲ್ಲಿ ಇಲಿ ಕಡಿಯಿತು.
ಹೌದಪ್ಪನ ಚಾವಡಿಯಲ್ಲಿ ಅಲ್ಲಪ್ಪನನ್ನು ಕೇಳುವವರಾರು ?
ಕಣ್ಣಿಗೆ ಕಂಡದ್ದೆಲ್ಲಾ ನುಣ್ಣಗಿರುವುದಿಲ್ಲ.
ಹೊಟ್ಟೆಗೆ ಹಿಟ್ಟಿಲ್ಲದಿದ್ದರೂ ಜುಟ್ಟಿಗೆ ಮಲ್ಲಿಗೆ ಹೂವು
ಮಾರಿಯ ಹೋತ ತೋರಣದ ಚಿಗುರು ಬಯಸಿತಂತೆ
ನೂರು ಜನಿವಾರ ಒಟ್ಟಿಗಿರಬಹುದು; ಮೂರು ಜಡೆ ಒಟ್ಟಿಗಿರುವುದಿಲ್ಲ
ತಾಯೀನೇ ತಿಂದೋಳು,ಅತ್ತೇನ ಬಿಟ್ಟಾಳೆಯೇ?
ಮ೦ತ್ರಕ್ಕಿ೦ತ ಉಗುಳೇ ಜಾಸ್ತಿ.
ತಿರುಪದ ಪುಟ್ಟಿಯಲ್ಲಿ ಶನೀಶ್ವರ ಕೂತ
ಪಾಲಿಗೆ ಬಂದದ್ದು ಪಂಚಾಮೃತ
ಚಿತ್ತಕ್ಕೆ ನಾನಾ ಕವಲು ಸತ್ಯಕ್ಕೆ ಒಂದೇ ಮಡಿಲು.
ತರುಬಿದವಗೂ (=ಅಡ್ಡಕಟ್ಟು, ಹೊಡೆ) ಓಡಿದವಗೂ ಸರಿಪಾಲು
ಓಡಿ ಹೋಗೊಳು ಮೊಸರಿಗೆ ಹೆಪ್ಪು ಹಾಕ್ತಾಳ
ಉಗುಳಿ ಉಗುಳಿ ರೋಗ, ಬೊಗಳಿ ಬೊಗಳಿ ರಾಗ.
ಆರಕ್ಕೆ ಹೆಚ್ಚಿಲ್ಲ, ಮೂರಕ್ಕೆ ಕಮ್ಮಿಯಿಲ್ಲ.
ಓಡಿದವನಿಗೆ ಓಣಿ ಕಾಣಲಿಲ್ಲ, ಹಾಡಿದವನಿಗೆ ಹಾದಿ ಕಾಣಲಿಲ್ಲ.
ಮಾತು ಮನೆ ಮುರೀತು, ತೂತು ಒಲೆ ಕೆಡಿಸ್ತು
ಮಕ್ಕಳಿಸ್ಕೂಲ್ ಮನೇಲಲ್ವೇ? (ಕೈಲಾಸಂ) ‘
ಊರಿಗೆಲ್ಲಾ ಒಬ್ಬಳೇ ಪದ್ಮಾವತಿ
ಅಟ್ಟಿಕ್ಕಿದೋಳಿಗಿನ್ನ ಬೊಟ್ಟಿಕ್ಕಿದೋಳು ಹೆಚ್ಚು
ಅಂತೂ ಇಂತೂ ಕುಂತಿ ಮಕ್ಕಳಿಗೆ ರಾಜ್ಯವಿಲ್ಲ
ಹುಟ್ಟಿದಾಗ ಬಂದದ್ದು ಹೂತಾಗ ಹೋದೀತೇನು
ಸಂತೇಲಿ ಮಂತ್ರ ಹೇಳಿದಂಗೆ ಸಂದೀಲಿ ಸಮಾರಾಧನೆ ಮಾಡ್ದಂಗೆ
ಊರು ಸೂರೆ ಹೋದ ಮೇಲೆ ಕೋಟೆ ಬಾಗಿಲು ಹಾಕಿದರಂತೆ
ಸತ್ತವರಿಗೆ ಸಂಗವಿಲ್ಲ ಕೆಟ್ಟವರಿಗೆ ನೆಂಟರಿಲ್ಲ
ಅಂಬಲಿ ಕುಡಿಯುವವನಿಗೆ, ಮೀಸೆ ಹಿಡಿಯುವವನೊಬ್ಬ
ತಾಳಕ್ಕೆ ತಕ್ಕ ಮೇಳ
ಸಾವಿರ ಕುದರೆ ಸರದಾರ ಮನೇ ಹೆಣ್ತಿಗೆ ಪಿಂಜಾರ
ಯುಕ್ತಿಯ ಮಾತು ಮಕ್ಕಳಿಂದಾದರೂ ತಿಳುಕೊ
ತಿಳಿದ ಕಳ್ಳ ತಿರಿಗಿದರೂ ಬಿಡ
ಹೆಣ್ಣು ತಿರುಗಿ ಕೆಟ್ಟಳು, ಗಂಡು ಕೂತು ಕೆಟ್ಟನು.
ತಾ ಕಳ್ಳೆ ಪರರ ನಂಬಳು, ಹಾದರಗಿತ್ತಿ ಗಂಡನ ನಂಬಳು
ಪಿಶಾಚಿ ಬಿಟ್ಟರೂ ನಿಶಾಚರ ಬಿಡ
ಬೆಳ್ಳಗಿರೋದೆಲ್ಲಾ ಹಾಲಲ್ಲ
ತನ್ನ ಮರ್ಯಾದೆ ಕೆಟ್ಟವ ಪರರ ಮರ್ಯಾದೆ ಇಟ್ಟಾನೆ?
ಕೋಣನಿಗೆ ಏನು ಗೊತ್ತು ಲತ್ತೆ ಪೆಟ್ಟು.
ಬಾಡಿಗೆ ಎತ್ತು ಅಂತ ಹೊಡಿದು ಬಡಿಬಾರದು.
ಕೊಟ್ಟೋನು ಕೋಡಂಗಿ, ಇಸ್ಕೊಂಡೋನು ಈರಭದ್ರ
ಮೊಸರ ಕಡೆದರೆ ಬೆಣ್ಣೆ ಒಸೆದು ಬಂತು
ಕೈ ಕೆಸರಾದ್ರೆ ಬಾಯಿ ಮೊಸರು
ಪಾಪಿ ಸಮುದ್ರ ಹೊಕ್ಕರೂ ಮೊಳಕಾಲುದ್ದ ನೀರು
ತಲೇ ಕೂದಲು ಉದ್ದವಿದ್ದವಳು ಹ್ಯಾಗೆ ಕಟ್ಟಿದರೂ ಚಂದ
ಕಣ ಕಾಯಬಹುದು, ಹೆಣ ಕಾಯಾಕೆ (ಬೇಸರದಿಂದ ಹೊತ್ತು ಕಳೆಯಲಿಕ್ಕೆ) ಆಗೊದಿಲ್ಲ
ಭಕ್ತಿ ಉಳ್ಳಾತಗೆ ಮುಕ್ತಿ ,ಶಕ್ತಿ ಉಳ್ಳಾತಗೆ ಭುಕ್ತಿ
ತಾಳಿಕೆ (ತಾಳ್ಮೆ) ಉಳ್ಳವನಲ್ಲಿ ಕೇಳಿದರೆ ಕಾಳು ಸಿಕ್ಕುವುದು
ನರಿಗೆ ಹೇಳಿದರೆ ನರಿ ತನ್ನ ಬಾಲಕ್ಕೆ ಹೇಳಿತಂತೆ
ರಾಯ ಸತ್ತರೂ ಹೆಣ ; ನಾಯಿ ಸತ್ತರೂ ಹೆಣ
ತಾರುಣ್ಯವೇ ರೂಪು ಕಾರುಣ್ಯವೇ ಗುಣ
ಮಾತು ಬೆಳ್ಳಿ; ಮೌನ ಬಂಗಾರ
ಹಾರೋ ಹಕ್ಕಿ ಪುಕ್ಕ ಎಣಿಸಿದಂತೆ
ಡಾವರ (=ನೀರಡಿಕೆ) ಹತ್ತಿದಾಗ ದೇವರ ಧ್ಯಾನ
ಅಡ್ಡ ಗೋಡೆ ಮೇಲೆ ದೀಪ ಇಟ್ಟಂತೆ
ಸೇರಿಗೆ ಸವ್ವಾ ಸೇರು
ಎಲ್ಲಾ ಬಣ್ಣ ಮಸಿ ನುಂಗಿತು
ಅಜ್ಜಿ ನೂತದ್ದೆಲ್ಲಾ ಅಜ್ಜನ ಉಡಿದಾರಕ್ಕೆ.
ಇದ್ದಲ್ಲಿ ಗವುಡ ಹೋದಲ್ಲಿ ಕಿವುಡ
ಸಹವಾಸ ದೋಷದಿಂದ ಸನ್ಯಾಸಿ ಕೆಟ್ಟ
ತಾಯಿ ಮಾಡಿದ ಹೊಟ್ಟೆ ಊರು ಮಾಡಿದ ಕೊಳಗ
ಯಸಗಾತಿಗೆ ದೋಸೆ ಕೊಡೊ ಹೊತ್ತಿಗೆ, ಮೂಸಿಮೂಸಿ ಮೂಗಿನ ಕೆಳಗೆ ಹಾಕಿದ್ಲು
ಉಂಬುವ ಜಂಗಮ ಬಂದರೆ ನಡೆಯೆಂಬರು, ಉಣ್ಣದ ಲಿಂಗಕ್ಕೆ ಬೋನ ಹಿಡಿಯೆಂಬರು
ಯಾರೂ ಇಲ್ಲದ ಊರಿಗೆ ಹೋಗಿ ನೀರು ಮಜ್ಜಿಗೆ ಬಯಸಿದಂತೆ
ತನ್ನ ಬೆನ್ನು ತಾನೇ ತಟ್ಟಿಕೊಂಡ ಹಾಗೆ
ಮಾಡಿದ ರಾಗಿ ಕೊಟ್ರೂ ಮೂರ್ಖನ ಸಹವಾಸ ಬೇಡವೆಂದಂತೆ.
ಊಟವಿಲ್ಲದ ಉಪದೇಶಿ ಊರಿಗೆಲ್ಲಾ ನಿವಾಸಿ.
ಹೊಟ್ಟೆಗೆ ಹಿಟ್ಟಿಲ್ಲ, ಜುಟ್ಟಿಗೆ ಮಲ್ಲಿಗೆ ಹೂವು.
ಸುರಿದು ಊಟ ಮಾಡು ಗೊರೆದು ನಿದ್ದೆ ಮಾಡು
ರಟ್ಟೆ ಮುರಿದು ರೊಟ್ಟಿ ತಿನ್ನು ಕಟ್ಟೆ ಹಾಕಿ ಅನ್ನ ಉಣ್ಣು
ಹೆಂಡತಿಯಿಲ್ಲದ ಮನೆ ದೇವರಿಲ್ಲದ ಗುಡಿ.
ಬಡವರ ಕಣ್ಣೀರಿಗೆ ಕರುಣೆ ಬಂದೀತೆ ಬೆಣ್ಣೆಗೆ?
ಕೂಳಿಗೆ ಕೇಡು ಭೂಮಿಗೆ ಭಾರ
ಮಾತು ಬೆಳ್ಳಿ, ಮೌನ ಬಂಗಾರ.
ಕೊ೦ಕಣ ಸುತ್ತಿ ಮೈಲಾರಕ್ಕೆ ಬ೦ದರು.
ಬೇಲೀನೇ ಎದ್ದು ಹೊಲ ಮೇಯ್ದಂತೆ
ಗಾಣಿಗಿತ್ತಿ ಅಯ್ಯೋ ಅಂದರೆ ನೆತ್ತಿ ತಂಪಾದೀತೇ?
ನೆತ್ತಿಯಲ್ಲಿ ಅಮೃತ ಹೊತ್ತು ಸಾವಿಗಂಜಿ ಜಗವೆಲ್ಲ ಸುತ್ತಾಡಿದ
ಅನುಕೂಲ ಸಿಂಧು; ಅಭಾವ ವೈರಾಗ್ಯ
ಹೆಡ್ಡಾಳಾದ್ರೂ ದೊಡ್ಡಾಳು ಮೇಲು
ಕೂಸು ಹುಟ್ಟುವ ಮೊದಲೇ ಕುಲಾವಿ ಹೊಲಿಸಿದರಂತೆ
ಆಡಿ ತಪ್ಪ ಬೇಡ ಓಡಿ ಸಿಕ್ಕ ಬೇಡ
ಗಂಡ ಹೆಂಡಿರ ಜಗಳದಲ್ಲಿ ಮಕ್ಕಳು ಜಗಳ ಕಲಿತವು
ಕೂರೆಗೆ ಹೆದರಿ ಸಂತೆಯಲ್ಲಿ ಸೀರೆ ಬಿಚ್ಚಿದರಂತೆ
ಉಗುರಿನಲ್ಲಿ ಹೋಗೋ ಚಿಗುರಿಗೆ ಕೊಡಲಿ ಏಕೆ ?
ತುಟಿ ಸುಮ್ಮನಿದ್ದರೂ ಹೊಟ್ಟೆ ಸುಮ್ಮನಿರದು
ಹಿರಿಯಕ್ಕನ ಚಾಳಿ ಮನೆಮಕ್ಕಳಿಗೆಲ್ಲ
ಕಪ್ಪರ ತಿಪ್ಪೇಲಿಟ್ಟರೆ ತನ್ನ ವಾಸನೆ ಬಿಟ್ಟೀತೇ
ಏಳರಲ್ಲಿ ಬರಲೋ? ಎಪ್ಪತ್ತರಲ್ಲಿ ಬರಲೋ?
ಮರ ಹುಟ್ಟಿದಲ್ಲೇ ಮರಣ. ಮನುಷ್ಯ ಹೋದಲ್ಲೇ ಮರಣ
ಲಕ್ಕಿ ಸೊಪ್ಪಾದರೂ ಲೆಕ್ಕದ ಮುದ್ದೆ ಉಣಬೇಕು
ದಾನ ಮಾಡೋಕೆ ಕನಲುವ ಮಾನವ ದಂಡ ಚಕಾರ ಎತ್ತದೆ ತೆರುವ
ತುಂಬಿದ ಕೊಡ ತುಳುಕುವುದಿಲ್ಲ
ತಾನು ಕೋತಿಯಾಗಿ ರತಿಯನ್ನು ಬಯಸುವುದೇ?
ಹುಚ್ಚಲ್ಲ,ಬೆಪ್ಪಲ್ಲ,ಶಿವಲೀಲೆ
ಹಣ ಇಲ್ದೋರು ಎದ್ದೂ ಬಿದ್ದಂಗೆ, ಗುಣ ಇಲ್ದೋರು ಇದ್ದೂ ಇಲ್ದಂಗೆ
ಬೆಕ್ಕಿಗೆ ಚೆಲ್ಲಾಟ ಇಲಿಗೆ ಪ್ರಾಣ ಸಂಕಟ.
ಗಿಡವಾಗಿ ಬಗ್ಗದ್ದು, ಮರವಾಗಿ ಬಗ್ಗೀತೇ?
ತಿಳಿದು ಒಡ್ಡೋ ತೀರು ಬಾಣವ
ಎದ್ದವನು ಗೆದ್ದಾನು
ಹಾದಿ ಹಣವಡ್ಡ ಹಾದರಗಿತ್ತಿ ಮನೆ ಯಾವುದು.
ಕಲ್ಲ ನಾಗರ ಕಂದರೆ ಹಾಲೆರೆವರು ದಿಟ ನಾಗರ ಕಂಡರೆ ಕೊಲ್ಲೆಂಬರು
ಹೆಣ್ಣಿಗೆ ಹೆಣ್ಣೇ ವೈರಿ
ಒಪ್ಪೊತ್ತು ಕೂಳು ತಪ್ಪಿ ಕಣ್ಣು ಕಾಣಾಕ್ಕಿಲ್ಲ ಕಿವಿ ಕೇಳಾಕ್ಕಿಲ್ಲ
ಅನ್ನ ಹಾಕಿದ ಮನೆಗೆ ಕನ್ನ ಹಾಕಿದಂತೆ
ನೆಂಟ ನೆರವಲ್ಲ ಕುಂಟ ಜೊತೆಯಲ್ಲ
ಇಬ್ಬರ ಜಗಳ ಮೂರನೆಯವನಿಗೆ ಲಾಭ.
ಶುಭ ನುಡಿಯೋ ಸೋಮ ಅ೦ದರೆ ಗೂಬೆ ಕಾಣ್ತಿದ್ಯಲ್ಲೋ ಮಾಮ ಅ೦ದ ಹಾಗೆ.
ಕೆಲಸವಿಲ್ಲದ ಕುಂಬಾರ ಮಕ್ಕಳ ಅಂ.. ತಟ್ಟಿದ
ಕಾಡಿಗೆ ಹೋಗೋ ವಯಸ್ಸಿನಲ್ಲಿ ಬ್ರಾಹ್ಮಣ ಓಂ ಕಲಿತ
ತಗಲುಗಾರನಿಗೆ (= ದಗಲ್ ಬಾಜ್) ಬಗಲ ಮೇಲೆ ಜ್ಞ್ಯಾನ
ಆರಕ್ಕೆ ಏರಲಿಲ್ಲ ಮೂರಕ್ಕೆ ಇಳಿಯಲಿಲ್ಲ
ಊರು ಬಾವಿಗೆ ಬಿದ್ದರೂ, ಊರ ಬಾಯಿಗೆ ಬೀಳಬಾರದು
ಮೊಟ್ಟೆ ತಿ೦ದವರಿಗೆ ಮರಿ ಇಲ್ಲ.
ಗದ್ದೆ ಸುಟ್ಟರೂ ಹಾಳಾಗದು ಗಾದೆ.
ಕಾಡಿಗೆ ಗಣ್ಣ ಚೆಲುವೆ ಮನೆಗೆ ಕೇಡು ತಂದಳು
ತಿಕ ಮಕ ಒಂಡೇ ತಿಪ್ಪಾಭಟ್ಟರಿಗೆ
ಕಡಗ ನೋಡಲಿ ಅ೦ತ ಗುಡಿಸಲು ಸುಟ್ಕೊ೦ಡ ಹಾಗೆ.
ಹಲ್ಲಿಲ್ಲದಿದ್ದರೂ ಚಕ್ಕುಲಿ ತಿನ್ನೋ ಚಪಲ.
ತೋಟದ ಬೇಲಿಯನ್ನು ದಾಟಿ ನೋಡದವರಾರು
ಕತ್ತೆಗೇನು ಗೊತ್ತು ಕಸ್ತೂರಿ ವಾಸನೆ
ಪಾಪಿ ಸಮುದ್ರ ಹೊಕ್ರೂ ಮೊಣಕಾಲುದ್ದ ನೀರು
ಸಾಲಗಾರನ ಮನೆಗೆ ಸವುದೆ ಹೊತ್ತರೆ ಮೇಲಣ ಬಡ್ಡಿಗೆ ಸಮವಾಯಿತು
ಊರಿಗೆ ಬಂದ ನೀರೆ ನೀರಿಗೆ ಬಾರದಿರುತ್ತಾಳೆಯೇ?
ಉರವಣಿಸಿ ಬರೋ ದುಃಖಕ್ಕೆ ಪರಿಣಾಮ ವೈರಿ
ಹತ್ತು ಜನಕ್ಕೆ ಬಿದ್ದ ನ್ಯಾಯ ಬೇಗ ಸಾಯಕಿಲ್ಲ
ನಾಯಿಗೆ ವಯಸ್ಸಾದ್ರೆ ಅಜ್ಜ ಅಂತಾರಾ?
ಬೆಳ್ಳಯ್ಯ ಕಾಕಾ ಅರಿವಯ್ಯ ಮೂಕ
ಕೋತಿ ತಾನೂ ಕೆಡೋದಲ್ದೆ ವನಾನೂ ಕೆಡಿಸ್ತು
ತಮ್ಮ ಕೋಳಿ ಕೂಗಿದ್ದರಿಂದಲೇ ಬೆಳಗಾಯಿತು ಎಂದುಕೊಂಡರು
ದೇಶ ಸುತ್ತು ; ಕೋಶ ಓದು.
ಹೆಣ್ಣು ಹುಟ್ಟಿದರೊಂದು ಹುಣ್ಣು ಹುಟ್ಟಿದ ಹಾಗೆ
ಇಲಿಯಾಗಿ ನೂರುದಿನ ಬಾಳೋದಕ್ಕಿಂತ ಹುಲಿಯಾಗಿ ಮೂರು ದಿನ ಬಾಳೋದು ಲೇಸು
ಯಾವ ದೇವರು ವರ ಕೊಟ್ಟರೂ ಗ೦ಡನಿಲ್ಲದೆ ಮಕ್ಕಳಾಗದು.
ಓದಿ ಓದಿ ಮರುಳಾದ ಕೂಚ೦ಭಟ್ಟ.
ಕೆಟ್ಟದಲ್ಲದ ಮೇಲೆ ಪಿಸುಗುಟ್ಟೋದು ಯಾಕೆ?
ಅರಸು ಆದೀಕ (=ಆದಾಯ) ತಿಂದ,
ತನ್ನ ಹಲ್ಲು ತಾ ಮರಕೊಂಡು ಇನ್ನೊಬ್ಬನ ಮೇಲೆ ದೂರು ಹೇಳಿದ
ಆಷಾಡದ ಗಾಳಿ ಬೀಸಿ ಬೀಸಿ ಬಡಿವಾಗ, ಹೇಸಿ ನನ್ನ ಜೀವ ಹೆಂಗಸಾಗಬಾರದೇ
ತುತ್ತು ತೂಕ ಕೆಡಿಸಿತು, ಕುತ್ತು ಜೀವ ಕೆಡಿಸಿತು
ಅಮ್ಮನ ಮನಸ್ಸು ಬೆಲ್ಲದ ಹಾಗೆ, ಮಗಳ ಮನಸ್ಸು ಕಲ್ಲಿನ ಹಾಗೆ
ಹುಣಸೆ ಹುಳಿಯೆಂದು ಅಂಬಡೆ ತಿಂದ ಹಾಗೆ.
ಒಲಿದರೆ ನಾರಿ ಮುನಿದರೆ ಮಾರಿ
ತಲೇ ಕೂದಲಿಲ್ಲದವಳು ತುರುಬು ಬಯಸಿದಳಂತೆ
ಬಡವ ನೀ ಮಡಗಿದ ಹಾಗಿರು
ಆಡೋದು ಮಡಿ ಉಂಬೋದು ಮೈಲಿಗೆ
ನಾ ಬಡವ ವಾಲಗ ಸಾವಕಾಶ ಊದು ಅಂದಂತೆ
ದೇವಸ್ಥಾನದಲ್ಲಿ ಊದಿನ ಕಡ್ಡಿ ಹಚ್ಚದಿದ್ದರೂ ಚಿಂತೆಯಿಲ್ಲ; … ಬಿಡಬೇಡ
ಇಕ್ಕಟ್ಟಾದರೂ ತನ್ನ ಗುಡಿಲೇ ಚಂದ
ಚಕ್ಕಂದದವನಿಗೆ ತಕ್ಕ ಫಲ ಸಿಕ್ಕುವುದು
ನೀರೆಯ ಓರೆಗಣ್ಣ ನೋಟಕ್ಕೆ ನಾಡೆಲ್ಲ ಕದಡಿತು
ವಿಶ್ವಾಸಿ ನೀನಾಗು, ಘಾತುಕಕ್ಕೆ ಬಗ್ಗದೆ ಮುನ್ನುಗ್ಗು.
ಏನೂ ಇಲ್ಲದವಗೆ ಭಯವಿಲ್ಲ
ಅಹಂಕಾರಕ್ಕೆ ಉದಾಸೀನವೇ ಮಟ್ಟು.
ಮನೆ ತುಂಬ ಮುತ್ತಿದ್ದರೆ …ಗೂ ಪೋಣಿಸಿಕೊಂಡರಂತೆ
ಜಟ್ಟಿ ಬಿದ್ದರೂ ಮೀಸೆ ಮಣ್ಣಾಗಲಿಲ್ಲ
ಆಡಿ ಉಂಡ ಮೈ ಅಟ್ಟು ಉಂಡೀತೇ?
ಕೊಂಕಣ ಸುತ್ತಿ ಮೈಲಾರಕ್ಕೆ ಬಂದ ಹಾಗೆ
ಸುಂಕದವನ ಮುಂದೆ ಸುಖದುಃಖವೇ
ಚೌಲದಾಗ ದೌಲು ಮಾಡು
ಊಟ ಬಲ್ಲವನಿಗೆ ರೋಗವಿಲ್ಲ, ಮಾತು ಬಲ್ಲವನಿಗೆ ಜಗಳವಿಲ್ಲ
ತನಗೇ ಜಾಗವಿಲ್ಲ; ಕೊರಳಲ್ಲಿ ಡೋಲು
ತಾನೂ ಕುಡಿಯ ಕುಡಿಯಲೀಸ
ರಸ ನೆತ್ತಿಗೇರಿ ಬಿಂಗಿಯಂತೆ ಆಡಿದ
ನೇರಲೆ ಹಣ್ಣು ಬಲು ಕಪ್ಪು ತಿಂದು ನೋಡಿದರೆ ಬಲು ಸವಿ
ಚಿತ್ತಾರದ ಅಂದವನ್ನು ಮಸಿ ನುಂಗಿತು
ಮಾಡುವವ ಉತ್ತಮ ಆಡಿ ಮಾಡದವ ಅಧಮ
ಕಾಲಕ್ಕೆ ತಕ್ಕಂತೆ ನಡಿಯಬೇಕು, ತಾಳಕ್ಕೆ ತಕ್ಕಂತೆ ಕುಣಿಯಬೇಕು
ಬೆಣ್ಣೇಲಿ ಕೂದಲು ತೆಗೆದ ಹಾಗೆ
ಎತ್ತು ಏರಿಗೆಳೀತು, ಕೋಣ ನೀರಿಗೆಳೀತು.
ತಬ್ಬಲಿಯಾದವನು ಬೊಬ್ಬೆ ಹಾಕಿ ಹೆಬ್ಬುಲಿಯ ಓಡಿಸ್ಯಾನೆ?
ಕೆಲಸವಿಲ್ಲದ ಬಡಗಿ ಮಗುವಿನ … ಕೆತ್ತಿದ
ಆರಕ್ಕೇರಲಿಲ್ಲ, ಮೂರಕ್ಕೀಳಿಯಲಿಲ್ಲ.
ವೇದ ಸುಳ್ಳಾದರೂ ಗಾದೆ ಸುಳ್ಳಾಗದು
ಸಮಯಕ್ಕಾದವನೆ ನೆಂಟ ಕೆಲಸಕ್ಕಾದವನೆ ಬಂಟ
ಮುದ್ದು ಮುದ್ದು ತೊಗಲೆ ಬಿದ್ದು ಬಿದ್ದು ನಗಲೆ
ಉಂಡರೆ ಉಬ್ಬಸ, ಹಸಿದರೆ ಸಂಕಟ .
ಸಡಗರದಲ್ಲಿ ಮದುವೆ ಮಾಡಿ ಈ ಹೆಣ್ಣು ಯಾರು ಅಂದಳಂತೆ
ಹಿತ್ತಿಲ ಗಿಡ ಮದ್ದಲ್ಲ
ಆಸೆಯೇ ದು:ಖಕ್ಕೆ ಮೂಲ
ತಮ್ಮ ಕಲಹಕ್ಕೆ ಐವರು ಪರರ ಕಲಹಕ್ಕೆ ನೂರಾ ಐವರು
ನೀನು ಹೋದ ದಾರಿಲಿ ಹಿ೦ದಕ್ಕ ಬರದೆ ಹೊಗ
ಹೊಸ ವೈದ್ಯನಿಗಿಂತ ಹಳೆ ರೋಗಿಯೇ ಮೇಲು
ಉಚ್ಚೆ ಕುಡಿದರೂ ತನ್ನಿಚ್ಚೇಲಿರಬೇಕು
ಹೆಣ್ಣಿನ ಬಗೆ/ಮನಸ್ಸ ಬಲ್ಲೋರಿಲ್ಲ
ತಾಯಿ ಮಾರಿಯಾದರೆ ತರಳನು ಎಲ್ಲಿ ಹೋದಾನು
ಕಷ್ಟಗಳು ಹೇಳದೆ ಕೇಳದೆ ಬರೋ ನೆಂಟರ ಹಾಗೆ.
ಹಲ್ಲಿದ್ರೆ ಕಡಲೆ ಇಲ್ಲ;ಕಡಲೆ ಇದ್ರೆ ಹಲ್ಲಿಲ್ಲ
ಮುತ್ತು ಹೆಚ್ಚಾಯ್ತು ಅಂತ ಎಲ್ಲೆಲ್ಲಿಗೋ ತೊಟ್ರಂತೆ.
ಗಂಧದ ಮರವನ್ನು ಸುಟ್ಟು ಬೂದಿಯ ತಂದು ಪೂಸಿದ
ಆನೆ ದಾನ ಮಾಡಿದವನು ಸರಪಣಿಗೆ ಜಗಳಾಡುವನೆ ?
ಕೋಳೀ ಕಾಲಿಗೆ ಗೆಜ್ಜೆ ಕಟ್ಟಿದರೆ ತಿಪ್ಪೆ ಕೆದರೋದು ಬಿಟ್ಟೀತೆ?
ಚಿಕ್ಕ ಬಾಯಲ್ಲಿ ದೊಡ್ಡ ಮಾತು.
ಕ೦ಡವರ ಮಕ್ಕಳನ್ನು ಭಾವಿಗೆ ತಳ್ಳಿ ಆಳ ನೋಡುವ ಬುದ್ಧಿ.
ಸೊಕ್ಕಿದ್ದು ಉಕ್ತದೆ ಉಕ್ಕಿದ್ದು ಒಲೆಗೆ ಹಾರ್ತದೆ
ಓದಿದ ಓದೆಲ್ಲ ಮೇದ ಕಬ್ಬಿನ ಹಿಪ್ಪೆ, ಓದಿದರ ಅರಿವು ಮೇದ ಕಬ್ಬಿನ ರಸ
ಹಳೇ ಗಂಡನ ಪಾದವೇ ಗತಿ
ಬಿಳಿ ಆನೆ ಸಾಕಿದ ಹಾಗೆ
ಮಾತು ಚಿಕ್ಕದಾಗಿರಲಿ, ಕೆಲಸ ಚೊಕ್ಕವಾಗಿರಲಿ.
ಉಪ್ಪಿಕ್ಕಿದವರನ್ನು ಮುಪ್ಪಿನ ತನಕ ನೆನೆ
ಮನೆಗೆ ಬೆಂಕಿ ಬಿದ್ದಾಗ ಬಾವಿ ತೋಡಿದರಂತೆ
ಹಾಲುಕ್ಕಿದ ಮನೇಲಿ ಮೇಲ್‍ಗರೀಲಿ.
ಅರಗಿನಂತೆ ತಾಯಿ, ಮರದಂತೆ ಮಕ್ಕಳು
ಉಪವಾಸ ಇರಬಹುದು , ಉಪದ್ರವ ತಾಳಲಾರದು.
ಲಕ್ಷ್ಮಿ ಚಂಚಲೆ
ಹಾರಾಡೋ ಅಪ್ಪುಂಗೆ ತೂರಾಡೋ ಮಗ ಹುಟ್ದಂಗೆ
ತಾತಾಚಾರ‍್ಯರ ಮನೆಗೆ ಏನಪ್ಪಣೆ?
ತಪಸ್ಸಿಗೆಂತ ಹೋಗಿ ಕುಪ್ಪಸಾ ಕಳಕೊಂಡ
ತಾನು ತಿಂದದ್ದು ಮಣ್ಣು ಹೆರರಿಗೆ ಕೊಟ್ಟದ್ದು ಹೊನ್ನು
ಬೆಕ್ಕು ಕಣ್ಣು ಮುಚ್ಚಿ ಹಾಲು ಕುಡಿದರೆ ಹೊಕ್ಕವರಿಗೆ ಕಾಣದೆ.
ಹೆತ್ತ ಅಮ್ಮನ್ನ ತಿನ್ನೋಳು ಅತ್ತೆಯಮ್ಮನ್ನ ಬಿಟ್ಟಾಳ
ಇದ್ದದ್ದು ಹೇಳಿದರೆ ಹದ್ದಿನಂತ ಮೋರೆ ಆಯಿತು
ಹಾರುವ ಆಳಲ್ಲ, ಬಾಳೆ ದಡಿಯಲ್ಲ
ತಲೇ ಕೂದಲಿದ್ದರೆ ಎತ್ತ ಬೇಕಾದರು ತುರುಬು ಹಾಕಿಕೊಳ್ಳಬಹುದು
ಮಂತ್ರ ತಂತ್ರ ದೈವ ಒಲ್ಲದೆ ತನಗೆ ಸ್ವಂತವಲ್ಲ
ದುಡ್ಡೇ ದೊಡ್ಡಪ್ಪ,ಬುದ್ಧಿ ಅದರಪ್ಪ
ಉಳ್ಳವನು ತಪ್ಪನೆ ಬಾ ಅಂದ್ರೆ ತಬ್ಬಲಿಕ್ಕೆ ಬಂದ ಹಾಗೆ
ಸಂತೆ ಸೇರೋಕೆ ಮೊದಲು ಗಂಟು ಕಳ್ಳರು ಸೇರಿದರು
ತರಲೆ ಕೇಳುವವ ಮರುಳಗಿಂತ ಕಡೆ
ತಫಾವತುಗಾರ ತಪ್ಪಿದರೆ ತಿಪ್ಪಯ್ಯಗೆ ಏನು ಕೋಪ
ಮಾಡಿದ್ದುಣ್ಣೋ ಮಹರಾಯ
ಯಾರದೊ ದುಡ್ಡು ಎಲ್ಲಮ್ಮನ ಜಾತ್ರೆ.
ಶ೦ಖದಿ೦ದ ಬ೦ದರೇನೇ ತೀರ್ಥ.
ಹಾಲಿಲ್ಲ ಬಟ್ಟಲಿಲ್ಲ ಗುಟುಕ್ ಅಂದ
ಸಾದೆತ್ತಿಗೆ ಎರಡು ಹೇರು (ಹೊರೆ)
ದೂಫ ಹಾಕಿದರೆ ಪಾಪ ಹೋದೀತೇ
ಹೆಂಡ್ರನ್ನ ಸಸಾರ (=ತಾತ್ಸಾರ) ಮಾಡಿದ್ರೆ ಸಂಸಾರ ನಿಸ್ಸಾರವಾಗ್ತದೆ
ತಾಯಿಯಂತೆ ಮಗಳು ನೂಲಿನಂತೆ ಸೀರೆ
ಅಪ್ಪನ ಮನೇಲಿ ಸೈ ಅನ್ನಿಸಿಕೊಂಡೋಳು, ಅತ್ತೆ ಮನೇಲೂ ಸೈ ಅನ್ನಿಸಿ ಕೊಳ್ತಾಳೆ
ಚರ್ಮ ಹೋದರೂ ಪರವಾಗಿಲ್ಲ, ಕಾಸು ಹೋಗಬಾರದು ಎಂದಂತೆ.
ಮಕ್ಕಳ ಬಾಯಿಗೆ ಹಣ್ಣು ಕೊಟ್ಟು ಮಣ್ಣು ಬಿಡಿಸು.
ತಳವಾರನಿಗೆ ಪಟ್ಟ ಕಟ್ಟಿದರೆ ಕುಳವಾರು (ಒಕ್ಕಲಿಗರ ಸಮೂಹ) ಹೋದೀತೋ?
ತನ್ನ ತಾ ತನ್ನಿಂದಲೇ ಅರಿಯಬೇಕು
ಹಂಪ್ಯಾಗ ಇರೂದಕ್ಕಿಂತ ತನ್ನ ಕೊಂಪ್ಯಾಗ ಇರೂದ್ ಲೇಸು
ಕೆಡುವ ಕಾಲಕ್ಕೆ ಬುದ್ಧಿ ಇಲ್ಲ ಮರಣ ಕಾಲಕ್ಕೆ ಮದ್ದಿಲ್ಲ
ಚರ್ಮ ಸುಕ್ಕಾದ್ರೆ ಮುಪ್ಪು, ಕರ್ಮ ಮುಕ್ಕಾದ್ರೆ ಮುಕ್ತಿ
ತುಂಬಿದ ಕೊಡ ತುಳುಕುವುದಿಲ್ಲ.
ಕೆಟ್ಟು ಪಟ್ಟಣ ಸೇರು ಇಟ್ಟು ಹಳ್ಳಿ ಸೇರು
ಕುಂತು ತಿಂದರೆ, ಕುಡಿಕೆ ಹೊನ್ನೂ ಸಾಲದು
ತುತ್ತಿಗೆ ತತ್ವಾರವಾದರೂ ನೆತ್ತಿತುಂಬಾ ನಾಮಕ್ಕೆ ಕಡಿಮೆ ಇಲ್ಲ
ಮುರವ ತಾವು ಮಾಡುವುದು ಗಂಧರ್ವರು ಮಾಡಿದರು
ಮೋಕ್ಷಮಂತ್ರ ತಿಳಿದವನಿಗೆ ವೇದಮಂತ್ರದ ಗೊಡವೆಯೆ?
ಸಂತೇಲಿ ಮಂತ್ರ ಹೇಳಿದಂಗೆ
ಊರು ಹೋಗು ಅನ್ನುತ್ತೆ; ಕಾಡು ಬಾ ಅನ್ನುತ್ತೆ
ರಂಗನ ಮುಂದೆ ಸಿಂಗನೆ ? ಸಿಂಗನ ಮುಂದೆ ಮಂಗನೆ ?
ಏನಾದರೇನು ತಾನು ತಾನಾಗದ ವರೆಗೆ
ಹಸಿದ ಹೊಟ್ಟೆ ತೋರಿಸಿದರೆ ಮಸೆದ ಕತ್ತಿ ತೋರಿಸಿದರು
ಬೆಳ್ಳಗಿರುವುದೆಲ್ಲಾ ಹಾಲಲ್ಲ.
ಎಂಜಲು ಕೈಯಲ್ಲಿ ಕಾಗೆ ಓಡಿಸದ ಬುದ್ಧಿ
ಅರ್ಧ ಆದ ಕೆಲಸವನ್ನು ಅರಸನಿಗೂ ತೋರಿಸಬೇಡ
ಏನಾದರೇನು ತಾನು ತಾನಾಗದವರೆಗೆ
ಒಂದೇ ರಟ್ಟೆ ಮುರಿದು ರೊಟ್ಟಿ ತಿನ್ನು
ಕಾಗೆಗೆ ಯಜಮಾನನ ಸ್ಥಾನ ಕೊಟ್ಟರೆ ಮನೆ ತುಂಬಾ ಪಿಷ್ಟ.
ಕುಲ ಬಿಟ್ಟರೂ ಛಲ ಬಿಡಬೇಡ.
ಮುಟ್ಟಿದೋರ ಮೇಲೆ ಬಿಟ್ಟೆ ನನ್ನ ಪ್ರಾಣ ಮಾಡೋರನ್ನು ಕಂಡರೆ ನೋಡು ನನ್ನ ಸಿರೀನ
ಹೆಂಡತಿಯ ಮಾತು ಆಗದಿರಲಿ ಕೊಯ್ದುಕೊಳ್ಳುವಂತೆ ಕತ್ತು.
ಮಂತ್ರಕ್ಕೆ ಮಾವಿನ ಕಾಯಿ ಉದುರುತ್ತದೆಯೆ ?
ಗುಬ್ಬಿಯ ಮೇಲೆ ಬ್ರಹ್ಮಾಸ್ತ್ರ
ಓದಿ ಓದಿ ಮರುಳಾದ ಕೋಚು ಭಟ್ಟ
ಹೌದಪ್ಪನ ಮನೇಲಿ ಹೌದಪ್ಪ, ಇಲ್ಲಪ್ಪನ ಮನೇಲಿ ಇಲ್ಲಪ್ಪ
ಊಟಕ್ಕೇಳೋ ಗು೦ಡ ಅ೦ದ್ರೆ ಯಾವಕ್ಕಿ ಬೇಯಿಸಿದ್ದೀ ಅ೦ದ.
ವಿನಾಶ ಕಾಲೇ ವಿಪರೀತ ಬುದ್ಧಿ
ಮನೆ ದೀಪ ಅಂತ ಮುತ್ತಿಟ್ಟರೆ ಸುಡದೇ ಇರುತ್ತಾ
ಇದ್ದ ಊರ ಸುದ್ದಿ ಇದ್ದಲ್ಲಿ ತೆಗೆಯ ಬಾರದು, ಬೇವೂರ ಸುದ್ದಿ ಹೋದಲ್ಲಿ ತೆಗೆಯ ಬಾರದು
ಸನ್ಯಾಸಿ ಬೆಕ್ಕು ಸಾಕಿದ ಹಾಗೆ
ಆಡುತ್ತಾ ಆಡುತ್ತಾ ಭಾಷೆ, ಹಾಡುತ್ತಾ ಹಾಡುತ್ತಾ ರಾಗ
ಹೊಕ್ಕು ಬಳಸಿದರೆ ನಂಟು
ಆನೆ ಮೆಟ್ಟಿದ್ದೇ ಸಂದು, ಸೆಟ್ಟಿ ಕಟ್ಟಿದ್ದೇ ಪಟ್ಟಣ
ಕಣ್ಣಿಗೆ ಒಪ್ಪವಿಲ್ಲದ ಹೆಣ್ಣು ಸಪ್ಪಗೆ ಕಂಡಳು
ಹೆಂಗಸರ ಬುದ್ಧಿ ಸೊಂಟದಿಂದ ಕೆಳಗೆ
ಗವುಜಿ ಗದ್ದಲ ಏನೂ ಇಲ್ಲ, ಗೋವಿಂದ ಭಟ್ಟ ಬಾವೀಲಿ ಬಿದ್ದ
ತೇದು ಇಕ್ಕಿದೋಳಿಗಿಂತ ಸಾದು ಇಕ್ಕಿದೋಳು ಹೆಚ್ಚು
ಅತಿಯಾದರೆ ಆಮೃತವೂ ವಿಷವೇ
ಗೆದ್ದವ ಸತ್ತ ಸೋತವ ಸತ್ತ
ಸಾಲ ಕೊಳ್ಳುವಾಗ ಒಂದುರಾಗ, ಸಾಲ ಹೊಳ್ಳಿ ಕೊಡುವಾಗ ನಾನಾರಾಗ
ಕಟ್ಟಿಕೊಂಡವಳು ಕಡೇ ತನಕ; ಇಟ್ಟುಕೊಂಡವಳು ಇರೋ ತನಕ
ಕತ್ತೆ ತಪ್ಪಿಸಿಕೊ೦ಡರೆ ಹುಡುಕುತಾರ್‍ಯೇ?
ಕೈಯ್ಯಲ್ಲೆ ಬೆಣ್ಣೆ ಇಟ್ಟುಕೊಂಡು,ತುಪ್ಪಕ್ಕೆ ಊರೆಲ್ಲ ಅಲೆದರಂತೆ
ಯಾರದೋ ದುಡ್ಡು; ಎಲ್ಲಮ್ಮನ ಜಾತ್ರೆ
ದೇವರು ಒಲಿದರೂ ಪೂಜಾರಿ ಒಲಿಯೊಲ್ಲ.
ಒಲ್ಲದ ಗಂಡನಿಗೆ ಮೊಸರಲ್ಲಿ ಕಲ್ಲು
ಪಡುವಣ ಮನೆಗೆ ಮೂಡಣ ದೀಪ
ನಿಯತ್ತಿಲ್ಲದೋರಿಗೆ ಬರಕತ್ತಿಲ್ಲ
ಉಪ್ಪು ತಿಂದ ಮ್ಯಾಲೆ ನೀರ ಕುಡಿಯಲೇಬೇಕು
ಹುಟ್ಟು ಗುಣ ಸುಟ್ಟರೂ ಹೋಗಲ್ಲ
ಚರ್ಮ ಸುಕ್ಕಾದ್ರೆ ಮುಪ್ಪು, ಕರ್ಮ ಮುಕ್ಕಾದ್ರೆ ಮುಕ್ತಿ.
ಗುಣಗೇಡಿ ಒಡನಾಟ ಯಾವಾಲು ದುಃಖದೇಲ್ ಇದ್ದಂತೆ
ಇಲಿ ಬಂತು ಎಂದರೆ ಹುಲಿ ಬಂತು ಎಂದರು
ಆಸೆ ಆಸ್ತಿ ಮಾಡ್ತು, ದುರಾಸೆ ನಾಶ ಮಾಡ್ತು.
ಕೊಡದ ಲೋಭಿ ಮಾತು ಕೊಡಲಿ ಪೆಟ್ಟು
ಚಿನ್ನದ ಸೂಜೀಂತ ಕಣ್ಣು ಚುಚ್ಚಿಕೊಳ್ಳುವುದಕ್ಕೆ ಆಗುತ್ತದೆಯೇ?
ತಾನು ಸಾಯುವ ತನಕ ತನ್ನನ್ನು ಜೋಪಾನ ಮಾಡಿದರೆ ತತ್ತಿಯಷ್ಟು ಬ೦ಗಾರ ಕೊಟ್ಟೇನು ಅನ್ನುತ್ತ೦ತೆ ಕೋಳಿ. .
ನಿಸ್ಸಹಾಯಕರ ಮೇಲೆ ಹುಲ್ಲುಕಡ್ಡಿ ಸಹ ಭುಸುಗುಡುತ್ತದೆ
ಹೆಸರಿಗೆ ಹೊನ್ನ ಹೆಗ್ಗಡೆ, ಎಸರಿಗೆ ಅಕ್ಕಿ ಇಲ್ಲ
ಒಳ್ಳೇ ರಸವಳ್ಳಿ ಕಳ್ಳೀಗಿಡವನ್ನ ಹಬ್ಬಿತು
ತಿರುಳು ಹೋಗಿ ಬೆಂಡು ಉಳೀತು
ಹಾಲು ಬಿಟ್ಟವರ ಮನೆಗೆ ಸೀಬಿ ಅಂದಂಗೆ.
ಹಣ ಇದ್ದೋರಿಗೆ ಏನೆಲ್ಲ, ಗುಣ ಇದ್ದೋರಿಗೆ ಏನಿಲ್ಲ
ಶಿವಾ ಅರಿಯದ ಸಾವು ಇಲ್ಲ ಮನಾ ಅರಿಯದ ಪಾಪ ಇಲ್ಲ
ಕೃತಿ ಇಲ್ಲದ ಮಾತು ಕಸ ಬೆಳೆದ ತೋಟವಿದ್ದಂತೆ.
ಯೋಗಿಗೆ ರಾಗ ಇರಬಾರದು ಭೋಗಿಗೆ ರೋಗ ಇರಬಾರದು
ಹನಿಹನಿಗೂಡಿದರೆ ಹಳ್ಳ; ತೆನೆತೆನೆಗೂಡಿದರೆ ಬಳ್ಳ
ಯೋಗ ಇದ್ದಷ್ಟೇ ಭೋಗ
ನಿನ್ನ ಹಿತು(ಮುದ್ದು),ನನ್ನ ತಿಂತು
ಹಟದಿಂದ ಹೆಣ್ಣು ಕೆಟ್ಟಳು ಚಟದಿಂದ ಗಂಡು ಕೆಟ್ಟ
ಅರೆಪಾವಿನವರ ಅಬ್ಬರ ಬಹಳ
ತಾರಕ್ಕೆ ಮೂರು ಸೇರು ಉಪ್ಪಾದರೂ ತರುವುದಕ್ಕೆ ಗತಿ ಬೇಡವೋ
ಉಗಿದರೆ ತುಪ್ಪ ಕೆಡುತ್ತದೆ, ನುಂಗಿದರೆ ಗಂಟಲು ಕೆಡುತ್ತದೆ
ಕೈಗೆ ಬಂದ ತುತ್ತು ಬಾಯಿಗೆ ಇಲ್ಲ
ಸಮಯಕ್ಕಾದ ಹುಲ್ಲು ಕಡ್ಡಿ ಸಹಸ್ರ ಹೊನ್ನು
ಸಾಲ ಅಂದ್ರೆ ಶೂಲ, ಕಾಲ ಅಂದ್ರೆ ಯಮ
ಅಜ್ಜಿಗೆ ಅರಿವೆ ಚಿಂತೆ ಮೊಮ್ಮಗಳಿಗೆ ಮಿಂ..ನ ಚಿಂತೆ
ಕು೦ಬಾರನಿಗೆ ವರುಷ, ದೊಣ್ಣೆಗೆ ನಿಮಿಷ.
ನಾಯಿ ಬೊಗಳಿದರೆ ದೇವಲೋಕ ಹಾಳೇನು
ತಾನು ತಿಂಬೋದು ಪಲ್ಲೆ ಸೊಪ್ಪು ಹಿರೇ ಕುದರೆ ಚೇಷ್ಟೆ
ಮಾಡೋದು ದುರಾಚಾರ, ಮನೆ ಮುಂದೆ ಬೃಂದಾವನ
ರಸ ಬೆಳೆದು ಕಸ ತಿನ್ನಬೇಡ, ಹಸ ಕಟ್ಟಿ ಮೊಸರಿಗೆ ಪರದಾಡಬೇಡ
ಕೋಣನೆರಡುಂ ಹೋರೆ ಗಿಡುವಿಂಗೆ ಮಿತ್ತು (ರಾಘವಾಂಕ)
ಬಾಳಿ ಬದುಕುವರಿಗೆ ಹಾಳೂರ ಸುದ್ದಿ ಯಾಕೆ
ನಾಯಿಗೆ ಹೊತ್ತಿಲ್ಲ;ನಿಲ್ಲಕ್ಕೆ ನೆಲೆಯಿಲ್ಲ
ತಿರುದುಂಬುವುದಕ್ಕೆ ಬೀದಿ ಹಂಚಿಕೊಂಡ ಹಾಗೆ
ತಾಳದಲ್ಲಿ ಜಾಣನಾದರೆ ತಾಳಿಕೆ ಇದ್ದೀತೇ
ಬಣ ಬಣ ಬೆಳಕು ಹರಿದಾಗ ಕತ್ತಲು ಎತ್ತಲೊ
ಓದಿ ಓದಿ ಮರುಳಾದ ಕೂಚು ಭಟ್ಟ
ಹಿರೀಮಗ ಆಗಬೇಡ,ಹಿತ್ತಿಲ ಕದ ಆಗಬೇಡ
ಇದ್ದೋರು ಮೂರು ಜನರಲ್ಲಿ ಕದ್ದೋರು ಯಾರು ?
ಗಂಡ ಹೆಂಡಿರ ಜಗಳ ಉಂಡು ಮಲಗುವತನಕ
ಹೊತ್ತನ್ನು ಕೊಲ್ಲುವ ಮೈಗಳ್ಳಗಿಂತ ಸತ್ತ ಹೆಣ ಲೇಸು
ಹೆತ್ತವರು ಹೆಸರಿಕ್ಕ ಬೇಕು
ಅಪ್ಪ ಹಾಕಿದ ಆಲದ ಮರಕ್ಕೆ ನೇಣು ಹಾಕಿಕೊ೦ಡ೦ತೆ.
ಕೆಟ್ಟು ಸೈರಿಸಬಲ್ಲೆ ಕೊಟ್ಟು ಸೈರಿಸಲಾರೆ
ಹಾಸಿಗೆ ಇದ್ದಷ್ಟು ಕಾಲು ಚಾಚು
ತಪ್ಪನೆ ಬಾ (=ತಕ್ಷಣ ಬಾ ) ಅಂದ್ರೆ ತಬ್ಬಲಿಕ್ಕೆ ಬಂದ ಹಾಗೆ
ಇಕ್ಕುವಳು ನಮ್ಮವಳಾದ್ರೆ ಕೊಟ್ಟಿಗೆಯಲ್ಲಾದರೂ ಉಣಲಕ್ಕು
ಹುಚ್ಚಲ್ಲ, ಬೆಪ್ಪಲ್ಲ, ಶಿವಲೀಲೆ
ಯಜಮಾನಿಲ್ಲದ ಮನೆ ಮೇಟಿ ಇಲ್ಲದ ಕಣ ಎರಡೂ ಒಂದೆ
ಮೇಲೆ ಬಿದ್ದ ಸೂಳೆ ಮೂರು ಕಾಸಿಗೂ ಬೇಡ
ಮೊಲ ಎಬ್ಬಿಸಿ …ಕ್ಕೆ ಕೂತರು
ಬಂಡಾಟದ ನಡೆ ಚೆಂದ ಮಿಂಡಾಟದ ನುಡಿ ಚೆಂದ
ಆದ್ರೆ ಒಂದು ಅಡಿಕೆ ಮರ, ಹೋದ್ರೆ ಒಂದು ಗೋಟಡಿಕೆ
ಅರಮನೆಯ ಮುಂದಿರಬೇಡ, ಕುದರೆಯ ಹಿಂದಿರಬೇಡ
ಕಬ್ಬು ಡೊ೦ಕಾದರೆ ಸಿಹಿ ಡೊ೦ಕೆ.
ತನ್ನ ತಾನರಿತರೆ ತಾನ್‍ಆದಾನು ತನ್ನ ತಾ ಮರೆತರೆ ತಾ ಹೋದಾನು
ರಾವಣನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ
ಆತುರಗಾರನಿಗೆ ಬುದ್ಧಿ ಮಟ್ಟ.
ಯಾವ ಕಾಲ ತಪ್ಪಿದರೂ ಸಾವು ಕಾಲ ತಪ್ಪದು
ವ್ಯಾಪಾರಕ್ಕೆ ನಿಮಿಷ ಬೇಸಾಯಕ್ಕೆ ವರುಷ
ಅಪ್ಪನ ಮನೇಲಿ ಸೈ ಅನ್ನಿಸಿಕೊಂಡೋಳು, ಅತ್ತೆ ಮನೇಲೂ ಸೈ ಅನ್ನಿಸಿಕೊಣ್ತಾಳೆ
ಎಲ್ಲರು ಆಸೆ ಬಿಟ್ಟರೆ ಇಲ್ಲಿಯೇ ಕೈಲಾಸ, ಎಲ್ಲವ ಬಯಸಿ ಭ್ರಮಿಸಿದರೆ ಇಲ್ಲಿಯೇ ನರಕ
ಬಿದ್ದಿನ ಬಂದು ಹಾಳು ಮನೇ ಯಜಮಾನ ಕುಂತು ಹಾಳು
ಸನ್ಯಾಸಿ ಸಂಸಾರ ಕಟ್ಟಿಕೊಂಡ ಹಾಗೆ
ಮೋಕ್ಷಕ್ಕೆ ಗ್ನಾನ ಬೇಕು ಯೋಗಕ್ಕೆ ಧ್ಯಾನ ಬೇಕು
ಸೂಳೆಗೆ ಮದುವೆ ಮಾಡಿದ ಹಾಗೆ
ಕೆತ್ತೆಂದರೆ ಕೆತ್ತು ಮೆತ್ತೆಂದರೆ ಮೆತ್ತು
ಮನಸ್ಸಿದ್ದರೆ ಮಾರ್ಗ
ಹುಟ್ಟು ಗುಣ ಸುಟ್ಟರೂ ಹೊಗೊದಿಲ್ಲ
ಕುಂಬಾರನಿಗೆ ವರುಷ; ದೊಣ್ಣೆಗೆ ನಿಮಿಷ
ಪರರ ಹಂಗಿಸಿ ಮಂಗ ಅನಿಸಿಕೊಂಡ
ಯುದ್ಧ ಕಾಲದಲ್ಲಿ ಶಸ್ತ್ರಾಭ್ಯಾಸ ಮುದ್ದೆ ಉಣ್ತಾ ಮಜ್ಜಿಗೆ ಓಡಾಟ
ದಿನಾ ಸಾಯೋರಿಗೆ ಅಳೋರ್ ‍ಯಾರು?
ಬಿಮ್ಮಗಿದ್ದಾಗ ಹಮ್ಮು, ಬಿಮ್ಮು ತಪ್ಪಿದಾಗ ದಮ್ಮು
ತರುಬಿದವಗೂ (=ಅಡ್ಡಕಟ್ಟು, ಹೊಡೆ) ಓಡಿದವಗೂ ಸರಿಪಾಲು ಕಷ್ಟ
ಉರಿಯೋ ಗಾಯಕ್ಕೆ ಉಪ್ಪು ಸವರಿದಂತೆ
ಹಾಳೂರಿಗೆ ಉಳಿದೋನೇ ಗೌಡ, ಬೆಂಗಳೂರಿಗೆ ಬಂದೋನೇ ಬಹದ್ದೂರ
ಕಳ್ಳನ ಮನಸ್ಸು ಹುಳ್ಳ ಹುಳ್ಳಗೆ
ಹಾಗಲ ಕಾಯಿಗೆ ಬೇವಿನ ಕಾಯಿ ಸಾಕ್ಷಿ
ರಾಮ ಅನ್ನೋ ಕಾಲದಲ್ಲಿ ರಾವಣ ಬುದ್ಧಿ
ಹಾಳೂರಿಗೆ ಉಳಿದವನೇ ಗೌಡ
ಕೊಟ್ಟೆ ಅಂತ ಹೇಳಿ ಕೊಡದವನ ಮಾತು ಬೆನ್ನಿಗೆ ಚೂರಿ ಇರಿದಂತೆ
ಹಾಲು ಕುಡಿದ ಮಕ್ಕಳೇ ಬದುಕಲಿಲ್ಲ ವಿಷ ಕುಡಿದ ಮಕ್ಕಳು ಬದುಕ್ಯಾರೆ
ಎತ್ತು ಮಾರಿದವಗೆ ಹಗ್ಗದ ಆಸೆಯೇ
ರಾಗ ನೆನೆಪಾದಾಗ ತಾಳ ಮರೆತು ಹೋಯಿತಂತೆ
ಮೀಸೆ ಬಂದಾಗ ದೇಶ ಕಾಣದು ಮೊ.. ಬಂದಾಗ ನೆಲ ಕಾಣದು
ಮುಸುಕಿನೊಳಗೆ ಗುದ್ದಿಸಿಕೊ೦ಡ೦ತೆ.
ಗಂಡ ಹೆಂಡಿರ ಜಗಳ ಉಂಡು ಮಲಗೋ ತನಕ.
ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ.
ಎಂಟು ವರ್ಷಕ್ಕೆ ನನ್ನ ಮಗ ದಂಟಾದ
ತಿನ್ನೋದು ತವಡು ನಡೆಯೋದು ವೈಯಾರ
ಸೀರಿಗೇಡಿಗೆ ಸೀರೆ ಉಡಿಸಿದರೆ ಕೆರಿ ದಂಡಿ ಮ್ಯಾಗ ನಿಂತು ಕೇಕೆ ಹಾಕಿದಳು.
ಕೆಟ್ಟ ಮೇಲೆ ಬುದ್ಧಿ ಬಂತು, ಅಟ್ಟ ಮೇಲೆ ಒಲೆ ಉರಿಯಿತು
ಸಡಗರದಲ್ಲಿ ಮದುವೆ ಮಾಡಿ ಈ ಹೆಣ್ಣು ಯಾರು ಅಂದಳಂತೆ ಅತ್ತೆ
ಹೊಳೆಯುವುದೆಲ್ಲಾ ಚಿನ್ನವಲ್ಲ.
ಕಂಡದ್ದು ಕಾಣೆ ಉತ್ತಮ ಕಂಡದ್ದು ಕಂಡೆ ಮಧ್ಯಮ, ಕಾಣದ್ದು ಕಂಡೆ ಅಧಮ
ರಾಗಿಕಲ್ಲು ತಿರುಗುವಾಗ ರಾಜ್ಯವೆಲ್ಲಾ ನೆಂಟರು
ಉಂಡದ್ದೇ ಉಗಾದಿ ; ಮಿಂದದ್ದೇ ದೀವಳಿಗೆ
ಕತ್ತೆಗೆ ಯಾಕೆ ಹತ್ತಿಕಾಳು?
ವಶಗೆಡದೆ ಹಸಗೆಡಲ್ಲ
ತಾಯಿ ಮಾಡಿದ ಹೊಟ್ಟೆ ;ಊರು ಮಾಡಿದ ಕೊಳಗ
ಪೀತಾಂಬರ ಉಟ್ಟರೂ ಕೊತ್ತಂಬರಿ ಮಾರೋದು ತಪ್ಪಲಿಲ್ಲ.
ಒಂದು ಕಣ್ಣಿಗೆ ಬೆಣ್ಣೆ ಮತ್ತೊಂದು ಕಣ್ಣಿಗೆ ಸುಣ್ಣ
ಹುಚ್ಚರ ಮದುವೆಯಲ್ಲಿ ಉಂಡವನೇ ಜಾಣ.
ಶಿವಪೂಜೇಲಿ ಕರಡಿ ಬಿಟ್ಟ ಹಾಗೆ.
ಈಚಲ ಮರದ ಕೆಳಗೆ ಕುಳಿತು ಮಜ್ಜಿಗೆ ಕುಡಿದ ಹಾಗೆ
ಇಮ್ಮನದಿಂದ ಸುಮ್ಮನೆ ಕೆಟ್ಟೆ
ಗೋರ್ಕಲ್ಲ ಮೇಲೆ ಮಳೆಗರೆದಂತೆ
ಅತ್ತೆ ಆಸ್ತೀನ ಅಳಿಯ ದಾನ ಮಾಡಿದ
ದುಡ್ಡಿಗೆ ದುಡ್ಡು ಗಂಟು ಹಾಕಿದ್ಯೋ? ಬೆನ್ನಿಗೆ ಹೊಟ್ಟೆ ಅಂಟು ಹಾಕಿದ್ಯೋ?
ಛತ್ರದಲ್ಲಿ ಭೋಜನ , ಮಠದಲ್ಲಿ ನಿದ್ದೆ .
ಠಕ್ಕು ಇರುವವನಿಗೆ ಠಿಕಾಣಿ ಸಿಗದು.
ಹೊಟ್ಟೇಲಿರೋ ಸಿಟ್ಟು ರಟ್ಟೇಲಿಲ್ಲ
ಹೂ-ದವರು ‌ಯಾರು ಅಂದರೆ ಮಾಸಿದ ಸೀರೆಯವರು.
ಹೊಳೆಗೆ ಸುರಿದರೂ ಅಳೆದು ಸುರಿ
ಜಟ್ಟಿ ಜಾರಿ ಬಿದ್ದರೂ ಮೀಸೆ ಮಣ್ಣಾಗಲಿಲ್ಲ
ಉಂಡ ಮನೆ ಜಂತೆ ಎಣಿಸಬಾರದು
ಬಾಯಲ್ಲಿ ಬೆಲ್ಲ ಕರುಳು ಕತ್ತರಿ
ಹೇಳೋರು ಹೆಡ್ಡರಾದರೆ ,ಕೇಳೋರು ಕಿವುಡರೇ?
ಚೆಲ್ಲಿದ ಹಾಲಿಗೆ, ಒಡೆದ ಕನ್ನಡಿಗೆ ಎ೦ದೂ ಅಳಬೇಡ.
ಗಂಜಿ ಕುಡಿಯೋನಿಗೆ,ಮೀಸೆ ಹಿಡಿಯುವವನೊಬ್ಬ
ಒಳ್ಳೊಳ್ಳೆಯವರು ಉಳ್ಳಾಡುವಾಗ ಗುಳ್ಳವ್ವ ಪಲ್ಲಕ್ಕಿ ಬೇಡಿದಳಂತೆ
ಸಜ್ಜನರ ಸಂಗ ಹೆಜ್ಜೇನು ಸವಿದಂತೆ
ಕಳ್ಳನ್ನ ನಂಬಿದ್ರೂ ಕುಳ್ಳನ್ನ ನಂಬಬಾರದು
ಯಾರೂ ಇಲ್ಲದ ಮನೆಗೆ ನಾನು ಜೋಗಪ್ಪ ಅಂದ
ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ
ಬಾಯಿದ್ದೋರು ಬರಗಾಲದಲ್ಲೂ ಬದುಕಿದರು
ಹಣ್ಣೆಲೆ ಉದುರುವಾಗ ಚಿಗುರೆಲೆ ನಗುತಿತ್ತು
ಹುಲಿಗೆ ಹುಣ್ಣು ಎದ್ದ ಹಾಗೆ
ಆಕಾಶ ನೋಡೊದಕ್ಕೆ ನೂಕುನುಗ್ಗಲೆ ?
ಸಾವಿರ ಕುದುರೆ ಸರದಾರ, ಮನೆ ಹೆಂಡತಿ ಕಾಸ್ತಾರ
ಶುಭ ನುಡಿಯೋ ಸೋಮ ಅಂದರೆ ಗೂಬೆ ಕಾಣ್ತಲ್ಲೋ ಮಾಮ ಅಂದ ಹಾಗೆ
ಒಂದರ ಮೊದಲೊಳಗೆ ಬಂದಿದೆ ಜಗವೆಲ್ಲ
ತೋಳ ಬಿದ್ದರೆ ಆಳಿಗೊಂದು ಕಲ್ಲು
ದುಷ್ಟರ ಕ೦ಡರೆ ದೂರ ಇರು.
ದೀಪದ ಕೆಳಗೆ ಯಾವತ್ತೂ ಕತ್ತಲೆ.
ಅಂಗೈ ತೋರಿಸಿ ಅವಲಕ್ಷಣ ಅಂತ ಅನ್ನಿಸಿಕೊಂಡರಂತೆ
ತಾಟುಗಾರ (ಗರ್ವದ ಮನುಷ್ಯ) ಆಟಕ್ಕೆ ಹೋಗಿ ಮೋಟಗಾರನಾಗಿ (ತನ್ನಿಂದಲೇ ತಾ ಮೂರ್ಕನಾಗುವುದು) ಬಿದ್ದ
ತಾಮ್ರದ ನಾಣ್ಯ ತಾಯಿ ಮಕ್ಕಳನ್ನ ಕೆಡಿಸ್ತು
ಸವತಿ ಸಣ್ಣವಳಲ್ಲ ದಾಯಾದಿ ಚಿಕ್ಕವನಲ್ಲ
ಹಕ್ಕಿ ತೆನೆ ತಿಂದು ಹಿಕ್ಕೆ ಇಕ್ಕಿ ಹೋಯ್ತು
ಸಿರಿ ಸೋಂಕಿದವರ ಪರಿ ಬೇರೆ
ಬಿದ್ದ ಪೆಟ್ಟಿಗಿಂತ ನಕ್ಕ ಪೆಟ್ಟು ಹೆಚ್ಚು.
ತೇಗಿ ತೇಗಿ ಬೀಗಿ ಬಿದ್ದ ತಾಮ್ರದ ನಾಣ್ಯ
ತಪ್ಪಿ ಬಿದ್ದವನಿಗೆ ತೆಪ್ಪ ಏನು ಮಾಡೀತು
ಕೂಟಸ್ಥ ಇಲ್ದೋನ ಓದು ಗಿಳಿ ಕಲ್ತ ಪಾಠದಂತೆ
ಅಜ್ಜ! ಮದುವೆ ಅಂದ್ರೆ ನನಗೋ ಅಂದ
ಹತ್ತರೊಟ್ಟಿಗೆ ಹನ್ನೊಂದು
ಹಾಕು ಮಣೆ,ನೂಕು ಮಣೆ,ತಳ್ಳು ಮಣೆ
ತೊಳೀಲಿಲ್ಲ ಬಳೀಲಿಲ್ಲ ಮೂಗೇಕೆ ಮಸಿಯಾಯ್ತು
ಅಂಕೆ ಇಲ್ಲದ ಚತುರೆ, ಲಗಾಮು ಇಲ್ಲದ ಕುದುರೆ
ಹರಿದಿದ್ದೇ ಹಳ್ಳ, ನಿಂತಿದ್ದೇ ತೀರ್ಥ.
ತಟ್ಟು ಇದ್ದರ‍ೇ ತಟಾಯಿಸಿ ನಡದಾನು
ಕೊಡೋದು ಕೊಳ್ಳೋದು ಗಂಡಂದು, ಮಜ ಮಾಡೋದು ಹೆಂಡ್ರುದ್ದು
ತಮ್ಮ ಒಳ್ಳೆಯವನೇ ಸರಿ ಒಮ್ಮಾನಕ್ಕಿಗೆ ಮಾರ್ಗವಿಲ್ಲ
ತನ್ನ ಎಲೇಲಿ ಕತ್ತೆ ಸತ್ತು ಬಿದ್ದಿದ್ರೆ , ಪಕ್ಕದ ಎಲೇಲಿ ನೊಣ ಹೊಡೆಯಕ್ಕೆ ಹೋದ
ರೊಟ್ಟಿ ಜಾರಿ ತುಪ್ಪಕ್ಕೆ ಬಿದ್ದ೦ತೆ.
ಒಲುಮೆಗೆ ನೋಟಬೇಟವೇ ಮೊದಲು
ಹಾವಿಗೆ ಹಾಲೆರೆದರೇನು ಫಲ
ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದರಂತೆ.
ಹಾದೀಲಿ ಹೋಗುವವನ ಕೆಣಕ ಅವನು ಬಂದು ನಿನ್ನ ತದಕ
ಕೋರಿ ಒಲುಮೆ ತನಗೆ ಅನ್ನೋ ಮಾರನಿಗೆ ಮಾರಿ ಹಿಡಿಯಿತು.
ಇಲ್ಲದ ಬದುಕು ಮಾಡಿ ಇಲಿಗೆ ಚಣ್ಣ ಹೊಲಿಸಿದರು
ಮನೆ ಮಕ್ಕಳು ಮಾಣಿಕ್ಯ, ನೆರೆಮನೆ ಮಕ್ಕಳು ಕಸಿವಿಸಿ.
ಮಿಂಚಿಹೋದ ಕಾರ್ಯಕ್ಕೆ ಚಿಂತಿಸಿ ಫಲವೇನು ?
ಕೋತಿಯಂಥೋನು ಕೆಣಕಿದ, ಮೂತಿಗೆ ಹೆಟ್ಟಿಸಿಕೊಂಡು ತಿಣಕಿದ
ಎಣ್ಣೆ ಬಂದಾಗ ಕಣ್ಣು ಮುಚ್ಚಿಕೊಂಡರು
ಸಾಯ್ತೀನಿ ಸಾಯ್ತೀನಿ ಅಂದೋಳು ಸಾವಿರ ಮುದ್ದೆ ನುಂಗಿದಳಂತೆ.
ಪಾಪಿಯ ದೇವರೆಂದು ಪಾಪೊಸಿನಿಂದ ಬಡಿಯಬಾರದು.
ನೀರೆಯ ಓರೆಗಣ್ಣ ನೋಟಕ್ಕೆ ನಾಡೆಲ್ಲ ಇರಿದಾಡಿತು/ಕಾದಡಿತು
ಸ್ವಾರ್ಥ ಉಳಿಸಿದವ ಪಾಪಾತ್ಮ, ನಿಸ್ವಾರ್ಥ ಗಳಿಸಿದವ ಪುಣ್ಯಾತ್ಮ.
ನಾಯಿಗೆ ಕೆಲಸಿಲ್ಲ, ನಿಲ್ಲೋಕೆ ಹೊತ್ತಿಲ್ಲ
ಹೋದ್ರೆ ಒಂದು ಕಲ್ಲು, ಬಂದ್ರೆ ಒಂದು ಹಣ್ಣು
ಕೊಟ್ಟೋನು ಕೋಡಂಗಿ;ಇಸಕೊಂಡೋನು ಈರಭದ್ರ
ತಮ್ಮ ಕೋಳಿ ಕೂಗಿದ್ದರಿ೦ದಲೇ ಬೆಳಗಾಯ್ತು ಎ೦ದುಕೊ೦ಡರು.
ಕುಂಬಾರಂಗೆ ವರುಷ; ದೊಣ್ಣೆಗೆ ನಿಮಿಷ
ತಳಿಗೆ ಚಂಬು ಹೋದ ಮೇಲೆ ಮಳಿಗೇ ಬಾಗಿಲು ಮುಚ್ಚಿದ ಹಾಗೆ
ಮುಲಾಜಿಗೆ ಬಸುರಾಗಿ ಹೇರೋಕೆ ತಾವಿಲ್ಲ
ಪಾಪಿ ಚಿರಾಯು
ಹೊಳೆ ದಾಟಿದ ಮೇಲೆ ಅಂಬಿಗನ ಹಂಗೇಕೆ ಎಂದರಂತೆ
ಕೇಡು ಬರೋ ಕಾಲಕ್ಕೆ ಬುದ್ಧಿಗೇಡು
ಕಚ್ಚುವ ನಾಯಿ ಬೊಗಳದು ಬೊಗಳುವ ನಾಯಿ ಕಚ್ಚದು
ಹಳೆ ಚಪ್ಪಲಿ, ಹೊಸಾ ಹೆಂಡತಿ ಕಚ್ಚೊಲ್ಲ
ಹಗಲು ಅರಸನ ಕಾಟ ಇರುಳು ದೆವ್ವದ ಕಾಟ
ರಾವಣನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆಯೇ ?
ಅಬದ್ಧಕ್ಕೆ ಅಪ್ಪಣೆಯೇ ಅಂದ್ರೆ ಬಾಯಿಗೆ ಬಂದಷ್ಟು
ಶೆಟ್ಟಿ ಸುಂಗಾರ ಆಗೋದರೊಳಗೆ ಪಟ್ಟಣ ಹಾಳಾಯ್ತು
ಜ್ಯೋತಿಯ ನೆಲೆ ಅರಿತವನೇ ಯೋಗಿ
ಹೋದ ಬದುಕಿಗೆ ಹನ್ನೆರಡು ದೇವರು
ಊರು ಅಂದ ಮೇಲೆ ಹೊಲಗೇರಿ ಇಲ್ಲದೆ ಇರುತ್ತದೆಯೇ?
ಹೇಳಿ ಕಳಿಸಿದರೆ ಮೊಸರು ಕೊಟ್ಟಾರೆ ತಾನೂ ಕುಡಿಯ ಕುಡಿಯಲೀಸ
ಸಜ್ಜನರ ಮಾತು ಸಿಹಿ, ದುರ್ಜನರ ತುತ್ತು ಕಹಿ.
ಅತ್ತೆಗೊಂದು ಕಾಲ, ಸೊಸೆಗೊಂದು ಕಾಲ.
ಬೆನ್ನ ಹಿಂದೆ ಉರಿಯೋ ತನ್ನ ಸುಖವೇ ಲೋಕದ ಸುಖ, ತನ್ನ ಕಷ್ಟವೇ ಲೋಕದ ಕಷ್ಟ
ಉಳೋ ಎತ್ತಾದರೆ ಇರೋ ಊರಿನಲ್ಲಿ ಬೆಲೆಯಾಗದೇ.
ಹೋದಾ ಪುಟ್ಟಾ, ಬಂದಾ ಪುಟ್ಟಾ, ಪುಟ್ಟನ ಕಾಲಿಗೆ ನೀರಿಲ್ಲ
ಸುಂಕದೋನ ಹತ್ರ ಸುಖದುಃಖ ಹೇಳಿಕೊಂಡ ಹಾಗೆ
ಇಲಿಯ ವ್ಯಾಜ್ಯಕ್ಕೆ ಬೆಕ್ಕು ಸಾಕ್ಷಿ
ಸುಳ್ಳು ದೇವರಿಗೆ ಕಳ್ಳ ಪೂಜಾರಿ
ತಾಮ್ರದ ಕಾಸು ತಾಯಿ ಮಕ್ಕಳನ್ನು ಬೇರೆ ಮಾಡ್‌ತಂತೆ
ತರುವವ ಹೋದಮೇಲೆ ಮರಗುವವರುಂಟೇ
ಇಡೀ ಮುಳುಗಿದರೂ ಮೂಗು ಮೇಲೆ
ಇದ್ದದ್ದು ಹೋಯಿತು ಮದ್ದಿನ ಗುಣದಿಂದ
ತಾಯಿಗಿಂತ ಬಂಧುವಿಲ್ಲ; ಉಪ್ಪಿಗಿಂತ ರುಚಿಯಿಲ್ಲ
ಬೆಕ್ಕು ಕಣ್ಮುಚ್ಚಿ ಹಾಳು ಕುಡಿದರೆ ಜಗತ್ತಿಗೆ ಗೊತ್ತಾಗಲ್ವಾ?
ಇಲಿ ಹೆಚ್ಚಿದವೆಂದು, ಮನೆಗೆ ಉರಿ ಇಡ ಬಾರದು
ಪಾಪ ಅನ್ನೋದಕ್ಕೆ ಕೋಪವೇ ನೆಲೆಗಟ್ಟು
ದಾರವಿದ್ದರೆ ಮುತ್ತು ಹಾರವೆಂದನಿಸಿತ್ತು
ಅಕ್ಕಸಾಲಿ, ಅಕ್ಕನ ಚಿನ್ನವನ್ನೂ ಬಿಡುವುದಿಲ್ಲ.
ತಿಂಗಳ ಬೆಳಕಾಗಿ ಬಾಳಿನಲ್ಲಿ ತಂಗಾಳಿ ಹಿಂಗದಿರಲಿ
ಮನೆಗೆ ಮಾರಿ, ಪರರಿಗೆ ಉಪಕಾರಿ
ಹುಟ್ಟುವವನ ಅಣ್ಣ ಬೆಳೆಯುವವನ ತಮ್ಮ
ಇಬ್ಬರ ನ್ಯಾಯ, ಮೂರನೇಯವನಿಗೆ ಆದಾಯ
ಕಾಮಾಲೆ ಕಣ್ಣೊನಿಗೆ ಕಂಡಿದ್ದೆಲ್ಲ ಹಳದಿ ನೇ
ಲಲನೆಯರ ಒಲುಮೆ ತೊಲಗಿದರೆ ಇಲ್ಲ
ಕಾಸಿಗೆ ತಕ್ಕ ಕಜ್ಜಾಯ.
ತಿಪ್ಪೇ ಮೇಲಣ ದೀಪ ಉಪ್ಪರಿಗೆಯ ಮೇಲೆ ಬಂದೀತೋ?
ಪ್ರದಕ್ಷಿಣೆ ಹಾಕಿದರೆ ಪ್ರಯೋಜನವಿಲ್ಲ,
ತಿರಿತಿರಿಗಿ ತಿಮ್ಮಪ್ಪನ ಹತ್ತರ ಹೋದರೆ ತಿರಿದುಂಬೋದು ತಪ್ಪೀತೇ?
ಉತ್ತಮನು ಎತ್ತ ಹೋದರೂ ಶುಭವೇ
ಮುಳುಗುತ್ತಿರುವವನಿಗೆ ಹುಲ್ಲು ಕಡ್ಡಿಯೂ ಆಸರೆ.
ಬೆಟ್ಟಕ್ಕೆ ಕಲ್ಲು ಹೊತ್ತ ಹಾಗೆ.
ಆಚಾರ್ಯರಿಗೆ ಮಂತ್ರಕ್ಕಿಂತ ಉಗುಳು ಜಾಸ್ತಿ
ಬೇರೆ ಉಣ್ಣೋಕಿಲ್ಲದಿದ್ದರೂ ಸಣ್ಣಕ್ಕಿ ಅನ್ನ ತಿಂದರು ;
ಸಾವಿರ ಸಲ ಗೋವಿಂದ ಅಂದರು, ಒಬ್ಬ ದಾಸಯ್ಯನಿಗೆ ಭಿಕ್ಷೆ ನೀಡಲಿಲ್ಲ
ಹಾಲಿನಲ್ಲಿ ಹುಳಿ ಹಿಂಡಿದಂತೆ
ಬಾಣಲೆಯಿಂದ ಬೆಂಕಿಗೆ
ಹಾಕು ಮಣೆ, ನೂಕು ಮಣೆ, ತಳ್ಳು ಮಣೆ, ಯಾಕ್ಮಣೆ
ಮಾತು ಆಡಿದರೆ ಹೋಯಿತು, ಮುತ್ತು ಒಡೆದರೆ ಹೋಯ್ತು.
ಎತ್ತು ಚಲೋದಾದರೆ ಇದ್ದ ಊರಲ್ಲೇ ಗಿರಾಕಿ.
ಕೀರ್ತಿಯೇ ಕೈಲಾಸ ಅಪಕೀರ್ತಿಯೇ ನರಕ
ಹತ್ತು ಕಟ್ಟೋ ಕಡೆ ಒಂದು ಮುತ್ತು ಕಟ್ಟು.
ತನ್ನ ಓಣೀಲಿ ನಾಯಿಯೇ ಸಿಂಹ
ಉತ್ತಮ ಹೊಲ ಮಧ್ಯಮ ವ್ಯಾಪಾರ ಕನಿಷ್ಠ ಚಾಕರಿ
ಅಡೆ ಮಡಕೆಯಲ್ಲ ಇಡೆ ಸಟ್ಟುಗವಲ್ಲ
ಮುಖಕ್ಕೆ ಮೂಗು ಚೆಂದ, ಮೂಗಿಗೆ ಮೇಲೆರಡು ಕಣ್ಣು ಚೆಂದ.
ಕೈ ಕೆಸರಾದರೆ ಬಾಯಿ ಮೊಸರು.
ಕಂಗಾಲಾದರೂ ಹಂಗಾಳಾಗಬಾರದು
ಒಡೆದ ಹಾಲು ಹೆಪ್ಪಿಗೆ ಬಂದೀತೇ
ಮಾತಿಗೆ ಮಾತುಗಳ ಓತು ಸಾಸಿರ ಉಂಟು
ಚೌಡಿ ಬಿಡಿಸಿದವರೆ ಹೆಣ ಹೊರಬೇಕು.
ಜಿನ ಧರ್ಮವೇ ಜೀವಧರ್ಮ ಮೂಕ ಪ್ರಾಣಿಯ ಕೊಲ್ಲದ್ದು ಜೀವಧರ್ಮ
ಇದ್ದ ಮಕ್ಕಳೇ ಎಣ್ಣೆ ಬೆಣ್ಣೆ ಕಾಣದಿರುವಾಗ ಮತ್ತೊಂದು ಕೊಡೋ ದೇವರೇ ಅಂದಂತೆ
ಅರ್ತಿಗೆ ಬಳೆ ತೊಟ್ಟು ಕೈ ಕೊಡವಿದರೆ ಹೋದೀತೆ
ಕರಣಗಳ ತಡೆದು ನಿಲಬಾರದು
ದಕ್ಷಿಣೆಗೆ ತಕ್ಕ ಪ್ರದಕ್ಷಿಣೆ
ಮಂತ್ರಿ ಇಲ್ಲದ ರಾಜ್ಯ ಕೀಲು ಮುರಿದ ಯಂತ್ರದಂತೆ
ಜಟ್ಟಿ ಜಾರಿದರೆ ಅದೂ ಒಂದು ಪಟ್ಟು
ಬ್ಬರ ಕೂಳು ಇನ್ನೊಬ್ಬರ ಕುತ್ತು.
ಯಾವ ಹುತ್ತದಲ್ಲಿ ಯಾವ ಹಾವು ಇರುತ್ತೊ
ದೇವರು ವರ ಕೊಟ್ಟರೂ ಪೂಜಾರಿ ವರ ಕೊಡ
ನಯಶಾಲಿ ಆದವನು ಜಯಶಾಲಿ ಆದಾನು
ಪಾಪಿ ಸಮುದ್ರ ಹೊಕ್ಕಿದರೂ ಮೊಳಕಾಲುದ್ದ ನೀರು.
ಕುರುಡು ಕಣ್ಣಿಗಿಂತ ಮೆಳ್ಳೆ ಗಣ್ಣು ವಾಸಿ
ಮೀಸೆ ಬ೦ದವಗೆ ದೇಶ ಕಾಣದು, ಮೊಲೆ ಬ೦ದವಳಿಗೆ ನೆಲ ಕಾಣದು.
ನೇಮ ಉಳ್ಳವನ ಕಂಡರೆ ಯಮನಿಗೂ ಭಯ
ಜಪ-ತಪ ಉಪವಾಸ ಇದ್ದರೆ ಅಂತಕನ ವಿಪರೀತ ತಪ್ಪೀತೆ
ಹಾರುವರ ಕೇರೀಲಿ ಹಬ್ಬ ಆದ್ರೆ ಮೂಳನಾಯಿಗೇನು ಓಡಾಟ
ಹೇಳೊದು ವೇದ ಹಾಕೊದು ಗಾಳ
ತನಗಿಲ್ಲದ್ದು ಎಲ್ಲಿದ್ದರೇನು
ಮಾಡಬಾರದ್ದು ಮಾಡಿದರೆ ಆಗಬಾರದ್ದು ಆಗುತ್ತೆ.
ಹಣ ಅಂದ್ರೆ ಹೆಣವೂ ಬಾಯಿ ಬಿಡ್ತದೆ
ಒಳ್ಳಿಹ ಬಳ್ಳಿ ಕಳ್ಳಿಯ ಹಬ್ಬಿತು
ಆಳಾಗಬಲ್ಲವನು ಅರಸನಾಗಬಲ್ಲ.
ತುಂಬಿದ ಕೊಡ, ತುಳುಕೋದಿಲ್ಲ
ಹೋಗು ಎನ್ನಲಾರದೇ ಹೊಗೆ ಹಾಕಿದರು
ಅಕ್ಕಿ ಮೇಲೆ ಆಸೆ, ನೆ೦ಟರ ಮೇಲೂ ಪ್ರೀತಿ.
ಅಕ್ಕ ಸತ್ತರೆ ಅಮಾಸೆ ನಿಲ್ಲದು,
ದುಡಿಮೆಯೇ ದುಡ್ಡಿನ ತಾಯಿ.
ಅಡ್ಡಗೋಡೆಯ ಮೇಲೆ ದೀಪ ಇಟ್ಟ ಹಾಗೆ.
ಶಿವ ಪೂಜೇಲಿ ಕರಡಿ ಬಿಟ್ಟಂಗೆ
ತೇಗಿ ತೇಗಿ ಬೀಗಿ ಬಿದ್ದ
ಸನ್ಯಾಸಿಗೆ ಯಾತರ ಕಳವಳ ಅಂದ್ರೆ ಅನ್ನದ್ದೊಂದೇ ಕಳವಳ.
ರೊಂಡಿಗೆ ಏಟು ಬಿದ್ರೆ ಮೊಂಡಿಗೆ ಮುಲಾಮು ಹಚ್ಚಿದರು
ಅಲಾ ಬಲಾ ಪಾಪಿ ತಲೀ ಮ್ಯಾಲೆ
ಸೆಟ್ಟಿ ಸಾಲ ಸತ್ತ ಮೇಲೆ ತಿಳೀತು
ಗಾಜಿನ ಮನೇಲಿರೋವ್ರು ಅಕ್ಕಪಕ್ಕದ ಮನೇ ಮೇಲೆ ಕಲ್ಲೆಸೆಯಬಾರದು
ಕುಚ ಹೇಮ ಶಸ್ತ್ರ ಸೋಂಕಿದಾಗ ಶುಚಿ ವೀರ ಧೀರರು ಅಚಲಿತರಾದರು
ಆಸೆ ಹೆಚ್ಚಿತು ಆಯಸ್ಸು ಕಮ್ಮಿ ಆಯಿತು
ಮೂರು ವರ್ಷದ ಬುದ್ಧಿ ನೂರು ವರುಷದ ತನಕ.
ಇಬ್ಬರ ಜಗಳ ಮೂರನೆಯವನಿಗೆ ಲಾಭ
ನಿಸ್ಸಹಾಯಕರ ಮೇಲೆ ಹುಲ್ಲು ಕಡ್ಡಿ ಸಹ ಬುಸುಗುಟ್ಟುತ್ತೆ.
ಮೂರೂ ಬಿಟ್ಟೋಳು ಊರಿಗೆ ದೊಡ್ಡೋಳು
ಅದೇನ ಅಂತಾರಲ ಹಂಗಾತು..
ನದೀನೇ ನೋಡದೆ ಇರೋನು ಸಮುದ್ರ ವರ್ಣನೆ ಮಾಡಿದ ಹಾಗೆ
ಅಮ್ಮನ ಮನಸ್ಸು ಬೆಲ್ಲದ ಹಾಗೆ ; ಆರಿದ್ರಾ ಹನಿ ಕಲ್ಲಿನ ಹಾಗೆ.
ಒಪ್ಪದಾ ಮಾತಾಡಿ ಕೋಪಕ್ಕೆ ತುತ್ತಾದ
ಎರಡೂ ಕೈ ಸೇರಿದರೆ ಚಪ್ಪಾಳೆ
ಹಿತವಿಲ್ಲದ ಗಂಡ ಹಿಂದಿದ್ದರೇನು ಮುಂದಿದ್ದರೇನು
ಅರಸನ ಕುದರೆ ಲಾಯದಲ್ಲೆ ಮುಪ್ಪಾಯಿತು
ಕೂತು ಉಣ್ಣೋನಿಗೆ ಕುಡಿಕೆ ಹೊನ್ನು ಸಾಲದು
ಕಾಣದಿರೋ ದೇವರಿಗಿಂತ ಕಾಣೋ ಭೂತಾನೇ ವಾಸಿ
ಹಾಲಿದ್ದಾಗ ಹಬ್ಬ ಮಾಡು ಹಲ್ಲಿದ್ದಾಗ ಕಡಲೆ ತಿನ್ನು
ಊರಿಗೆ ಉಪಕಾರಿ, ಮನೆಗೆ ಮಾರಿ
ಮಹಡಿ ಹತ್ತಿದ ಮೇಲೆ ಏಣಿ ಒದ್ದ ಹಾಗೆ
ಮೇಲೆ ಬಿದ್ದು ಬಂದೋಳು ಮೂರು ಕಾಸಿಗೂ ಕಡೆ
ತಲೇ ಕೂದಲು ನೆರೆಯಾದ ಮೇಲೆ ತಬ್ಬಿಕೊಂಡ ತಬ್ಬಲಿ ಮುರವ
ಹಾಗಲಕಾಯಿಗೆ ಬೇವಿನಕಾಯಿ ಸಾಕ್ಷಿ.
ಕೈಗೆ ಬ೦ದ ತುತ್ತು ಬಾಯಿಗೆ ಬರಲಿಲ್ಲ.
ಆಲಸಿ-ಮುಂಡೇದ್ಕೆ ಎರಡು ಖರ್ಚು, ಲೋಭಿ-ಮುಂಡೇದ್ಕೆ ಮೂರು ಖರ್ಚು
ಜಾಣನಿಗೆ ಮಾತಿನ ಪೆಟ್ಟು, ದಡ್ಡನಿಗೆ ದೊಣ್ಣೆ ಪೆಟ್ಟು.
ಪಾತ್ರವರಿತು ಜಗದ ಜಾತ್ರೆಗೆ ಸಲ್ಲಬೇಕು
ಹಾಲಿಗೆ ಹುಳಿ ಹಿಂಡಿದರೆ ಮೊಸರು, ಮಣ್ಣಿಗೆ ನೀರು ಹಾಕಿದರೆ ಕೆಸರು.
ಧೈರ್ಯವಿದ್ದವನಿಗೆ ದೈವವೂ ಅನುಕೂಲ.
ಬಸುರಲ್ಲಿ ಬಂದ ಕೂಸು ಮುದ್ದು
ಎಲ್ಲ ಕೆಡುಕಿಗೂ ಮೂಲ ಹೊಟ್ಟೆಕಿಚ್ಚು.
ಇಲಿ ಬ೦ತು ಅ೦ದರೆ ಹುಲಿ ಬ೦ತು ಎ೦ದರು.
ಕಣ್ಣಾರೆ ಕಂಡರೂ ಪರಾಂಬರಿಸಿ ನೋಡು
ತಗ್ಗು ದವಸಕ್ಕಾಗಿ ಹಗ್ಗ ಕೊಂಡು ಕೊಂಡ
ಕೊಟ್ಟುಣ್ಣದ ಗಂಟು ಪರರಿಗೆ ಬಿಟ್ಟು ಹೋದಂತೆ
ಒಕ್ಕಣ್ಣನ ರಾಜ್ಯದಲ್ಲಿ ಒಂದು ಕಣ್ಣು ಮುಚ್ಚಿಕೊಂಡು ನಡಿ

  ಭರತ ಹುಣ್ಣಿಮೆ ದಿನ ಸವದತ್ತಿ ಯಲ್ಲಮ್ಮನ ಜಾತ್ರೆ

ಕನ್ನಡ ಜನಪ್ರಿಯ ಗಾದೆಗಳ ಸಂಗ್ರಹ ಭಾಗ – ೧ ಕ್ಕೆ ಇಲ್ಲಿ ಕ್ಲಿಕ್ ಮಾಡಿ

ಕನ್ನಡ ಜನಪ್ರಿಯ ಗಾದೆಗಳ ಸಂಗ್ರಹ ಭಾಗ – ೨ ಕ್ಕೆ ಇಲ್ಲಿ ಕ್ಲಿಕ್ ಮಾಡಿ

ಕನ್ನಡ ಜನಪ್ರಿಯ ಗಾದೆಗಳ ಸಂಗ್ರಹ ಭಾಗ – ೩ ಕ್ಕೆ ಇಲ್ಲಿ ಕ್ಲಿಕ್ ಮಾಡಿ

ಕನ್ನಡ ಜನಪ್ರಿಯ ಗಾದೆಗಳ ಸಂಗ್ರಹ ಭಾಗ – ೪ ಕ್ಕೆ ಇಲ್ಲಿ ಕ್ಲಿಕ್ ಮಾಡಿ

ಕನ್ನಡ ಜನಪ್ರಿಯ ಗಾದೆಗಳ ಸಂಗ್ರಹ ಭಾಗ – ೫ ಕ್ಕೆ ಇಲ್ಲಿ ಕ್ಲಿಕ್ ಮಾಡಿ

  ಜಟ್ಟಿ ಜಾರಿ ಬಿದ್ದರು ಮೀಸೆ ಮಣ್ಣಾಗಲಿಲ್ಲ - ಕನ್ನಡ ಗಾದೆ

ಕನ್ನಡ ಜನಪ್ರಿಯ ಗಾದೆಗಳ ಸಂಗ್ರಹ ಭಾಗ – ೬ ಕ್ಕೆ ಇಲ್ಲಿ ಕ್ಲಿಕ್ ಮಾಡಿ

ಕನ್ನಡ ಜನಪ್ರಿಯ ಗಾದೆಗಳ ಸಂಗ್ರಹ ಭಾಗ – ೭ ಕ್ಕೆ ಇಲ್ಲಿ ಕ್ಲಿಕ್ ಮಾಡಿ

ಕನ್ನಡ ಜನಪ್ರಿಯ ಗಾದೆಗಳ ಸಂಗ್ರಹ ಭಾಗ – ೮ ಕ್ಕೆ ಇಲ್ಲಿ ಕ್ಲಿಕ್ ಮಾಡಿ

ಕನ್ನಡ ಜನಪ್ರಿಯ ಗಾದೆಗಳ ಸಂಗ್ರಹ ಭಾಗ – ೯ ಕ್ಕೆ ಇಲ್ಲಿ ಕ್ಲಿಕ್ ಮಾಡಿ

ಕನ್ನಡ ಜನಪ್ರಿಯ ಗಾದೆಗಳ ಸಂಗ್ರಹ ಭಾಗ – ೧೦ ಕ್ಕೆ ಇಲ್ಲಿ ಕ್ಲಿಕ್ ಮಾಡಿ

  ಶ್ರೀ ಜಗದ್ಗುರು ಮೌನೇಶ್ವರ ಇತಿಹಾಸ ವಿವರ

ಕನ್ನಡ ಜನಪ್ರಿಯ ಗಾದೆಗಳ ಸಂಗ್ರಹ ಭಾಗ – ೧೧ ಕ್ಕೆ ಇಲ್ಲಿ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *

Translate »