ಕಾಮಾಲೆ,ಮೂತ್ರಕೋಶ ಹಾಗು ಹೃದಯಕ್ಕೆ ಸಂಬಂಧಿಸದ ಇನ್ನು ಹಲವು ಕಾಯಿಲೆಗೆ ಈ ಹಣ್ಣು ತುಂಬ ಉಪಯುಕ್ತ..!
ಈ ಹಣ್ಣಿನ ಸೇವನೆಯಿಂದ ಹಲವು ಆರೋಗ್ಯಕಾರಿ ಲಾಭಗಳು ನಿಮಗೆ ಸಿಗಲಿದೆ. ಆದರೆ ನೀವು ಇದರ ಮಹತ್ವವನ್ನು ತಿಳಿದಿರುವುದಿಲ್ಲ. ಯಾವೆಲ್ಲ ಲಾಭಗಳು ಇವೆ ಅನ್ನೋದನ್ನ ನೀವೇ ಒಮ್ಮೆ ನೋಡಿ.
ಕಾಮಾಲೆ, ಯಕೃತ್ ವಿಕಾರ, ಗನೋರಿಯ,ಮೂತ್ರಕೋಶ ವ್ಯಾಧಿ, ಮೂತ್ರಾಷ್ಮರಿ,ಹೃದಯದ ಅನಿಯಮಿತ ಬಡಿತ…ಇತ್ಯಾದಿಗಳಲ್ಲಿ ಅನಾನಸಿನಿಂದ ಮಹತ್ತರವಾದ ಗುಣ ಕಂಡು ಬಂದಿದೆ
ಊಟದ ನಂತರ ಈ ಹಣ್ಣನ್ನು ಸೇವಿಸುವುದರಿಂದ ಜೀರ್ಣಶಕ್ತಿ ಹೆಚ್ಚುತ್ತದೆ.
ಅನನಾಸಿನಲ್ಲಿ ಹೇರಳವಾಗಿ ನೈಸರ್ಗಿಕ ಪೊಟ್ಯಾಸಿಯಂ ಇರುವುದರಿಂದ ಮೂತ್ರ ಕಟ್ಟುವಿಕೆ, ಉರಿ ಮೂತ್ರ ಮುಂತಾದ ರೋಗಗಳಲ್ಲಿ ಗುಣಕಾರಿ.
ಅನಾನಸ್ ಹಣ್ಣನ್ನು ನಿಯಮಿತವಾಗಿ ಸೇವಿಸುವುದರಿಂದ ಧೂಮಪಾನದಿಂದ ಉಂಟಾಗುವ ಅನೇಕ ದುಷ್ಪರಿಣಾಮಗಳು ದೂರವಾಗುತ್ತವೆ.
ಅನಾನಸ್ ಹಣ್ಣಿನ ರಸವನ್ನು ಕಜ್ಜಿ, ತುರಿಕೆ ಇದ್ದಲ್ಲಿ ಹಚ್ಚಿ ತಿಕ್ಕಿದರೆ ವಾಸಿಯಾಗುತ್ತವೆ.
ಅನಾನಸ್ ಹಣ್ಣಿಗೆ ಕರಿಮೆಣಸಿನ ಪುಡಿಯನ್ನು ಹಾಕಿ ಸೇವಿಸಿದರೆ ಕೆಮ್ಮು, ಕಫಾ ಕಡಿಮೆ ಆಗುತ್ತದೆ.
ಅನಾನಸ್ ಹಣ್ಣಿನ ಹೋಳುಗಳನ್ನು ಜೇನುತುಪ್ಪದೊಡನೆ ಸೇವಿಸುವುದರಿಂದ ಯಕೃತ್ತಿನ ದೋಷ ಮತ್ತು ಅರಿಶಿನ ಕಾಮಾಲೆ ಗುಣವಾಗುತ್ತದೆ.
ಅನಾನಸ್ ಹಣ್ಣಿನ ಹೋಳುಗಳಿಗೆ ಸ್ವಲ್ಪ ಕಾಳುಮೆಣಸಿನ ಪುಡಿಯನ್ನು ಹಚ್ಚಿ ಸೇವಿಸುವುದರಿಂದ ಆಮ್ಲಪಿತ್ತ ( ಅಸಿಡಿಟಿ ) ದೂರವಾಗುತ್ತದೆ.
ಅನಾನಸ್ ಹಣ್ಣನ್ನು ನಿಯಮಿತವಾಗಿ ಸೇವಿಸುವುದರಿಂದ ಗಂಟಲುಬೇನೆ ಗುಣವಾಗುತ್ತದೆ. ಪ್ರತಿದಿನ ತಾಜಾ ಅನಾನಸ್ ಹಣ್ಣನ್ನು ಸೇವಿಸುವುದರಿಂದ ಹೃದಯದ ದುರ್ಬಲತೆ ದೂರವಾಗುತ್ತದೆ.
ಮೂತ್ರ ಕಟ್ಟುವುದು, ಪಿತ್ತಕೋಶ ಊದಿಕೊಳ್ಳುವುದು, ಕಣ್ಣಿನ ಸುತ್ತಮುತ್ತ ಊದಿಕೊಳ್ಳುವುದು ಮುಂತಾದ ತೊಂದರೆಗಳಿಗೆ ತಾಜಾ ಅನಾನಸ್ ಹಣ್ಣನ್ನು ತಿಂದು ಹಾಲು ಕುಡಿಯಬೇಕು. ಬೇರೆ ಏನನ್ನೂ ಸೇವಿಸಬಾರದು. ಹೀಗೆ ಮಾಡುವುದರಿಂದ ಒಂದು ವಾರದಲ್ಲಿ ಗುಣವಾಗುವುದು.